ಬೆಳಗಾವಿ-ಖಾನಾಪುರದಲ್ಲಿ ಅಕ್ರಮ ಗಣಿಗಾರಿಕೆ: ಡಿಸಿಗೆ ದೂರು
Illegal mining in Belgaum-Khanapur: Complaint to DC
ಖಾನಾಪುರ 31: ಬೆಳಗಾವಿ ಭಾಗದಲ್ಲಿ ಅಕ್ರಮ ಗಣಿಗಾರಿಕೆ ದಂಧೆ ನಡೆಯುತ್ತಿದೆ. ಬೆಳಗುಂಡಿ, ಬಕನೂರು, ಬೀಜಗರ್ಣಿ, ಗೋಳ್ಯಾಳಿ, ಅಮಟೆ, ಬೆಟಗೇರಿ, ಕಿಣಯೆ, ಇನಾಮ ಬಡಸ್ ಹಾಗೂ ಖಾನಾಪುರ ತಾಲೂಕಿನ ತೋರಳಿ ಗ್ರಾಮಗಳಲ್ಲಿ ಈ ಅಕ್ರಮ ಚಟುವಟಿಕೆಗಳು ನಡೆಯುತ್ತಿದ್ದು ಇದಕ್ಕೆ ಕಡಿವಾಣ ಹಾಕಬೇಕೆಂದು ಮಂಗಳವಾರ ರಾಜಕುಮಾರ ಟೋಪಣ್ಣವರ ಹಾಗೂ ಸುಜೀತ್ ಮುಳಗುಂದ್ ಅವರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.
ಮಹಾರಾಷ್ಟ್ರದ ಸಮೀಪದ ಪ್ರದೇಶಗಳಿಗೆ ನೀಡಲಾದ ಗಣಿಗಾರಿಕೆ ಪಾಸ್‌ಗಳನ್ನು ದುರುಪಯೋಗಪಡಿಸಿಕೊಂಡು ಕರ್ನಾಟಕದ ಈ ಭಾಗಗಳಲ್ಲಿ ಬಾಕ್ಸೈಟ್, ಲೇಟರೈಟ್ ಮತ್ತು ಸಿಲಿಕಾ ಖನಿಜಗಳನ್ನು ವ್ಯಾಪಕವಾಗಿ ಅಕ್ರಮವಾಗಿ ತೆಗೆಯಲಾಗುತ್ತಿದೆ. ಖನಿಜಗಳನ್ನು ಡಾಲ್ಮಿಯಾ ಸಿಮೆಂಟ್ ಹಾಗೂ ಚೆಟ್ಟಿನಾಡ್ ಸಿಮೆಂಟ್ ಕಂಪನಿಗಳಿಗೆ ಸಾಗಿಸಲಾಗುತ್ತಿದೆ ಎಂಬ ಶಂಕೆ ಇದೆ ಎಂದು ಸಾಮಾಜಿಕ ಕಾರ್ಯಕರ್ತ ರಾಜಕುಮಾರ್ ಟೋಪಣ್ಣವರ ಹೇಳಿದರು.
ಅಕ್ರಮ ಗಣಿಗಾರಿಕೆ ಹೆಚ್ಚಾಗಿ ರಾತ್ರಿ 2 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ನಡೆಯುತ್ತಿದ್ದು, ಅಧಿಕಾರಿಗಳ ಗಮನ ತಪ್ಪಿಸಲು ಈ ರೀತಿಯ ಕಾರ್ಯಾಚರಣೆ ನಡೆಯುತ್ತಿದೆ. ಭಾರೀ ಲಾರಿಗಳ ಸಂಚಾರ ಬೆಳಗಾವಿ ಹಾಗೂ ಖಾನಾಪುರ ಭಾಗದ ಪಶ್ಚಿಮ ರಸ್ತೆಗಳ ಮೇಲೆ ಹೆಚ್ಚಿರುವುದು ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ ಎಂದು ಅವರು ತಿಳಿಸಿದ್ದಾರೆ.
ಈ ಭಾಗಗಳು ಪರಿಸರದ ದೃಷ್ಟಿಯಿಂದ ಸೂಕ್ಷ್ಮ ಪ್ರದೇಶಗಳಾಗಿದ್ದು, ಅಕ್ರಮ ಗಣಿಗಾರಿಕೆಯಿಂದ ಅರಣ್ಯ ನಾಶ, ಭೂಗರ್ಭ ಜಲಮಟ್ಟ ಕುಸಿತ, ಮಣ್ಣು ಕೊಚ್ಚಿಹೋಗುವಿಕೆ ಸೇರಿದಂತೆ ಗಂಭೀರ ಪರಿಸರ ಹಾನಿ ಉಂಟಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದ ದೂರಿನಲ್ಲಿ ತಕ್ಷಣ ತನಿಖೆ ನಡೆಸಿ ಅಕ್ರಮ ಗಣಿಗಾರಿಕೆಯನ್ನು ನಿಲ್ಲಿಸುವಂತೆ ಹಾಗೂ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಾಮಾಜಿಕ ಕಾರ್ಯಕರ್ತ ಸುಜೀತ್ ಮುಳಗುಂದ ಒತ್ತಾಯಿಸಿದ್ದಾರೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 