ಮರು ವಿನ್ಯಾಸಗೊಳಿಸಿದ ವಿಮೆ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ : ಡಿಸಿ
Implement the redesigned insurance scheme effectively: DC
ಲೋಕದರ್ಶನ ವರದಿ
ಬಾಗಲಕೋಟೆ 07 : ಅನಾನುಕೂಲಕರ ಹವಾಮಾನದಿಂದ ಉಂಟಾಗುವ ಬೆಳೆ ನಷ್ಟದಿಂದ ರೈತರನ್ನು ರಕ್ಷಿಸುವ ಉದ್ದೇಶದಿಂದ ಜಾರಿಗೆ ತರಲಾದ ಹವಾಮಾನ ಆಧಾರಿತ ವಿಮೆ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ಜಿಲ್ಲಾಧಿಕಾರಿ ಸಂಗಪ್ಪ ಅವರು ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಬುಧವಾರ ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ವಿಮೆ ಯೋಜನೆ ಕುರಿತು ಜರುಗಿದ ಜಿಲ್ಲಾ ಮಟ್ಟ ತಾಂತ್ರಿಕ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಹವಾಮಾನ
ಆಧಾರಿತ ವಿಮೆ ಯೋಜನೆಯ ಮರು ವಿನ್ಯಾಸದ ಪ್ರಮುಖ ಅಂಶಗಳನ್ನು ವಿವರವಾಗಿ ಚರ್ಚಿಸಿದರು. ಇದು ಮಳೆ ತಾಪಮಾನ ಮತ್ತು ತೇವಾಂಶದಂತಹ ಪ್ರತಿಕೂಲ ಹವಾಮಾನ ವೈಪರಿತ್ಯಗಳಿಂದ ಉಂಟಾಗುವ ತೋಟಗಾರಿಕೆ ಮತ್ತು ವಾಣಿಜ್ಯ ಬೆಳೆಗಳಾದ ದಾಳಿಂಬೆ ಮತ್ತು ದ್ರಾಕ್ಷಿ ಬೆಳೆ ನಷ್ಟಕ್ಕೆ ಪರಿಹಾರ ಒದಗಿಸುವ ಯೋಜನೆಯಾಗಿದೆ ಎಂದು ತಿಳಿಸಿದರು. ಈ ಯೋಜನೆಯಡಿ ಮುಖ್ಯವಾಗಿ ಬೆಳೆ ಕಟಾವು ಪರೀಶೀಲನೆಗೆ ಬದಲಾಗಿ ಹವಾಮಾನ ಕೇಂದ್ರಗಳ ದತ್ತಾಂಶಗಳ ಆಧರಿಸಿ ಪರಿಹಾರ ನೀಡಲಾಗುತ್ತದೆ. ಅಲ್ಲದೇ ಬೆಳೆ ಬೆಳವಣಿಗೆಯ ಹಂತಗಳನ್ನು ಗಮನಿಸಿ ವಿಮಾ ಮೊತ್ತ ನಿಗದಿಪಡಿಸಲಾಗುತ್ತದೆ. ಹವಾಮಾನ ಸೂಚ್ಯಂಕಗಳ ಆಧಾರದ ಮೇಲೆ ಸ್ವಯಂ ಚಾಲಿತವಾಗಿ ಪರಿಹಾರ ಬಿಡುಗಡೆ ಮಾಡಲಾಗುತ್ತದೆ, ಬೆಳೆ ಹಾನಿಯ ಸಂದರ್ಭದಲ್ಲಿ ನೇರ ವಿಮಾ ಪಾವತಿಯನ್ನು ಬೆಳೆ ಸಾಲ ಪಡೆದ ಮತ್ತುಸಾಲ ಪಡೆಯದ ರೈತರಿಗೆಒದಗಿಸಲಾಗುತ್ತದೆ.
ಈ ಯೋಜನೆ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ಜೊತೆ ಜಾರಿಯಲ್ಲಿರುತ್ತದೆ ಎಂದರು. ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಮಾತನಾಡಿ ಹವಾಮಾನ ವೈಪರಿತ್ಯಗಳಿಂದ ರೈತರಿಗೆ ಆಗುವ ನಷ್ಟವನ್ನು ತಗ್ಗಿಸಲು ಈ ಯೋಜನೆ ಸಹಾಯಕವಾಗಿದ್ದು, ಇದರ ಬಗ್ಗೆ ರೈತರಲ್ಲಿ ಹೆಚ್ಚಿನ ತಿಳುವಳಿಕೆ ನೀಡುವ ಕೆಲಸವಾಗಬೇಕು ಎಂದು ತಿಳಿಸಿದರು. ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಯೋಜನೆಯ ಲಾಭ ರೈತರಿಗೆ ಮುಟ್ಟಿಸುವ ಕೆಲಸವಾಗಬೇಕು.
ರೈತರು ಈ ಯೋಜನೆಯ ಬಗ್ಗೆ ತಾಲೂಕಾ ಮತ್ತು ಹೋಬಳಿ ಮಟ್ಟದ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದರು. ಸಭೆಯಲ್ಲಿ ಜಂಟಿ ಕೃಷಿ ನಿರ್ದೇಶಕ ಟಿ.ಎಸ್.ರುದ್ರೇಶಪ್ಪ, ಲೀಡ್ ಬ್ಯಾಂಕ್ನ ವ್ಯವಸ್ಥಾಪಕ ರಾಜಕುಮಾರ ಹೂಗಾರ, ಜಿಲ್ಲಾ ಸಾಂಖ್ಯಿಕ ಅಧಿಕಾರಿ ಗೌರಮ್ಮ ಸುಂಕದ ಸೇರಿದಂತೆ ತೋಟಗಾರಿಕೆ ವಿವಿಯ ಸಂಶೋಧನಾ ನಿರ್ದೇಶಕರು, ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥರು, ಎಲ್ಲ ತಾಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಹಾಗೂ ವಿಮಾ ಪ್ರತಿನಿಧಿಗಳು ಉಪಸ್ಥಿತರಿದ್ದರು.
ಕನ್ನಡ ಭಾಷೆಯ ನಾಮಫಲಕಗಳ ಹರಿದು ಹಾಕಿದ ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳಿ
ಕ್ಷುಲ್ಲಕ ಕಾರಣದಿಂದ ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಹತ್ಯೆ : ಕಿತ್ತೂರು ಪೊಲೀಸರಿಂದ ಆರೋಪಿ ಬಂಧನ
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ 