ಹೂವಿನ ಹಡಗಲಿ

ಮಾನವ ಹಕ್ಕುಗಳ ದಿನಾಚರಣೆ: ಪ್ರತಿಜ್ಞಾವಿಧಿ ಬೋಧನೆ

ಮಾನವ ಹಕ್ಕುಗಳ ದಿನಾಚರಣೆ: ಪ್ರತಿಜ್ಞಾವಿಧಿ ಬೋಧನೆ

ಹೂವಿನ ಹಡಗಲಿ 10: ಸಮಾನ ಕಾನೂನು ರಕ್ಷಣೆ, ಸಮಾನತೆಯ ಹಕ್ಕು, ಶೋಷಣೆ ರಹಿತ ಆರೋಗ್ಯಪೂರ್ಣ ಪರಿಸರದಲ್ಲಿ ಜೀವನ ನಡೆಸುವ ಹಕ್ಕು ಪ್ರತಿಯೊಬ್ಬರಿಗೂ ಸೇರಿದೆ ಎಂದು ತಹಶೀಲ್ದಾರ್ ಕೆ ಶರಣಮ್ಮ ಹೇಳಿದರು. ಪಟ್ಟಣದ ಲಾಲ್ ಬಹದ್ದೂರ್ ಶಾಸ್ತ್ರಿ ವೃತ್ತದಲ್ಲಿ ಭಾನುವಾರ ಜಿಲ್ಲಾ ಹಾಗೂ ತಾಲೂಕು ಆಡಳಿತ ವತಿಯಿಂದ ಆಯೋಜಿಸಿದ್ದ ಮಾನವ ಹಕ್ಕು ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರತಿಜ್ಞಾವಿಧಿ ಬೋಧಿಸಿ ಅವರು ಮಾತನಾಡಿದರು.  

1993ರ ಅನ್ವಯ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ರಾಜ್ಯ ಮಾನವ ಹಕ್ಕುಗಳ ಆಯೋಗ ರಚನೆ ಮಾಡಲಾಗಿದೆ. ಪ್ರತಿಯೊಬ್ಬ ಪ್ರಜೆಯ ಮಾನವ ಹಕ್ಕುಗಳನ್ನು ರಕ್ಷಿಸುವುದು ಎಲ್ಲಾ ಸಂಸ್ಥೆಗಳ ಆದ್ಯ ಕರ್ತವ್ಯವಾಗಿದೆ ಎಂದರು. ಯಾವುದೇ ಕಚೇರಿ ಸಂಸ್ಥೆಯಿಂದಾಗಲೀ ಯಾವುದೇ ರೀತಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯಾದ ಪಕ್ಷದಲ್ಲಿ ಮಾನವ ಹಕ್ಕುಗಳ ರಕ್ಷಣೆ ಮಾಡಲು ವಿಫಲವಾಗಿರುವ ಸಂದರ್ಭಗಳಲ್ಲಿ ಮಾನವ ಹಕ್ಕುಗಳ ಆಯೋಗ ಸಂಪರ್ಕಿಸಿರಿ ಎಂದರು.  

ಪ್ರಾಚಾರ್ಯ ಎ ಕೊಟ್ರಗೌಡ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ವಿ ಹನುಮಂತಪ್ಪ ದಿನಾಚರಣೆ ಕುರಿತು ಮಾಹಿತಿ ನೀಡಿದರು. ಕ್ಷೇತ್ರ ಸಮನ್ವಯಾಧಿಕಾರಿ ಎ ಕೋಟೆಪ್ಪ, ಸಿಡಿಪಿಒ ರಾಮನಗೌಡ, ಉಪಪ್ರಾಚಾರ್ಯರಾದ ಪಿ ಪ್ರಕಾಶ್, ಕೆ ಚಂದ್ರೇಗೌಡ, ಸುರೇಶ ಅಂಗಡಿ, ಶಾಲಾ ಶಿಕ್ಷಣ ಇಲಾಖೆಯ ಸಿ ಆರ್ ಪಿ, ಪುರಸಭೆಯ ಅಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು, ಇತರೆ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು. ಎಸ್ ಕೆ ಜಿ ಜಿ ಪ್ರೌಢಶಾಲೆಯ ವಿದ್ಯಾರ್ಥಿನಿಯರು ಭಾಗವಹಿಸಿದ್ದರು. 


ಸುದ್ದಿ ಓದಿ