ಐಎನ್ಟಿಯುಸಿ ಬಳ್ಳಾರಿ ಜಿಲ್ಲಾಧ್ಯಕ್ಷರಾಗಿ ಕೆ.ತಾಯಪ್ಪ ನೇಮಕ
ಲೋಕದರ್ಶನ ವರದಿ
ಬಳ್ಳಾರಿ 16: ಬೆಂಗಳೂರಿನ ಕೆ.ಪಿ.ಸಿ.ಸಿ. ಕಚೇರಿಯಲ್ಲಿ ಐ.ಎನ್.ಟಿ.ಯು.ಸಿ. ರಾಷ್ಟ್ರೀಯ ಅಧ್ಯಕ್ಷ ಡಾ. ಸಂಜೀವರೆಡ್ಡಿ, ಕೆ.ಪಿ.ಸಿ.ಸಿ. ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಬಳ್ಳಾರಿ ಜಿಲ್ಲಾ ನಗರ ಕಾಂಗ್ರೆಸ್ ಅಧ್ಯಕ್ಷ ಜಿ.ಎಸ್.ಮಹಮ್ಮದ್ ರಫೀಕ್ ಶಿಫಾರಸ್ಸು ಮೇರೆಗೆ ಕಾಂಗ್ರೆಸ್ ಪಕ್ಷದಲ್ಲಿ ನಿಷ್ಟಾವಂತ ಮತ್ತು ನಿಸ್ಪಕ್ಷಪಾತವಾಗಿ ಸೇವೆ ಸಲ್ಲಿಸುತ್ತಿರುವ ಕೆ.ತಾಯಪ್ಪ ರವರ ಸೇವೆಯನ್ನು ಗುರುತಿಸಿ ಐ.ಎನ್.ಟಿ.ಯು.ಸಿ.ಯ ನೂತನ ಬಳ್ಳಾರಿ ಜಿಲ್ಲಾ ಅದ್ಯಕ್ಷರನ್ನಾಗಿ ನೇಮಕ ಮಾಡಿ, ಆದೇಶ ಪತ್ರವನ್ನು ಐ.ಎನ್.ಟಿ.ಯು.ಸಿ.ಯ ಕರ್ನಾಟಕ ರಾಜ್ಯಾಧ್ಯಕ್ಷರಾದ ಡಾ. ಎಸ್.ಎಸ್.ಪ್ರಕಾಶಮ್ ಹೊರಡಿಸಿದ್ದಾರೆ.
ಈ ಸಂದರ್ಭದಲ್ಲಿ ಕೆ.ತಾಯಪ್ಪ ರವರು ಮಾತನಾಡುತ್ತಾ, ಕಾಂಗ್ರೆಸ್ ಪಕ್ಷದಲ್ಲಿ ತಮ್ಮ ಸೇವೆಯನ್ನು ಗುರುತಿಸಿ ಐ.ಎನ್.ಟಿ.ಯು.ಸಿ.ಯ ಜಿಲ್ಲಾ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಕಾಂಗ್ರೆಸ್ ಪಕ್ಷದಲ್ಲಿ ಸೇವೆ ಮಾಡಲು ನನಗೆ ಅವಕಾಶ ನೀಡಿರುವ ರಾಜ್ಯ ಮತ್ತು ರಾಷ್ಟ್ರ ಮಟ್ಟದ ನಾಯಕರಿಗೆ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಿಗೆ ಅಭಿನಂದನೆಗಳನ್ನು ತಿಳಿಸುತ್ತಾ, ನನಗೆ ನೀಡಿರುವ ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಮುಂದಿನ ದಿನಗಳಲ್ಲಿ ಪಕ್ಷವನ್ನು ಜಿಲ್ಲಾ ಮತ್ತು ತಾಲ್ಲೂಕು ಮಟ್ಟಗಳಲ್ಲಿ ಮತ್ತಷ್ಟು ಬಲಗೊಳಿಸಲು ಶಕ್ತಿಮೀರಿ ಶ್ರಮಿಸುತ್ತೇನೆ ಎಂದು ತಿಳಿಸಿದರು.