ಜಮಖಂಡಿ

ಆರೋಗ್ಯ ಪೂರ್ಣ ಸಮಾಜ ನಿರ್ಮಾಣಕ್ಕೆ ಆದರ್ಶಗಳೇ ದಾರಿ ದೀಪ

ಆರೋಗ್ಯ ಪೂರ್ಣ ಸಮಾಜ ನಿರ್ಮಾಣಕ್ಕೆ ಆದರ್ಶಗಳೇ ದಾರಿ ದೀಪ


ಲೋಕದರ್ಶನ ವರದಿ, 

ಜಮಖಂಡಿ  19 : ಆರೋಗ್ಯ ಪೂರ್ಣ ಸಮಾಜ ನಿರ್ಮಾಣಕ್ಕೆ ಆದರ್ಶಗಳೇ ದಾರಿ ದೀಪ. ನ್ಯಾಯ ನೀತಿಗಳ ನಟನೆಯಾಗದೆ ನಡೆಯಲಿ ಬೆಳೆದು ಬರಬೇಕು. ಮನುಷ್ಯ ಧರ್ಮದಿಂದ ವಿಮುಖನಾದರೆ ಶಾಂತಿ ನೆಮ್ಮದಿ ದೊರಕದು. ಭೌತಿಕ ಬದುಕಿನಲ್ಲಿ ಆಧ್ಯಾತ್ಮಿಕ ಅರಿವು ಅನುಸಂಧಾನ ಜೀವನದ ಶ್ರೇಯಸ್ಸಿಗೆ ಕಾರಣವಾಗುತ್ತದೆ ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಪೀಠದ ಜಗದ್ಗುರು ಡಾ.ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಶ್ರೀಗಳು ಅಭಿಪ್ರಾಯಪಟ್ಟರು.ನಗರದದಲ್ಲಿ ಶರನ್ನವರಾತಿ ್ರದಸರಾ ಧರ್ಮ ಸಮ್ಮೇಳನದ 8ನೇ ದಿನದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದ ಅವರು, ಸಮಾಜದ ಓರೆ ಕೋರೆಗಳನ್ನು ತಿದ್ದಿತೀಡಿ ಮುನ್ನಡೆಸುವುದೇ ಮಹಾನುಭಾವರ ಕರ್ತವ್ಯವಾಗಿದೆ. ಹೊಸತನದ ಜೊತೆಗೆ ಹಿರಿತನದ ಕಳೆ ಮೇಳೈಸಿದಾಗ ಬದುಕಿಗೆ ಬೆಲೆ ಮತ್ತು ಬಲ ಬರುತ್ತದೆ. 


ಸುದ್ದಿ ಓದಿ