ಹೂವಿನ ಹಡಗಲಿ

ಹೂವಿನಹಡಗಲಿ ಜಿಲ್ಲಾ ಕೇಂದ್ರವಾಗಲಿ: ಜನಾರ್ದನ ರೆಡ್ಡಿ ಆಗ್ರಹ

ಹೂವಿನಹಡಗಲಿ ಜಿಲ್ಲಾ ಕೇಂದ್ರವಾಗಲಿ: ಜನಾರ್ದನ ರೆಡ್ಡಿ ಆಗ್ರಹ

ಹೂವಿನಹಡಗಲಿ 02: ಹೊಸಪೇಟೆಯನ್ನು ಜಿಲ್ಲಾ ಕೇಂದ್ರವನ್ನಾಗಿ ಮಾಡಿರುವುದು ಅವೈಜ್ಞಾನಿಕವಾಗಿದೆ. ಹೂವಿನಹಡಗಲಿಯನ್ನು ಜಿಲ್ಲಾ ಕೇಂದ್ರವನ್ನಾಗಿ ಘೋಷಿಸಿ ಹೊಸ ಜಿಲ್ಲೆ ರಚಿಸಬೇಕು ಎಂದು ಶಾಸಕ ಗಾಲಿ ಜನಾರ್ದನ ರೆಡ್ಡಿ ಆಗ್ರಹಿಸಿದರು.  

ಪಟ್ಟಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹೂವಿನಹಡಗಲಿಯನ್ನು ಕೇಂದ್ರವಾಗಿಟ್ಟುಕೊಂಡು ಹರಪನಹಳ್ಳಿ, ಕೊಟ್ಟೂರು, ಕೂಡ್ಲಿಗಿ ಹಾಗೂ ಹಗರಿಬೊಮ್ಮನಹಳ್ಳಿ ತಾಲ್ಲೂಕುಗಳನ್ನು ಒಳಗೊಂಡ ಹೊಸ ಜಿಲ್ಲೆ ರಚಿಸಿದರೆ ಆಡಳಿತ ಹಾಗೂ ಅಭಿವೃದ್ಧಿಗೆ ಅನುಕೂಲವಾಗುತ್ತದೆ ಎಂದು ಹೇಳಿದರು.  

ಜಿಲ್ಲಾಡಳಿತ ಭವನಕ್ಕೆ ದಿ. ಎಂ.ಪಿ. ಪ್ರಕಾಶ್ ಅವರ ಹೆಸರನ್ನು ನಾಮಕರಣ ಮಾಡಬೇಕು ಹಾಗೂ ಅವರ ಪ್ರತಿಮೆ ಸ್ಥಾಪಿಸಬೇಕು ಎಂದು ಅವರು ಒತ್ತಾಯಿಸಿದರು.  ಈ ವೇಳೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧವೂ ವಾಗ್ದಾಳಿ ನಡೆಸಿದ ರೆಡ್ಡಿ, "ರೆಡ್ಡಿ ಬಗ್ಗೆ ಮಾತನಾಡದೆ ಅವರಿಗೆ ನಿದ್ರೆ ಬರುವುದಿಲ್ಲ" ಎಂದು ಟೀಕಿಸಿದರು. 


ಸುದ್ದಿ ಓದಿ