ಮೈಸೂರು ಹಾಲು ಒಕ್ಕೂಟದಲ್ಲಿ ಅಕ್ರಮ, ನೇಮಕಾತಿ, ಮ್ಯಾಚ್ ಫಿಕ್ಸಿಂಗ್..!!
ಮೈಸೂರು , ಮೇ 12,ಮೈಸೂರು ಹಾಲು ಒಕ್ಕೂಟದಲ್ಲಿ (ಮೈಮುಲ್ನಲ್ಲಿ) ನಿಯಮ ಗಾಳಿಗೆ ತೂರಿ ಅಕ್ರಮ ನೇಮಕಾತಿ, ಮ್ಯಾಚ್ ಫಿಕ್ಸಿಂಗ್ ನಡೆಯುತ್ತಿದೆ ಸರ್ಕಾರ ಕೂಡಲೇ ಇದಕ್ಕೆ ತಡೆ ನೀಡಿ, ಸಮಗ್ರ ತನಿಖೆ ನಡೆಸಬೇಕು ಎಂದು ಜೆಡಿಎಸ್ ಶಾಸಕ ಸಾ.ರಾ.ಮಹೇಶ್ ಹೊಸ ಬಾಂಬ್ ಸಿಡಿಸಿದ್ದಾರೆ . ಮೈಸೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸದ್ಯ ಈ ಕೂಡಲೆ ನೇಮಕಾತಿ ಪ್ರಕ್ರಿಯೆಗೆ ತಡೆ ನೀಡಬೇಕು ಎಂದು ಮುಖ್ಯಮಂತ್ರಿಯವರಿಗೆ ಪತ್ರ ಬರೆದಿರುವುದಾಗಿ ಅವರು ಹೇಳಿದರು. ಇಂದು ಒಕ್ಕೂಟದ ಸಭೆಯಲ್ಲಿ ಅಕ್ರಮವಾಗಿ ನೇಮಕಾತಿಗೆ ಅನುಮತಿ ನೀಡಿ ಹೆಚ್ಚುವರಿ ಹುದ್ದೆ ನೇಮಕ ಮಾಡಿಕೊಳ್ಳಲು ತೀರ್ಮಾನಿಸಲಾಗಿದೆ.ಪ್ರಸ್ತುತ 168 ಹುದ್ದೆಗಳ ನೇಮಕಾತಿಗೆ ಆದೇಶ ನೀಡಲಾಗಿದೆ ಎಂದು ದೂರಿದ್ದಾರೆ . ಆದರೆ ಹೆಚ್ಚುವರಿಯಾಗಿ 25 ಹುದ್ದೆಗಳನ್ನು ಇವರೆ ನೇರ ನೇಮಕಾತಿ ಮಾಡಿಕೊಳ್ಳುತ್ತಿದ್ದಾರೆ. 18 ಸಾವಿರ ಜನ ಪರೀಕ್ಷೆ ಬರೆದಿದ್ದಾರೆ ಈ ಪರೀಕ್ಷೆ ನಡೆಸಿದ್ದ ಏಜೆನ್ಸಿ ಮೇಲೂ ಗಂಬೀರ ಆರೋಪ ಇದೆ. ಸರ್ಕಾರ ಇದರ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹ ಪಡಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 