ಮೇ 31ರಂದು ಗದಗದಲ್ಲಿ ಬಸವಾದಿ ಶಿವಶರಣರ ಬೃಹತ್ ಹಿಂದೂ ಸಮಾವೇಶ

ಮೇ 31ರಂದು ಗದಗದಲ್ಲಿ ಬಸವಾದಿ ಶಿವಶರಣರ ಬೃಹತ್ ಹಿಂದೂ ಸಮಾವೇಶ  Huge Hindu convention of Basavadi Shiv Sharanas in Gadag on May 31st

ಶಿರಹಟ್ಟಿ   24: ಹಿಂದೂ ಸರ್ವ ಸಮಾಜಗಳ ಒಕ್ಕೂಟದ ವತಿಯಿಂದ ಬಸವಾದಿ ಶಿವಶರಣರ ಬೃಹತ್ ಹಿಂದೂ ಸಮಾವೇಶ ಮೇ 31ರ ರವಿವಾರ ಗದಗ ನಗರದ ವಿಡಿಎಸ್ಟಿಸಿ ಮೈದಾನದಲ್ಲಿ ನಡೆಯಲಿದ್ದು, ಎಲ್ಲಾ ಸಮಾಜದ ಹಿಂದೂ ಕಾರ್ಯಕರ್ತರು ಹಾಗೂ ರೈತರು ಪಾಲ್ಗೊಳ್ಳಬೇಕೆಂದು ಸಮಾವೇಶದ ಸಂಚಾಲಕ ರಾಜು ಖಾನಪ್ಪನವರ ಕರೆ ನೀಡಿದರು.ಸ್ಥಳೀಯ ಫಕೀರೇಶ್ವರ ನಗರದ ಟೀಚರ್ ಸೊಸೈಟಿಯಲ್ಲಿ ಶನಿವಾರ ನಡೆದ ಸಮಾವೇಶದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಇದೇ ರವಿವಾರ ಹಮ್ಮಿಕೊಳ್ಳಲಾದ ಬೃಹತ್ ಹಿಂದೂ ಸಮಾವೇಶದಲ್ಲಿ ಹಿಂದೂಗಳನ್ನು ಜಾಗೃತಿಗೊಳಿಸಲು ಕನ್ಹೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಶ್ರೀಗಳು ಆಗಮಿಸಲಿದ್ದಾರೆ.

ಸನಾತನ ಹಿಂದೂ ಧರ್ಮವನ್ನು ಹತ್ತಿಕ್ಕುವ ಹುನ್ನಾರ ನಡೆಸುತ್ತಿರುವ ಕೆಲ ಪಟ್ಟಭದ್ರ ಹಿತಾಸಕ್ತಿಗಳಿಗೆ ತಕ್ಕ ಪಾಠ ಕಲಿಸಲು ಈ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಅಲ್ಲದೇ ಸಾವಯವ ಕೃಷಿ ಬಗ್ಗೆ ರೈತರಿಗೆ ಸಲಹೆ ನೀಡಲು ಆಗಮಿಸುತ್ತಿದ್ದು, ಹಿಂದೂಗಳು ಹಾಗೂ ರೈತರು ಈ ಸಮಾವೇಶದ ಸದುಪಯೋಗ ಪಡೆದುಕೊಳ್ಳಬೇಕೆಂದು ಹೇಳಿದರು.ಹಿಂದೂ ಸಂಘಟನೆಯ ಮುಖಂಡ ಸಂತೋಷ ಕುರಿ ಮಾತನಾಡಿ, ಮೇ 31ರ ರವಿವಾರದಂದು ಮಧ್ಯಾಹ್ನ 3:30ಕ್ಕೆ ಭೂಮರಡ್ಡಿ ಸರ್ಕಲ್‌ನಿಂದ ಕುಂಭ ಮೆರವಣಿಗೆ ಆರಂಭವಾಗಲಿದ್ದು, ಮೆರವಣಿಗೆಯಲ್ಲಿ 2 ರಿಂದ 3 ಸಾವಿರ ಮಹಿಳೆಯರು ಭಾಗವಹಿಸಲಿದ್ದಾರೆ. ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಸಂಚರಿಸಿ ಸಂಜೆ 5.30ಕ್ಕೆ ವಿಡಿಎಸ್ಟಿ ಮೈದಾನದಲ್ಲಿ ಬೃಹತ್ ಸಮಾವೇಶ ನಡೆಯಲಿದೆ. ಪ್ರಸ್ತುತ ಸಮಾವೇಶದಲ್ಲಿ 25ರಿಂದ 30 ಸಾವಿರ ಜನ ಭಾಗವಹಿಸುವ ನೀರೀಕ್ಷೆಯಿದೆ.  

300ಕ್ಕೂ ಹೆಚ್ಚು ವಿವಿಧ ಮಠಗಳ ಮಠಾಧೀಶರು ಸಮಾವೇಶಕ್ಕೆ ಆಗಮಿಸಲಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಹಿಂದೂಗಳು ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಹೇಳಿದರು.ಈ ಸಂದರ್ಭದಲ್ಲಿ ಶ್ರೀಧರ್ ಕುಲಕರ್ಣಿ, ರಾಜೀವರಡ್ಡಿ ಬೊಮ್ಮನಕಟ್ಟಿ,ವೆಂಕಟೇಶ್ ಕುಲಕರ್ಣಿ, ತಿಪ್ಪಣ್ಣ ಕೊಂಚಗೇರಿ, ಯಲ್ಲಪ್ಪಗೌಡ ಅಣ್ಣಿಗೇರಿ , ರಾಮಣ್ಣ ಕಂಬಳಿ, ಬಸವರಾಜ್ ತುಳಿ, ಗೂಳಪ್ಪ ಕರಿಗಾರ, ಪರಶುರಾಮ್ ಡೊಂಕಬಳ್ಳಿ, ನೀಲಪ್ಪ ಖಾನಾಪುರ , ನಾಗರಾಜ್ ಇಂಗಳಗಿ, ಫಕೀರೇಶ ಕರಿಗಾರ್, ಸಂತೋಷ ಸೊಂಟನೂರ, ವಿರುಪಾಕ್ಷಿ ಹಿರೇಮಠ, ದೇವು ಪೂಜಾರ ಸೇರಿದಂತೆ ಮುಂತಾದವರು ಇದ್ದರು.