ಪಾಳ ಗ್ರಾಮದಲ್ಲಿ ಅಕ್ರಮ ಇಸ್ಪೀಟ್ ಜೂಜಾಟ: ಐವರ ಬಂಧನ

ಪಾಳ ಗ್ರಾಮದಲ್ಲಿ ಅಕ್ರಮ ಇಸ್ಪೀಟ್ ಜೂಜಾಟ: ಐವರ ಬಂಧನ  Illegal card gambling in Pala village: Five arrested


ಮುಂಡಗೋಡ 20: ತಾಲ್ಲೂಕಿನ ಪಾಳ ಗ್ರಾಮದಲ್ಲಿ ಸಾರ್ವಜನಿಕ ಸ್ಥಳದಲ್ಲಿ ನಡೆಯುತ್ತಿದ್ದ ಅಕ್ರಮ ಇಸ್ಪೀಟ್ ಜೂಜಾಟದ ಮೇಲೆ ಪೊಲೀಸರು ದಾಳಿ ನಡೆಸಿ ಐವರನ್ನು ಬಂಧಿಸಿದ್ದಾರೆ.  ಪಾಳ ಗ್ರಾಮದ ಎಗರೈಸ್ ಅಂಗಡಿ ಪಕ್ಕದ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದರು. ಜೂಜಾಟದಲ್ಲಿ ತೊಡಗಿದ್ದ ಪಾಳ ಗ್ರಾಮದ ಮಕಬೂಲ್ ಅಹ್ಮದ್, ಅರ್ಜುನ, ಕುಮಾರ್, ಪ್ರಕಾಶ ಹಾಗೂ ರಾಮಾಪುರ ಗ್ರಾಮದ ಸುರೇಶ್ ಅವರನ್ನು ಬಂಧಿಸಲಾಗಿದೆ.  ದಾಳಿಯ ವೇಳೆ ಜೂಜಾಟಕ್ಕೆ ಬಳಸುತ್ತಿದ್ದ 2,500 ನಗದು ಹಾಗೂ 52 ಇಸ್ಪೀಟ್ ಎಲೆಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.