ಮದ್ಯ ನಿಷೇಧಕ್ಕೆ ಒತ್ತಾಯಿಸಿ ರೈಲು ನಿಲ್ದಾಣದಲ್ಲಿ ನೂರಾರು ಮಹಿಳೆಯರಿಂದ ಪ್ರತಿಭಟನೆ
ಬೆಂಗಳೂರು, ನ 7: ರಾಜ್ಯದಲ್ಲಿ ಮದ್ಯ ನಿಷೇಧ ಮಾಡಬೇಕು ಎಂದು ಒತ್ತಾಯಿಸಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿರುವ ನೂರಾರು ಮಹಿಳೆಯರು ಬೆಂಗಳೂರು ಮೆಜಿಸ್ಟಿಕ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಸ್ವಾತಂತ್ರ ಉದ್ಯಾನವನದಲ್ಲಿ ಪ್ರತಿಭಟನೆಯನ್ನು ಆಯೋಜಿಸಲಾಗಿತ್ತಾದರೂ, ಅವರಿಗೆ ಅಲ್ಲಿಗೆ ತಲುಪಲು ಪೊಲೀಸರು ಅಡ್ಡಿಪಡಿಸಿದ್ದರಿಂದ ಪೊಲೀಸರು ಮತ್ತು ಮಹಿಳೆಯರ ನಡುವೆ ವಾಗ್ವಾದಕ್ಕೆ ಕಾರಣವಾಯಿತು. ಅಕ್ರೋಶಗೊಂಡ ಮಹಿಳೆಯರು ರೈಲ್ವೆ ನಿಲ್ದಾಣದಲ್ಲಿಯೇ ಕುಳಿತು ಪ್ರತಿಭಟನೆ ನಡೆಸಿದರು. ಪ್ರತಿಭಟನೆ ನಡೆಸುವುದಾಗಿ ತಿಂಗಳ ಮುಂಚೆಯೇ ಪೊಲೀಸರಿಗೆ ಅಜರ್ಿ ಸಲ್ಲಿಸಿ ಅನುಮತಿಯನ್ನು ಪಡೆಯಲಾಗಿದೆ. ಆದರೆ ಪ್ರತಿಭಟನಾಕಾರರ ಸಂಖ್ಯೆ ಹೆಚ್ಚಿದೆ ಎಂಬ ಕಾರಣಕ್ಕೆ ಪೊಲೀಸರು ಮೆರವಣಿಗೆಗೆ ಅವಕಾಶ ನೀಡುತ್ತಿಲ್ಲ. ಈ ವರ್ತನೆ ಖಂಡನೀಯ' ಎಂದು ಮುಖಂಡರು ಆರೋಪಿಸಿದರು. . ರಾಜ್ಯದಲ್ಲಿ ಮದ್ಯಮಾರಾಟ ನಿಷೇಧ ಮಾಡಬೇಕು. ಹಂತಹಂತವಾಗಿ ಮಾಡುವುದಾದರೆ ಮಾಹಿತಿ ನೀಡಬೇಕು. ಪ್ರತಿಗ್ರಾಮದಲ್ಲಿ ಸಮಿತಿ ರಚಿಸಬೇಕು ಅದರಲ್ಲಿ ಮಹಿಳಾ ಸದಸ್ಯರ ಸಂಖ್ಯೆ ಹೆಚ್ಚಿರಬೇಕು. ಗ್ರಾಮದಲ್ಲಿ ಮದ್ಯ ಮಾರಾಟ ನಿಷೇಧಿಸುವ, ಅಕ್ರಮ ಮದ್ಯ ಮಾರಾಟ ತಡೆಯುವ ಅಧಿಕಾರ ಸಮಿತಿಗೆ ಕೊಡಬೇಕು ಎಂದು ಒತ್ತಾಯಿಸಿದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 