ಸಂಚರಿಸುತ್ತಿದ್ದ ರಾಜ್ಯ ಸಾರಿಗೆ ಸಂಸ್ಥೆಯ ಬಸ್ಸಿಗೆ ಬೆಂಕಿ : ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು, ಸಂಪೂರ್ಣ ಸುಟ್ಟು ಭಸ್ಮವಾದ ಬಸ್
ಬೆಳಗಾವಿ : ಸಂಚರಿಸುತ್ತಿದ್ದ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯ ಬಸ್ಸಿಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಬಸ್ಸು ಸಂಪೂರ್ಣವಾಗಿ ಸುಟ್ಟು ಕರಕಲಾಗಿರುವ ಘಟನೆ ಜಿಲ್ಲೆಯ ಹತ್ತರಗಿ ಟೋಲ್ ನಾಕಾ ಸಮೀದ ಪೂನಾ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಸಂಜೆ ಜರುಗಿದೆ.
ಕೊಲ್ಲಾಪೂರ ಕಡೆಯಿಂದ ಬೆಳಗಾವಿ ಕಡೆಗೆ ಗುರುವಾರ ಸಂಜೆ ವೇಲೆ ರಾಜ್ಯ ಸಾರಿಗೆ ಸಂಸ್ಥೆಯ ಬಸ್ಸು ಹುಕ್ಕೇರಿ ತಾಲೂಕಿನ ಹಂಚಿನಾಳ ಕ್ರಾಸ್ ಬಳಿ ಇರುವ ಗುಲಾಬಶಾವಲಿ ದರ್ಗಾ ಬಳಿಯ ಪೂನಾ ಬೆಂಗಳೂರು ರಾಷ್ಟ್ರೀಯ 4ರಲ್ಲಿ ಸಂಚರಿಸುತ್ತಿರುವಾಗ ಆಕಸ್ಮೀಕವಾಗಿ ಬಸ್ಸಿಗೆ ಬೆಂಕಿ ತಗುಲಿಕೊಂಡಿದೆ. ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ಬಸ್ಸಿನಿಂದ ಕೆಳಗೆ ಇಳಿದು ಓಡಿ ಹೋಗಿದ್ದಾರೆ ಎನ್ನಲಾಗಿದೆ. ಬಸ್ಸಿನ ಚಾಲಕ ಮತ್ತು ನಿರ್ವಾಹಕನ ಸಮಯ ಪ್ರಜ್ಞೆಯಿಂದ ಅದೃಷ್ಟವತ ಯಾವದೇ ಸಾವು ನೋವು ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.
ಘಟನೆಯ ವಿಷಯ ತಿಳಿದ ಅಗ್ನಿಶಾಮಕದಳದ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಬಸ್ಸಿನ ಬೆಂಕಿ ನೊಂದಿಸುವಷ್ಟರಲ್ಲಿ ಬಸ್ಸು ಸಂಪೂರ್ಣ ಸುಟ್ಟು ಕರಕಲಾಗಿದೆ. ಯಮಕನಮರಡಿ ಸಿಪಿಐ ರಮೇಶ ಛಾಯಾಗೋಳ ಮತ್ತು ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಯಮಕನಮರಡಿ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.