ಜುಲೈ 19 ರಂದು ಧಾರವಾಡ ಐಐಟಿ 6ನೇ ಘಟಿಕೋತ್ಸವ ಆಯೋಜನೆ
IIT Dharwad 6th Convocation to be held on July 19
ಧಾರವಾಡ ಜು.16: ಧಾರವಾಡ ಐಐಟಿ (ಭಾರತೀಯ ತಂತ್ರಜ್ಞಾನ ಸಂಸೆ)್ಥಯ 6ನೇ ಘಟಿಕೋತ್ಸವ ಸಮಾರಂಭವನ್ನು ಜುಲೈ 19, 2025 ರಂದು ಮಧ್ಯಾಹ್ನ 3 ಗಂಟೆಗೆ ಧಾರವಾಡ ಭಾರತೀಯ ತಂತ್ರಜ್ಞಾನ ಸಂಸ್ಥೆಯ ಕೇಂದ್ರೀಯ ವಿದ್ಯಾಗ್ರಹಣ ಸಭಾಗೃಹದಲ್ಲಿ ಆಯೋಜಿಸಲಾಗಿದೆ ಎಂದು ಐಐಟಿ ನಿರ್ದೇಶಕ ಪ್ರೊ. ವೆಂಕಪ್ಪಯ್ಯ ಆರ್.ದೇಸಾಯಿ ಅವರು ಹೇಳಿದರು.
ಅವರು ಇಂದು (ಜುಲೈ.19) ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ಸಭಾಂಗಣದಲ್ಲಿ ಸುದ್ದಿಗೋಷ್ಠಿ ಜರುಗಿಸಿ, ಮಾತನಾಡಿದರು.
ಘಟಿಕೋತ್ಸವ ಸಮಾರಂಭದ ಮುಖ್ಯ ಅತಿಥಿಗಳಾಗಿ ಭಾರತ ಸರ್ಕಾರ ನವದೆಹಲಿಯ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ (ಡಿಎಸ್‌ಟಿ) ಕಾರ್ಯದರ್ಶಿ ಪ್ರೊ. ಅಭಯ ಕರಂಡೀಕರ, ಗೋವಾ ಭಾರತೀಯ ತಂತ್ರಜ್ಞಾನ ಸಂಸ್ಥೆ ನಿರ್ದೇಶಕ ಪ್ರೊ. ಧೀರೇಂದ್ರ ಕಟ್ಟಿ ಅವರು ಭಾಗವಹಿಸುವರು ಎಂದು ತಿಳಿಸಿದರು.
ಈ ವರ್ಷದ ಘಟಿಕೋತ್ಸವದಲ್ಲಿ ಒಟ್ಟು 227 ಪದವಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುವುದು. ಹಾಗೂ ಎರಡು ಚಿನ್ನದ ಪದಕ, ಆರು ಬೆಳ್ಳಿ ಪದಕ ಮತ್ತು ಒಂದು ನಗದು ಬಹುಮಾನ ವಿತರಿಸಲಾಗುತ್ತದೆ ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಬಿ.ಟೆಕ್ 138, ಎಂ.ಟೆಕ್ 30, ಎಂ.ಎಸ್ 13, ಪಿ.ಹೆಚ್‌ಡಿ ಅಧ್ಯಯನ ಮಾಡಿದ 20 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುವುದು. ಪದವಿ ವಿತರಣೆಯ ಜೊತೆಗೆ, ಶೈಕ್ಷಣಿಕ ಶ್ರೇಷ್ಠತೆ ಮತ್ತು ಸರ್ವತೋಮುಖ ಸಾಧನೆಯನ್ನು ಗುರುತಿಸಿ, ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರಶಸ್ತಿಗಳನ್ನು ಸಹ ನೀಡಲಾಗುವುದು ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಐಐಟಿಯ ಕುಲಸಚಿವ ಕಲ್ಯಾಣ ಕುಮಾರ ಭಟ್ಟಚಾರ್ಯಜಿ, ಪ್ರಾಧ್ಯಾಪಕರಾದ ನಾರಾಯಣ ಎಸ್. ಪುಣೆಕರ್, ದೀಲಿಪ ಎ.ಡಿ., ಅಮರನಾಥ ಹೆಗಡೆ, ದೀರಜ್ ಪಟೇಲ್, ಪ್ರತ್ಯಾಸಾ ಭುವಿ, ಸಿ.ರವಿಕುಮಾರ, ಸೂರ್ಯ ಪ್ರತಾಪ ಸಿಂಗ್, ಜಯಕುಮಾರ ಅವರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 