ವೀರಶೈವ ವಿದ್ಯಾವರ್ಧಕ ಸಂಘದ ಶಿಕ್ಷಣ ಸಂಸ್ಥೆಗಳ ಕೊಡುಗೆ ಅಪಾರ: ಎಂ.ಬಿ. ಪಾಟೀಲ
Immense contribution by the educational institutions of Veerashaiva Vidyavardhaka Sangha: M.B. Patil
ಬಳ್ಳಾರಿ, ಆ. 9: ಸ್ವಾತಂತ್ರ್ಯಪೂರ್ವದಲ್ಲೇ ಉತ್ತರ ಕರ್ನಾಟಕ ಭಾಗದಲ್ಲಿ ಜನರಿಗೆ ಶಿಕ್ಷಣ ನೀಡುವ ಉದ್ದೇಶದಿಂದ ಆರಂಭಗೊಂಡ ವೀರಶೈವ ವಿದ್ಯಾವರ್ಧಕ ಸಂಘದ ಶಾಲಾ-ಕಾಲೇಜುಗಳ ಕೊಡುಗೆ ಮಹತ್ವದ್ದಾಗಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಹೇಳಿದರು.
ನಗರದ ವೀರಶೈವ ವಿದ್ಯಾವರ್ಧಕ ಸಂಘದ ಪ್ರಥಮ ಶಾಲೆಯಾದ ಹೀರದ ಸೂಗಮ್ಮ ಶಾಲೆಯ ಶತಮಾನೋತ್ಸವ ಸಮಾರಂಭವನ್ನು ಶಾಲಾ ಆವರಣದಲ್ಲಿ ಉದ್ಘಾಟಿಸಿ ಅವರು ಮಾತನಾಡಿದರು.
ವೀರಶೈವ ವಿದ್ಯಾವರ್ಧಕ ಸಂಘ, ಸಿದ್ಧಗಂಗಾ ಮಠ ಹಾಗೂ ಕೊಪ್ಪಳದ ಗವಿಸಿದ್ದೇಶ್ವರ ಮಠದ ಶಿಕ್ಷಣ ಸಂಸ್ಥೆಗಳ ಮೂಲಕ ಸಾವಿರಾರು ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಲಾಗುತ್ತಿದೆ. ಈ ಸಂಸ್ಥೆಗಳು ಕೇವಲ ಲಿಂಗಾಯತ ಸಮುದಾಯಕ್ಕೆ ಸೀಮಿತವಾಗದೆ ಎಲ್ಲ ಸಮುದಾಯಗಳಿಗೂ ಶಿಕ್ಷಣ ಒದಗಿಸುತ್ತಿರುವುದು ಶ್ಲಾಘನೀಯ ಎಂದರು.
ನಮ್ಮ ಸಂಸ್ಕೃತಿ ಮತ್ತು ಸಂಪ್ರದಾಯಗಳೊಂದಿಗೆ ಆಧುನಿಕತೆಯನ್ನು ಮೈಗೂಡಿಸಿಕೊಳ್ಳಬೇಕು. ಎಐ ಹಾಗೂ ರೋಬೋಟಿಕ್ಸ್ ಸೇರಿದಂತೆ ತಂತ್ರಜ್ಞಾನ ಕ್ಷೇತ್ರಗಳು ವೇಗವಾಗಿ ಬೆಳೆಯುತ್ತಿದ್ದು, ಬದಲಾಗುತ್ತಿರುವ ಜಗತ್ತಿಗೆ ತಕ್ಕಂತೆ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಶಿಕ್ಷಣ ನೀಡಬೇಕಾಗಿದೆ. ವಿದೇಶಿ ವಿಶ್ವವಿದ್ಯಾಲಯಗಳು ಹಾಗೂ ಶಿಕ್ಷಣ ಸಂಸ್ಥೆಗಳೊಂದಿಗೆ ಸ್ಪರ್ಧಿಸಲು ಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಹೇಳಿದರು.
ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿಗೆ ಅನೇಕರು ದೇಣಿಗೆ ನೀಡಿದ್ದು, ಅದನ್ನು ಸಮರ್ಕವಾಗಿ ಬಳಸಿಕೊಂಡು ಮತ್ತಷ್ಟು ಶೈಕ್ಷಣಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ ಮುಂದಾಗಬೇಕು. ಶಿಕ್ಷಣದ ಮೂಲಕ ಸಮಾಜದ ಕಟ್ಟಕಡೆಯ ವ್ಯಕ್ತಿಯ ಬದುಕಿನಲ್ಲೂ ಬದಲಾವಣೆ ತರಲು ಸಾಧ್ಯ ಎಂದು ಎಂ.ಬಿ. ಪಾಟೀಲ ಅಭಿಪ್ರಾಯಪಟ್ಟರು.
ಜ್ಞಾನವೇ ಸಮಾಜದ ಬೆಳಕು
ಎಮ್ಮಿಗನೂರಿನ ಮಹಾಂತ ಮಠದ ಶ್ರೀಗಳು ಆಶೀರ್ವಚನ ನೀಡಿ, ವೀರಶೈವ ಸಮಾಜದ ಪ್ರಮುಖ ಸಾಧನೆಗಳಲ್ಲಿ ಶಿಕ್ಷಣಕ್ಕೆ ನೀಡಿದ ಕೊಡುಗೆ ಪ್ರಮುಖವಾಗಿದೆ ಎಂದರು. ಅಕ್ಷರ ದಾಸೋಹದ ಮೂಲಕ ಸಮ ಸಮಾಜ ನಿರ್ಮಾಣಕ್ಕೆ ಬಸವಣ್ಣನವರು ಮಾರ್ಗದರ್ಶನ ನೀಡಿದ್ದಾರೆ. ಜ್ಞಾನವನ್ನು ಸಮಾಜದ ಎಲ್ಲ ವರ್ಗಗಳಿಗೂ ತಲುಪಿಸುವ ಕಾರ್ಯವನ್ನು ಮಠ-ಮಾನ್ಯರು ಹಾಗೂ ಶಿಕ್ಷಣ ಸಂಸ್ಥೆಗಳು ಮುಂದುವರಿಸಿಕೊಂಡು ಬಂದಿವೆ ಎಂದು ಹೇಳಿದರು.
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿ ಹತ್ಯೆ; ಕಾಣೆಯಾದ ನಾಟಕ, 6 ತಿಂಗಳ ಬಳಿಕ ಪ್ರಕರಣ ಬಯಲು
6.85 ಕೆ.ಜಿ. ಗಾಂಜಾ ಮಿಶ್ರಿತ ಚಾಕಲೇಟ್ ಪ್ಯಾಕೆಟ್ಗಳ ವಶ: ಓರ್ವ ಆರೋಪಿ ಬಂಧನ
ಕಳೆದುಹೋಗಿದ್ದ 57 ಮೊಬೈಲ್ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ: ವಾರಸುದಾರರಿಗೆ ವಾಪಸ್ 