ಶಿವರಾಮ್ ಹೆಬ್ಬಾರ್ ಕಾಂಗ್ರೆಸ್ ಗೆ ಬಂದರೆ ಸ್ವಾಗತ ಪ್ರಸಾದ್ ಅಬ್ಬಯ್ಯ

ಮುಂಡಗೋಡ 25 :  ಶಾಸಕರಾದ ಶಿವರಾಮ ಹೆಬ್ಬಾರ್ ಅವರು ಇಂದು  ಮುಂಡಗೋಡ ಪಟ್ಟಣದ ಹೆಬ್ಬಾರ್ ನಗರಕ್ಕೆ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಪ್ರಸಾದ ಅಬ್ಬಯ್ಯ ಅವರೊಂದಿಗೆ ಭೇಟಿ ನೀಡಿದರು ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ವತಿಯಿಂದ ನಿರ್ಮಾಣವಾಗುತ್ತಿರುವ  ಜಿ + 2 ಮಾದರಿಯ ಆಶ್ರಯ ವಸತಿ ಸಮುಚ್ಚಯಗಳ ಕಾಮಗಾರಿಯ ಪರೀಶೀಲನೆ ನಡೆಸಿ, ಕಾಮಗಾರಿಯ ಪ್ರಗತಿ ಬಗ್ಗೆ ಅಧಿಕಾರಿಗಳಿಂದ ಮಾಹಿತಿಯನ್ನು ಪಡೆದು ಅಗತ್ಯ ಸಲಹೆ ಸೂಚನೆಗಳು  ಜಿ+2 ಕಟ್ಟಡಗಳ ಪ್ರಗತಿ ಪರೀಶೀಲನೆಗೆ ಆಗಮಿಸಿ ಪತ್ರಕರ್ತರೊಂದಿಗೆ ಮಾತನಾಡಿದ ಕರ್ನಾಟಕ ಕೊಳಚೆ ನಿರ್ಮೂಲನ ಮಂಡಳಿಯ ಅಧ್ಯಕ್ಷರಾದ ಪ್ರಸಾದ್ ಅಬ್ಬಯ್ಯ ಅವರು ಶಿವರಾಮ್ ಹೆಬ್ಬಾರ್ ಅವರು ಕಾಂಗ್ರೆಸ್ ಪಕ್ಷಕ್ಕೆ ಬಂದರೆ ಮುಕ್ತವಾಗಿ ಸ್ವಾಗತಿಸಲಾಗುವುದು ಎಂದರು ಶಿವರಾಮ್ ಹೆಬ್ಬಾರ್ ಈ ಹಿಂದೆ ಕಾಂಗ್ರೆಸ್ ಪಕ್ಷದಿಂದ ಚುನಾವಣೆಯಲ್ಲಿ ಗೆದ್ದು ಶಾಸಕರಾಗಿದ್ದವರು ಅಂತಹವರು ಪಕ್ಷಕ್ಕೆ ಮರಳಿ ಬಂದರೆ ಪಕ್ಷ ಅವರನ್ನು ಸ್ವಾಗತಿಸಲಿದೆ ಎಂದು ಕೊಳಚೆ ನಿರ್ಮೂಲನ ಮಂಡಳಿಯ ಅಧ್ಯಕ್ಷರಾದ ಪ್ರಸಾದ್ ಅಬ್ಬಯ್ಯ ಮಾತನಾಡಿದರು.ಮತ್ತು ಹೈಕಮಾಂಡ್ ಮಟ್ಟದಲ್ಲಿ ಮಾತುಕತೆ ಆಗಿದೆ ಎನ್ನುವ ಸುದ್ದಿಗಳನ್ನು ಮಾಧ್ಯಮಗಳಲ್ಲಿ ನೋಡಿದ್ದೇನೆ. ಎಂದು ತಿಳಿಸಿದರು.