ಖಾನಾಪುರ

ಧ.ಗ್ರಾಮೀಣಾಭಿವೃದ್ಧಿ ಸಂಸ್ಥೆಯಿಂದ ಮಹತ್ವದ ಕಾರ್ಯ: ಕೊಚೇರಿ

ಧ.ಗ್ರಾಮೀಣಾಭಿವೃದ್ಧಿ ಸಂಸ್ಥೆಯಿಂದ ಮಹತ್ವದ ಕಾರ್ಯ: ಕೊಚೇರಿ

ಖಾನಾಪುರ 09: ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕು ಯೋಜನಾ ಕಚೇರಿಯಲ್ಲಿ ಸಾಮಾನ್ಯ ಸೇವಾ ಕೇಂದ್ರ (ಅಖಅ) ವನ್ನು ಪ್ರಾರಂಭಿಸಲಾಯಿತು. ಕಾರ್ಯಕ್ರಮವನ್ನು ತಾಲೂಕಿನ ಬಿ.ಜೆ.ಪಿ ಮುಖಂಡರಾದ ಪ್ರಮೋದ್ ಕೊಚೇರಿ ರವರು ಹಾಗೂ ಶ್ರೀಕ್ಷೇತ್ರಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್‌ ಬೆಳಗಾವಿ 01 ಜಿಲ್ಲೆಯ ಗೌರವಾನ್ವಿತ ನಿರ್ದೇಶಕ ಪ್ರದೀಪ್ ಶೆಟ್ಟಿರವರು ಉದ್ಘಾಟಿಸಿದರು.  

ಪ್ರಮೋದ್  ಕೊಚೇರಿರವರು ಸರ್ಕಾರಿ ಯೋಜನೆಗಳನ್ನು ಅತ್ಯಂತ ವೇಗವಾಗಿ ಜನರಿಗೆ ತಲುಪಿಸುವಲ್ಲಿ ಮತ್ತು ಅವುಗಳನ್ನು ಹೇಗೆ ಪಡೆದುಕೊಳ್ಳಬೇಕು ಎಂದು ತಿಳಿಸುವಲ್ಲಿ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ಮಹತ್ವದ ಕಾರ್ಯ ಮಾಡುತ್ತಿದೆ. ಇದರಿಂದಾಗಿ ಗ್ರಾಮೀಣ ಭಾಗದ ಜನರಿಗೆ ಅನುಕೂಲವಾಗುವುದಲ್ಲದೇ ಜನರಿಗೆ ಉತ್ತಮ ಸೇವೆ ನೀಡುವಲ್ಲಿ ಸಂಸ್ಥೆಯ ಈ ಕೆಲಸವೂ ಶ್ಲಾಘನೀಯ ಕಾರ್ಯವಾಗಿದೆ ಎಂದು ಉತ್ತಮ ಆಭಿಪ್ರಾಯ ವ್ಯಕ್ತಪಡಿಸುವ ಮೂಲಕ ಈ ನೂತನ ಅಖಅ ಕಾರ್ಯಕ್ರಮಕ್ಕೆ ಶುಭಹಾರೈಸಿದರು.  

ಕಾರ್ಯಕ್ರಮದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್‌ ಖಾನಾಪುರ ತಾಲೂಕಿನ ಯೋಜನಾಧಿಕಾರಿ ಸಂದೀಪ್ ಡಿ ರವರು, ಕಛೇರಿಯ ಹಣಕಾಸು ಮತ್ತು ಆಡಳಿತ ಪ್ರಬಂಧಕರು ಹಾಗೂ ಕಛೇರಿ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು. 


ಸುದ್ದಿ ಓದಿ