ಐಪಿಎಸ್ ಅಧಿಕಾರಿ ದಿನಕರ್ ಗುಪ್ತಾ ರಾಷ್ಟ್ರೀಯ ತನಿಖಾ ಸಂಸ್ಥೆ ಮಹಾನಿರ್ದೇಶಕರಾಗಿ ನೇಮಕ

ನವದೆಹಲಿ: ಜೂನ್ 24: ಹಿರಿಯ ಐಪಿಎಸ್ ಅಧಿಕಾರಿ ದಿನಕರ್ ಗುಪ್ತಾ ಅವರನ್ನು ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್‌ಐಎ) ಮಹಾನಿರ್ದೇಶಕರನ್ನಾಗಿ ಕೇಂದ್ರ ಸರ್ಕಾರ ನೇಮಕ ಮಾಡಿದೆ.

ಗುಪ್ತಾ ಅವರು ಪಂಜಾಬ್ ಕೇಡರ್ ನ 1987-ಬ್ಯಾಚ್ ನ ಭಾರತೀಯ ಪೊಲೀಸ್ ಸೇವೆ (IPS) ಅಧಿಕಾರಿ. ಗುಪ್ತಾ ಅವರು ಮಾರ್ಚ್ 31, 2024 ರವರೆಗೆ ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್‌ಐಎ) ಮಹಾನಿರ್ದೇಶಕರಾಗಿ ನೇಮಕವನ್ನು ಕ್ಯಾಬಿನೆಟ್‌ನ ನೇಮಕಾತಿ ಸಮಿತಿಯು ಅನುಮೋದಿಸಿದೆ ಎಂದು ಸಿಬ್ಬಂದಿ ಸಚಿವಾಲಯದ ಅಧಿಕೃತ ಆದೇಶ ತಿಳಿಸಿದೆ.

ಮತ್ತೊಂದು ಬೆಳವಣಿಗೆಯಲ್ಲಿ, ಐಬಿ ವಿಶೇಷ ನಿರ್ದೇಶಕ, ಸ್ವಾಗತ್ ದಾಸ್, 1987-ಬ್ಯಾಚ್ ಛತ್ತೀಸ್ ಗಢ ಕೇಡರ್ ಐಪಿಎಸ್ ಅಧಿಕಾರಿ, ವಿಶೇಷ ಕಾರ್ಯದರ್ಶಿ (ಆಂತರಿಕ ಭದ್ರತೆ), ಗೃಹ ವ್ಯವಹಾರಗಳ ಸಚಿವಾಲಯ (ಎಂಎಚ್ ಎ) ಹುದ್ದೆಗೆ ನೇಮಕಗೊಂಡಿದ್ದಾರೆ.