ಸೌದಿ ಅರೇಬಿಯಾ ಬಸ್ ದುರಂತದಲ್ಲಿ ಹುಬ್ಬಳ್ಳಿ ವ್ಯಕ್ತಿ ಸಾವು
Hubballi man dies in Saudi Arabia bus accident
ಧಾರವಾಡ ನ.18: ಸೌದಿ ಅರೇಬಿಯಾದ ಮುಫ್ರಿಹತ್ ಬಳಿ ಸೋಮವಾರ ಮುಂಜಾನೆ ಸಂಭವಿಸಿದ ಬಸ್ ದುರಂತದಲ್ಲಿ ಹುಬ್ಬಳ್ಳಿಯ ಗಣೇಶ ಪೇಟೆ ನಿವಾಸಿ ಅಬ್ದುಲ್ ಘಣಿ ಶಿರಹಟ್ಟಿ (55) ಮೃತಪಟ್ಟಿದ್ದು, ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಎಸ್.ಲಾಡ್ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ. ಮಕ್ಕಾದಿಂದ ಮದೀನಾಗೆ ತೆರಳುತ್ತಿದ್ದ ಉಮ್ರಾ ಯಾತ್ರಿಕರಿದ್ದ ಬಸ್ ಸೌದಿ ಅರೇಬಿಯಾದ ಮುಫ್ರಿಹತ್ ಬಳಿ ಸೋಮವಾರ ಮುಂಜಾನೆ ಡೀಸೆಲ್ ಟ್ಯಾಂಕರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 45 ಮಂದಿ ಭಾರತೀಯ ಯಾತ್ರಿಕರು ಮೃತಪಟ್ಟಿದ್ದರು. ದುರಂತದಲ್ಲಿ ಮೃತಪಟ್ಟವರಲ್ಲಿ ಅಬ್ದುಲ್ ಘನಿ ಶಿರಹಟ್ಟಿ ಅವರು ಕೂಡ ಸೇರಿದ್ದಾರೆ ಎಂಬುದು ದುಃಖಕರ ವಿಷಯ. ಅವರ ಕುಟುಂಬಕ್ಕೆ ನನ್ನ ಸಂತಾಪಗಳು ಎಂದು ಸಚಿವರು ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 