ಮನೆ-ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಕ್ಕೆ ಚಾಲನೆ
ವಿಜಯಪುರ 30: ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಗೆ ಮಂಗಳವಾರ ಚಾಲನೆ ನೀಡಲಾಯಿತು. ಈ ಹಿನ್ನೆಲೆಯಲ್ಲಿ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ಆನಂದ್ ಕೆ. ಅವರ ನಿವಾಸಕ್ಕೆ ಭೇಟಿ ನೀಡಿ ಎನ್ಯೂಮರೇಷನ್ (ಗಣತಿ) ನಮೂನೆಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ವಲಯ ಆಯುಕ್ತ ಮೋಹನ್ ಜಾಧವ್, ಮತಗಟ್ಟೆ ಮೇಲ್ವಿಚಾರಕಿ ಜಯಶ್ರೀ ಹಿರೇಮಠ ಹಾಗೂ ಬಿಎಲ್‌ಒ ಜಯವಂತ ಚಲವಾದಿ ಉಪಸ್ಥಿತರಿದ್ದರು.