ಹಾಸನ, ತುಮಕೂರು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ಅಕ್ರಮ ಬೀಜ ದಾಸ್ತಾನು ಜಪ್ತಿ
Illegal seed stocks seized in Hassan, Tumakuru, and Mandya districts
ಲೋಕದರ್ಶನ ವರದಿ
ಹಾವೇರಿ, ಜು. 6: ಕೃಷಿ ಇಲಾಖೆಯ ಅಧಿಕಾರಿಗಳು ರಾಜ್ಯದ ಹಾಸನ, ತುಮಕೂರು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ಅಕ್ರಮವಾಗಿ ಸಂಗ್ರಹಿಸಲಾಗಿದ್ದ ಬೀಜ, ರಸಗೊಬ್ಬರ ಹಾಗೂ ಸೂಕ್ಷ್ಮ ಪೋಷಕಾಂಶಗಳ ಮೇಲೆ ದಾಳಿ ನಡೆಸಿ ದಾಸ್ತಾನುಗಳನ್ನು ಜಪ್ತಿ ಮಾಡಿದ್ದಾರೆ. ಕೃಷಿ ಇಲಾಖೆ ಆಯುಕ್ತ ಡಾ. ಬಿ.ಸಿ. ಸತೀಶ್ ಅವರ ನಿರ್ದೇಶನದಂತೆ ವಿಶೇಷ ತಂಡಗಳು ವಿವಿಧ ಕೃಷಿ ಕೇಂದ್ರಗಳ ಮೇಲೆ ಪರೀಶೀಲನೆ ನಡೆಸಿ, ಪರವಾನಗಿ ಇಲ್ಲದೆ ಸಂಗ್ರಹಿಸಲಾಗಿದ್ದ ಬೀಜ ಮತ್ತು ರಸಗೊಬ್ಬರಗಳನ್ನು ವಶಪಡಿಸಿಕೊಂಡಿವೆ.
ಹಾಸನ ಜಿಲ್ಲೆಯ ಸಾಲಗಾಮೆ ಹೋಬಳಿಯ ಕೊಂಡಜ್ಜಿಕೊಪ್ಪಲು ಗ್ರಾಮದ ಕಾರ್ತಿಕ್ ಟ್ರೇಡರ್ಸ್ನಲ್ಲಿ ಬೀಜ ್ಣ್ಖ್ಲೂ್ಪುಹಿ1966 ಉಲ್ಲಂಘಿಸಿ ಪರವಾನಗಿ ಇಲ್ಲದೆ ಸಂಗ್ರಹಿಸಿದ್ದ ಸುಮಾರು ?85 ಸಾವಿರ ಮೌಲ್ಯದ 180 ಕೆ.ಜಿ. ಹೈಬ್ರಿಡ್ ಮೆಕ್ಕೆಜೋಳ ಬೀಜ ಜಪ್ತಿ ಮಾಡಲಾಗಿದೆ. ಅರಸೀಕೆರೆ ತಾಲೂಕಿನ ಜಾವಗಲ್ ಹೋಬಳಿಯ ಪುಷ್ಪಗಿರಿ ಅಗ್ರೋ ಕೇಂದ್ರದಲ್ಲಿ ಸುಮಾರು ?12 ಸಾವಿರ ಮೌಲ್ಯದ 30 ಕೆ.ಜಿ. ಹೈಬ್ರಿಡ್ ಮೆಕ್ಕೆಜೋಳ ಬೀಜ ವಶಪಡಿಸಿಕೊಳ್ಳಲಾಗಿದೆ.
ಬೆಳೂರು ತಾಲೂಕಿನ ಅರೆಹಳ್ಳಿ ಹೋಬಳಿಯ ಮದಿಹಳ್ಳಿಯ ಶ್ರೀ ವೆಂಕಟೇಶ್ವರ ಟ್ರೇಡರ್ಸ್ನಲ್ಲಿ ಕಾನೂನು ಉಲ್ಲಂಘಿಸಿ ಸಂಗ್ರಹಿಸಿದ್ದ ಸುಮಾರು ?1.77 ಲಕ್ಷ ಮೌಲ್ಯದ 88 ಚೀಲ ಯೂರಿಯಾ ಹಾಗೂ ಪಾಸ್ಫೋ ಜಿಪ್ಸಂ ಗ್ರ್ಯಾನುಲ್ಸ್ ಜಪ್ತಿ ಮಾಡಲಾಗಿದೆ. ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಗೇಶಿ ಹೋಬಳಿಯ ಹಸಿರು ಹೈಟೆಕ್ ಸೀಡ್ಸ್ ಕೇಂದ್ರದಲ್ಲಿ ಪರವಾನಗಿ ಇಲ್ಲದೆ ಸಂಗ್ರಹಿಸಿದ್ದ ಸುಮಾರು ?86 ಸಾವಿರ ಮೌಲ್ಯದ 22 ಲೀಟರ್ ಸೂಕ್ಷ್ಮ ಪೋಷಕಾಂಶ ಮಿಶ್ರಣವನ್ನು ವಶಪಡಿಸಿಕೊಳ್ಳಲಾಗಿದೆ.
ಮಂಡ್ಯ ತಾಲೂಕಿನ ಇಂದುವಾಳ ಗ್ರಾಮದಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಸುಮಾರು 300 ಚೀಲ ಎನ್ಎಫ್ಎಲ್ ಯೂರಿಯಾವನ್ನು ಕೃಷಿ ಇಲಾಖೆ ಅಧಿಕಾರಿಗಳು ಜುಲೈ 4ರ ರಾತ್ರಿ ವಶಪಡಿಸಿಕೊಂಡಿದ್ದಾರೆ. ಅಕ್ರಮವಾಗಿ ಬೀಜ, ರಸಗೊಬ್ಬರ ಹಾಗೂ ಕೃಷಿ ಪರಿಕರಗಳ ಸಂಗ್ರಹ ಅಥವಾ ಮಾರಾಟ ನಡೆಸುವವರ ವಿರುದ್ಧ ಕಾನೂನು ಕ್ರಮ ಮುಂದುವರಿಯಲಿದೆ ಎಂದು ಕೃಷಿ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ 