ಅಕ್ರಮ ಮಾದಕ ವಸ್ತುಗಳನ್ನು ನಿಯಮಾನುಸಾರ ನಾಶಪಡಿಸಲಾಯಿತು
Illegal drugs were destroyed according to regulations
ಯರಗಟ್ಟಿ, 25 ; ಬೆಳಗಾವಿ ಜಿಲ್ಲಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಮಾದಕ ವಸ್ತುಗಳನ್ನು ಸಾಗಾಣಿಕೆ/ ಮಾರಾಟ/ ಬೆಳೆಯುತ್ತಿದ್ದವರ ಮೇಲೆ ದಾಳಿ ಮಾಡಿ ಎನ್‌ಡಿಪಿಎಸ್ ಕಾಯ್ದೆಯಡಿಯಲ್ಲಿ ಬೆಳಗಾವಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಿಸಿದ ಒಟ್ಟು 12 ಪ್ರಕರಣಗಳಲ್ಲಿ ಅಂದಾಜು ರೂ. 25.27.450/- ಕಿಮ್ಮತ್ತಿನ 455 ಕೆಜಿ 582 ಗ್ರಾಂ ಮಾದಕ ವಸ್ತುಗಳನ್ನು ನ್ಯಾಯಾಲಯದ ಹಾಗೂ ಮಾಲಿನ್ಯ ನಿಯಂತ್ರಣಾಧಿಕಾರಿಗಳ ಅನುಮತಿಯೊಂದಿಗೆ ಜಿಲ್ಲಾ ಡ್ರಗ್ಸ್ ಡಿಸ್ಪೋಸಲ್ ಕಮೀಟಿಯು ದಿ 25ರಂದು ಬೆಳಿಗ್ಗೆ 11:30 ಗಂಟೆಗೆ ಯರಗಟ್ಟಿ ಸಮೀಪದ ತಾಲೂಕಿನ ಮುರಗೋಡ ಪೊಲೀಸ್ ಠಾಣಾ ವ್ಯಾಪಿಯ ಹಾರೂಗೊಪ್ಪ ಗ್ರಾಮ ಹದ್ದಿಯ ರಿ,ಸ. ನಂ:29/2 ನೇದ್ದರಲ್ಲಿಯ ದಿ ಬೆಳಗಾಂ ಗ್ರೀನ್ ಎನ್ವಿರಾನ್‌ಮೆಂಟಲ್ ಮ್ಯಾನೇಜ್‌ಮೆಂಟ್ ಪ್ರಾ.ಅ. ಹಾರೂಗೊಪ್ಪ ನೇದ್ದರಲ್ಲಿ ಮಾದಕ ವಸ್ತುಗಳನ್ನು ನಿಯಮಾನುಸಾರ ನಾಶಪಡಿಸಲಾಯಿತು.
ಈ ವೇಳೆ ಎಸ್. ಪಿ. ಭೀಮಾಶಂಕರ ಗುಳೆದ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಆರ್. ಬಿ. ಬಸರಗಿ, ಚಿಕ್ಕೋಡಿ ಡಿಎಸ್ಪಿ ಜಿ. ಡಿ. ಗೌಡರ, ಗೋಕಾಕ ಡಿಎಸ್ಪಿ ರವಿ ಡಿ. ನಾಯಿಕ, ಮುರಗೋಡ ಸಿಪಿಐ ಐ ಎಂ ಮಠಪತಿ ಸೇರಿದಂತೆ ಪೊಲೀಸ್ ಇಲಾಖೆ ಅಧಿಕಾರಿಗಳು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 