ಅನ್ನಭಾಗ್ಯ ಯೋಜನೆಯ ಅಕ್ಕಿಯ ಅಕ್ರಮ
Illegality of Annabhagya scheme rice
ಲೋಕದರ್ಶನ ವರದಿ
ಜಮಖಂಡಿ 26: ತಾಲೂಕಿನ ಹುನ್ನೂರ ಗ್ರಾಮದ ಮನೆಯೊಂದರಲ್ಲಿ ಸರಕಾರದಿಂದ ಹಂಚಿಕೆಯಾದ ಪಡಿತರ ಚೀಟಿಯ ಅನ್ನಭಾಗ್ಯ ಯೋಜನೆ ಅಕ್ಕಿಯನ್ನು ಕಡಿಮೆ ಬೆಲೆಗೆ ಪಡೆದು ಅಕ್ರಮವಾಗಿ ಸಂಗ್ರಹಿಸಿಟ್ಟಿದ ಖಚಿತ ಮಾಹಿತಿ ಮೇರೆಗೆ ರಾತ್ರಿ ಸಮಯದಲ್ಲಿ ಆಹಾರ ಇಲಾಖೆ ಅಧಿಕಾರಿಗಳು ಮತ್ತು ಪೋಲಿಸರು ಜಂಟಿಯಾಗಿ ದಾಳಿಯನ್ನು ನಡೆಸಿ. ಅಕ್ರಮವಾಗಿ ಸಂಗ್ರಹಿಸಿಟ್ಟಿದ ಅಕ್ಕಿಯ ಮಾಲನ್ನು ವಶಕ್ಕೆ ಪಡೆದುಕೊಂಡಿದಾರೆ.
ಹುನ್ನೂರ ಗ್ರಾಮದ ಗಾಂಧಿ ನಗರದ ಮನೆಯೊಂದರಲ್ಲಿ ಸರಕಾರದಿಂದ ಹಂಚಿಕೆಯಾದ ಅನ್ನಭಾಗ್ಯ ಯೋಜನೆಯ ಪಡಿತರ ಚೀಟಿಯ ಅಕ್ಕಿಯನ್ನು ಕಡಿಮೆ ಬೆಲೆಗೆ ಪಡೆದುಕೊಂಡು ಪಕ್ಕದ ಮಹಾರಾಷ್ಟ್ರಕ್ಕೆ ಹಚ್ಚಿನ ಬೆಲೆಗೆ ಮಾರಾಟ ಮಾಡುವ ಉದ್ದೇಶವನ್ನು ಹೊಂದಿದ ಪಡಿತರ ಅಕ್ಕಿಯು ಸುಮಾರು 1 ಟನ್, 2 ಕ್ವೀಂಟಲ್ ಅಕ್ಕಿಯು ಸರಕಾರದ ಬೆಲೆಯ ಪ್ರಕಾರ 34,60. ರೂಗಳಂತೆ ಸುಮಾರು 41,520 ರೂ,ಗಳ ಅಕ್ಕಿಯನ್ನು ಸಂಗ್ರಹಿಸಿಟ್ಟಿದ ಮನೆಯ ಮೇಲೆ ಖಚಿತ ಮಾಹಿತಿ ಮೇರೆಗೆ ರಾತ್ರಿ ಸಮಯದಲ್ಲಿ ಆಹಾರ ಶಿರೆಸ್ತೇದಾರ ಎ.ಆರ್. ತಾಳಿಕೋಟಿ, ಜಮಖಂಡಿ ಗ್ರಾಮೀಣ ವಲಯ ಆಹಾರ ಶಿರಸ್ತೇದಾರ ಆನಂದ ರೇವು ರಾಠೋಡ ಮತ್ತು ಪೋಲಿಸ ಸಿಬಂಧಿಗಳು ಜಂಟಿಯಾಗಿ ಭರ್ಜರಿ ಕಾರ್ಯಾಚರಣೆಯನ್ನು ಮಾಡಿ ಒಟ್ಟು 1 ಟನ್, 2 ಕ್ಚೀಂಟಲ್ ಅಕ್ಕಿಯು ಪ್ಲಾಸ್ಟಿಕ್ ಚೀಲಗಳಲ್ಲಿ 50 ಕೆಜಿಯಂತೆ ತುಂಬಿರುವ ಮಾಲನ್ನು ವಶಕ್ಕೆ ಪಡೆದುಕೊಂಡು ತನಿಖೆಯನ್ನು ಮುಂದುವರಿಸಿದ್ದಾರೆ.
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು 