ನಟ ತಾಪ್ಸಿ ಪನ್ನು , ಚಿತ್ರ ನಿರ್ದೇಶಕ ಅನುರಾಗ್ ಕಶ್ಯಪ್ ಆಸ್ತಿಗಳ ಮೇಲೆ ಐಟಿ ದಾಳಿ
ನವದೆಹಲಿ, ಮಾ 3:ನಟ ತಾಪ್ಸಿ ಪನ್ನು ಮತ್ತು ಚಿತ್ರ ನಿರ್ದೇಶಕ ಅನುರಾಗ್ ಕಶ್ಯಪ್ , ವಿಕಾಸ್ ಬಹ್ಲ್ ಅವರ ಆಸ್ತಿಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದೆ. ಚಿತ್ರ ನಿರ್ಮಾಪಕ ವಿಕಾಸ್ ಬಹ್ಲ್ ಅವರ ಆಸ್ತಿಗಳನ್ನು ಸಹ ಶೋಧಿಸಲಾಗುತ್ತಿದೆ. ಮುಂಬೈ ಮತ್ತಿತರ ಕಡೆಗಳಲ್ಲಿ ಶೋಧ ಕಾರ್ಯ ಮುಂದುವರೆದಿದೆ ಎಂದೂ ವರದಿಯಾಗಿದೆ. ಶೋಧಗಳು ಫ್ಯಾಂಟಮ್ ಫಿಲ್ಮ್ಸ್ ಗೆ ಸಂಬಂಧಿಸಿವೆ ಎನ್ನಲಾಗಿದೆ. ಅನುರಾಗ್ ಕಶ್ಯಪ್ ಮತ್ತು ತಾಪ್ಸಿ ಪನ್ನು ಫ್ಯಾಂಟಮ್ ಚಿತ್ರಗಳಲ್ಲಿ ನಟಿಸಿದ್ದಾರೆ ಎನ್ನಲಾಗಿದೆ. ತೆರಿಗೆ ವಂಚನೆ ಪ್ರಕರಣದಲ್ಲಿ ತಾಪ್ಸಿ, ಅನುರಾಗ್ ಮತ್ತು ವಿಕಾಸ್ ಅವರ ಆಸ್ತಿಗಳ ಮೇಲೆ ಈ ದಾಳಿ ನಡೆದಿದೆ ಎನ್ನಲಾಗಿದೆ.