ಮೇ.3 ಕ್ಕೆ ’ಮುದ್ದೇಬಿಹಾಳ’ದಲ್ಲಿ ಬೃಹತ್ ಉದ್ಯೋಗ ಮೇಳ
Huge job fair in Muddebihal on May 3
ಮುದ್ದೇಬಿಹಾಳ 30: ಬಿಎಎಸ್ ಇಂಟರ್ನ್ಯಾಷನಲ್ ಮುದ್ದೇಬಿಹಾಳ ವತಿಯಿಂದ ಬಿಎಎಸ್ ಸ್ವಾಪಿಂಗ್ ಸಲ್ಯೂಷನ್ ಕಂಪನಿ, ಐಪೋನ್ ಕಂಪನಿ ಸೇರಿದಂತೆ ವಿವಿಧ ಕಂಪನಿಗಳ ಆಶ್ರಯದಲ್ಲಿ ಮೇ 3 ರಂದು ಬೆಳಿಗ್ಗೆ 10ಕ್ಕೆ ಪಟ್ಟಣದ ಆಲಮಟ್ಟಿ ರಸ್ತೆಯ ಹೊರವಲಯದಲ್ಲಿ ಬರುವ ಬಿಎಎಸ್ ಇಂಟರ್ನ್ಯಾಷನಲ್ ಶಾಲೆಯಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ.
ನಿರುದ್ಯೋಗ ಅಭ್ಯರ್ಥಿಗಳಿಗೆ ಇದೊಂದು ಸುವರ್ಣ ಅವಕಾಶ ಎಂದು ಶಾಲೆಯ ಆಡಳಿತಾಧಿಕಾರಿ ಪ್ರಭುಗೌಡ ಬಿರಾದಾರ ಹೇಳಿದರು. ರವಿವಾರ ನಡೆಯುವ ಬೃಹತ್ ಉದ್ಯೋಗ ಮೇಳದಲ್ಲಿ ಸುಮಾರು 10ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಲಿವೆ. 2 ಸಾವಿರಕ್ಕೂ ಹೆಚ್ಚು ಉದ್ಯೋಗಗಳು ಲಭಿಸಲಿವೆ. ಈ ಬಾರಿ ಮಹಿಳಾ ಅಭ್ಯರ್ಥಿಗಳಿಗೂ ಆದ್ಯತೆ ನೀಡಲಾಗಿದೆ ಎಂದು ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.ಐಫೋನ್, ಹೋಂಡಾ, ಟಾಟಾ, ಅಶೋಕ ಲೇಲ್ಯಾಂಡ್, ಎಲೆಕ್ಟ್ರಾನಿಕ್, ಮಹೇಂದ್ರ ಕಂಪನಿ ಸೇರಿದಂತೆ ಹಲವು ಕಂಪನಿಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಲಿವೆ. 100 ಕ್ಕೂ ಹೆಚ್ಚು ಅಭ್ಯರ್ಥಿಗಳು ಈಗಾಗಲೇ ನೋಂದಣಿ ಮಾಡಿಕೊಂಡಿದ್ದಾರೆ. ಉದ್ಯೋಗ ಮೇಳದಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶದ ಜತೆಗೆ ಉಪಾಹಾರ, ಊಟದ ವ್ಯವಸ್ಥೆ ಮಾಡಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳನ್ನು ಬಿಎಎಸ್ ಸ್ಟಾಫಿಂಗ್ ಸಲ್ಯೂಷ್ ಮೂಲಕ ಅಸೆಂಬ್ಲಿ ವರ್ಕರ್ಸ, ಪಿಕರ್ಸ್ ಮತ್ತು ಪ್ಯಾಕರ್ಸ, ಸಹಾಯಕರು ಎಂದು ವಿಂಗಡಿಸಿ ವಿವಿಧ ಕಂಪನಿಗಳಿಗೆ ಕಳುಹಿಸಿ ಕೊಡಲಾಗುತ್ತದೆ ಎಂದು ತಿಳಿಸಿದರು.ವಿವಿಧ ಕಂಪನಿಗಳಿಗೆ ನಮ್ಮ ಬಿಎಎಸ್ ಸ್ಟಾಪಿಂಗ್ ಸಲ್ಯೂಷನ್ ಮೂಲಕ ಆಯ್ಕೆಯಾದ ಅಭ್ಯರ್ಥಿಗಳನ್ನು ಕಳುಹಿಸಲಾಗುವುದು.
ಆರಂಭಿಕವಾಗಿ ಕನಿಷ್ಠ 16500 ರೂ ಸಂಬಳದಿಂದ ಪ್ರಾರಂಭವಾಗುತ್ತದೆ. ಅಭ್ಯರ್ಥಿಗಳ ವಿದ್ಯಾರ್ಹತೆ ಅನುಗುಣವಾಗಿ ಉತ್ತಮ ಸಂಬಳವಿದ್ದು, ಇಎಸ್ಐ ಮತ್ತು ಪಿಎಫ್ ಸೌಲಭ್ಯ, ಉಚಿತ ವಸತಿ, ಓವರ್ ಟೈಮ್ ಕೆಲಸಕ್ಕೆ ಪೋತ್ಸಾಹಧನ ಇರುತ್ತದೆ. ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರು, ಕೋಲಾರ, ದೊಡ್ಡಬಳ್ಳಾಪುರ, ತಮಿಳುನಾಡು ಸ್ಥಳಗಳಲ್ಲಿ ಕಾರ್ಯನಿರ್ವಹಿಸಬಹುದಾಗಿದೆ. ಎಸ್.ಎಸ್.ಎಲ್ ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಯಾವುದೇ ಪದವಿ, ಸ್ನಾತಕೋತ್ತರ ಪದವಿ ಉತ್ತೀರ್ಣ/ ಅನುತ್ತೀರ್ಣ ಆದ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ.ಈ ಸಂದರ್ಭದಲ್ಲಿ ಶಾಲಾ ಸಮನ್ವಯ ಅಧಿಕಾರಿ ಸತೀಶ್ ವಾಲಿಕಾರ ಮಾತನಾಡಿ, ಬಿಎಎಸ್ ಇಂಟರ್ನ್ಯಾಷನಲ್ ಸ್ಕೂಲ್ ಸಿಬಿಎಸ್ ಶೈಕ್ಷಣಿಕ ಶಾಲೆಗೆ ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದಿದೆ ಎಂದು ಹರ್ಷ ವ್ಯಕ್ತಪಡಿಸಿದರು.
ಈ ವೇಳೆ ಬಿಎಎಸ್ ಸಂಸ್ಥೆಯ ಕಾರ್ಯದರ್ಶಿ ಸುಮಂಗಲಾ ಬಿರಾದಾರ ಇದ್ದರು.
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು 