ಕಾರವಾರ

ಅಕ್ರಮ ಗಾಂಜಾ ಸಾಗಾಟ ಜಾಲ: ಇಬ್ಬರ ಬಂಧನ

ಅಕ್ರಮ ಗಾಂಜಾ ಸಾಗಾಟ ಜಾಲ: ಇಬ್ಬರ ಬಂಧನ

ಕಾರವಾರ 28 :  ಗೋವಾದಿಂದ ಅಕ್ರಮವಾಗಿ  ಗಾಂಜಾ ತಂದು ಮಾರಾಟ ಮಾಡಲು ಯತ್ನಿಸುತ್ತಿದ್ದ ಮಾದಕ ವಸ್ತುಗಳ ಮಾರಾಟ ಜಾಲವನ್ನು ಭೇದಿಸಿರುವ ಕಾರವಾರ ಗ್ರಾಮೀಣ ಠಾಣೆ ಪೊಲೀಸರು, ಇಬ್ಬರು ಆರೋಪಿಗಳನ್ನು ಬಂಧಿಸಿ ಗಾಂಜಾ ಹಾಗೂ ಇತರೆ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ತಾಲೂಕಿನ ಬಿಣಗಾದ ರಾಮನಗರದ ಬಳಿ ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.  ಖಚಿತ ಮಾಹಿತಿಯನ್ನಾಧರಿಸಿ ಬಿಣಗಾದ ರಾಮನಗರದ ಬಳಿ ದಾಳಿ ನಡೆಸಿದ ಕಾರವಾರ ಗ್ರಾಮೀಣ ಠಾಣೆಯ ಪೊಲೀಸರು , ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಗಳನ್ನು ವಶಕ್ಕೆ ಪಡೆದು ,ಪ್ರಕರಣ ದಾಖಲಿಸಿ, ಬಂಧಿಸಿದ್ದಾರೆ. ಈ ವೇಳೆ ಸುಮಾರು 25 ಸಾವಿರ ರೂ. ಮೌಲ್ಯದ 465 ಗ್ರಾಂ ತೂಕದ ಗಾಂಜಾ, ಸಾಗಾಟಕ್ಕೆ ಬಳಸಿದ್ದ ಒಂದು ಬೈಕ್ ಹಾಗೂ ಎರಡು ಮೊಬೈಲ್ ಫೋನ್ಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.ಘಟನೆಗೆ ಸಂಬಂಧಿಸಿದಂತೆ ಕಾರವಾರ ತಾಲೂಕಿನ ಸದಾಶಿವಗಡ ತಾರೀವಾಡದ ನಿವಾಸಿ ನಾಗರಾಜ್ (26) ಹಾಗೂ ವಿನೋದ್ ನನ್ನು  ಬಂಧಿಸಲಾಗಿದೆ. ಆರೋಪಿಗಳು ಗೋವಾದಿಂದ ಅಕ್ರಮವಾಗಿ ಗಾಂಜಾವನ್ನು ತಂದು ಇಲ್ಲಿನ ಸ್ಥಳೀಯರಿಗೆ ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ. ಈ ಸಂಬಂಧ ಕಾರವಾರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 


ಸುದ್ದಿ ಓದಿ