ಪತಿ-ಪತ್ನಿಗೆ ಒಂದೇ ದಿನ ಪಿ.ಹೆಚ್.ಡಿ ಪದವಿ ಪ್ರದಾನ
Husband and wife awarded PhD degrees on the same day
ಲೋಕದರ್ಶನ ವರದಿ
ಧಾರವಾಡ 23 : ನಗರದ ವಿದ್ಯಾಗಿರಿಯ ಜೆ.ಎಸ್.ಎಸ್ ಬನಶಂಕರಿ ಕಲಾ, ವಾಣಿಜ್ಯ ಹಾಗೂ ಎಸ್.ಕೆ ಗುಬ್ಬ ಪದವಿ ಕಾಲೇಜಿನ ದೈಹಿಕ ಶಿಕ್ಷಣದ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿರುವ ಡಾ. ಜಿನಪ್ಪ ಕುಂದಗೋಳ ಇವರಿಗೆ “ಪುರುಷ ಕುಸ್ತಿಪಟುಗಳ ಕಾರ್ಯಕ್ಷಮತೆಗೆ ಸಂಬಂಧಿಸಿದಂತೆ ದೈಹಿಕ, ಮಾನವಶಾಸ್ತ್ರೀಯ ಮತ್ತು ಮನೋವೈಜ್ಞಾನಿಕ ಅಸ್ಥಿರಗಳ ಅಧ್ಯಯನ” ವಿಷಯದ ಮೇಲೆ ಪ್ರಬಂಧ ಮಂಡಿಸಿದ್ದಕ್ಕಾಗಿ ಮತ್ತು ಅದೇ ಕಾಲೇಜಿನಲ್ಲಿ ಇತಿಹಾಸ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿರುವ ಅವರ ಧರ್ಮಪತ್ನಿ ವೈಶಾಲಿ ಮುನವಳ್ಳಿ ಇವರಿಗೆ ಉತ್ತರ ಕರ್ನಾಟಕದಲ್ಲಿನ ಜೈನ ಧರ್ಮದ ಕೇಂದ್ರಗಳು ವಿಷಯದ ಮೇಲೆ ಪ್ರಬಂಧ ಮಂಡಿಸಿದ್ದಕ್ಕಾಗಿ ಪತಿ-ಪತ್ನಿಗೆ ಒಂದೇ ದಿನ ಕರ್ನಾಟಕ ವಿಶ್ವವಿದ್ಯಾಲಯವು ಗೌರವ ಡಾಕ್ಟರೇಟ ಪದವಿ ಪ್ರದಾನ ಮಾಡಿ ಗೌರವಿಸಿದೆ. ಡಾ. ಜಿನ್ನಪ್ಪ ಕುಂದಗೋಳ ಇವರಿಗೆ ಕ.ವಿ.ವಿ ದೈಹಿಕ ಶಿಕ್ಷಣ ಅಧ್ಯಯನ ವಿಭಾಗದ ಅಧ್ಯಕ್ಷರು ಮತ್ತು ನಿರ್ದೇಶಕರು ಆದ ಡಾ. ಎಂ.ಬಿ ಪಾಟೀಲ್‌ರವರು ಮಾರ್ಗದರ್ಶನ ನೀಡಿದ್ದಾರೆ. ಡಾ. ವೈಶಾಲಿ ಮುನವಳ್ಳಿ ಇವರಿಗೆ ಕರ್ನಾಟಕ ಕಾಲೇಜಿನ ಇತಿಹಾಸ ವಿಭಾಗದ ಮುಖ್ಯಸ್ಥರಾದ ಡಾ. ಜಗದೀಶ ಕಿವಡಣ್ಣವರ ಮಾರ್ಗದರ್ಶಕರಾಗಿದ್ದಾರೆ. ಇವರ ಸಾಧನೆಗೆ ಜೆ.ಎಸ್.ಎಸ್.ಎಸ್ ಕಾರ್ಯದಶಿಗಳಾದ ಡಾ. ಅಜಿತ ಪ್ರಸಾದ ರವರು, ಆಡಳಿತಾಧಿಕಾರಿ ಅರಿಹಂತ ಪ್ರಸಾದ, ಕಾಲೆಜಿನ ಪ್ರಾಚಾರ್ಯರಾದ ಡಾ. ವೆಂಕಟೇಶ ಮುತಾಲಿಕ್, ಮಹಾವೀರ ಉಪಾದ್ಯೆ, ಡಾ. ಸೂರಜ್ ಜೈನ್ ಸಮಸ್ತ ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ಮಗನಿಗಾಗಿ 2ನೇ ದಿನವು ಮುಂದುವರಿದ ಶೋಧ ಕಾರ್ಯ: ಕುಟುಂಬಕ್ಕಿದ್ದ ಒಬ್ಬನೆ ಮಗು ನೀರುಪಾಲು
ಅಕ್ರಮ ಚಟುವಟಿಕೆಗಲ್ಲಿ ಭಾಗಿ : ಇಬ್ಬರು ಆರೋಪಿತರು ಬೆಳಗಾವಿ ಜಿಲ್ಲೆಯಿಂದ ಗಡಿಪಾರು 