ಚಿಕ್ಕೋಡಿ

ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಬೃಹತ್ ರಕ್ತದಾನ ಶಿಬಿರ

ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಬೃಹತ್ ರಕ್ತದಾನ ಶಿಬಿರ

ಚಿಕ್ಕೋಡಿ: ಸ್ವಾತಂತ್ರೋತ್ಸವದ ೭೫ನೇ ವರ್ಷಾಚರಣೆ ಹಿನ್ನೆಲೆಯಲ್ಲಿ ಚಿಕ್ಕೋಡಿ ತಾಲೂಕಿನ ಕೆರೂರು ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಗುರುವಾರ ಬೃಹತ್ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಚಿಕ್ಕೋಡಿಯ ಪಪೂ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಪಾಂಡರಂಗ ಐ ಭಂಡಾರೆ ಅವರು ಸಸಿಗೆ ನೀರು ಹಾಕುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು, ರಕ್ತದಾನದಿಂದ ಮತ್ತೊಬ್ಬರ ಜೀವ ಉಳಿಸಬಹುದು. ಮಾತ್ರವಲ್ಲ, ರಕ್ತದಾನ ಮಾಡುವುದರಿಂದ ಆರೋಗ್ಯಕ್ಕೆ ಯಾವುದೇ ಹಾನಿಯಾಗುವುದಿಲ್ಲ. ಮತ್ತೊಬ್ಬ ಜೀವ ಮತ್ತು ಜೀವನ ಉಳಿಸಲು ಇದೊಂದು ಉತ್ತಮ ಕಾರ್ಯ. ಎನ್‌ಎಸ್‌ಎಸ್ ಘಟಕ ಇಂತಹ ಸಮಾಜಿಮುಖಿ ಕಾರ್ಯವನ್ನು ಹಮ್ಮಿಕೊಂಡಿರುವುದು ಶ್ಲಾಘನೀಯವಾದ ವಿಚಾರ ಎಂದು ಹೇಳಿದರು.

ಈ ಸಂದರ್ಭದಲ್ಲಿ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಜ್ಯೋ. ಪಾಟೀಲ, ಗ್ರಾಪಂ ಅಧ್ಯಕ್ಷರಾದ ಪುಷ್ಪಾ ರವೀಂದ್ರ ಪಾಟೀಲ, ಉಪಾಧ್ಯಕ್ಷರಾದ ವಿಠ್ಠಲ ವಾಳಕೆ, ವಿರೇಂದ್ರ ಪಾಟೀಲ, ರವೀಂದ್ರ ಪಾಟೀಲ, ಮಹೇಶ ಪಾಟೀಲ, ರವಿ ಯಾದವ, ಸಂಬಾಜಿ ಹಕ್ಯಾಗೋಳ ಸೇರಿದಂತೆ ಸ್ವಯಂ ಸೇವಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಪ್ರಾಚಾರ್ಯ ಎಂ.ಆರ್.ಭಾಗಾಯಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಕೊಂಡಿದ್ದರು. ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿ ಶ್ರೀಶೈಲ ತಿ. ಕೋಲಾರ ನಿರೂಪಿಸಿದರು. ವಿವಿಧ ಸಂಘಟನೆಯ ಪದಾಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಗ್ರಾಮಸ್ಥರು ರಕ್ತದಾನ ಮಾಡಿದರು.

ಸುದ್ದಿ ಓದಿ