ಮುಂದಿನ ದಿನಗಳಲ್ಲಿ ಕೆಆರ್ಪಿಪಿ ಜಿಲ್ಲೆಯ ಎಲ್ಲಾ ಕ್ಷೇತ್ರದಿಂದ ಸ್ಪರ್ಧೆ ಮಾಡಲಿದೆ:ರಾಜಶೇಖರ ಗೌಡ
ಬಳ್ಳಾರಿ ಮೇ : ರಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷಕ್ಕೆ ಮತ ನೀಡಿದ ಮತದಾರರಿಗೆ ಕೆಆರ್ ಪಿಪಿ ಪಕ್ಷದ ಜಿಲ್ಲಾಧ್ಯಕ್ಷ ಗೋನಾಳ ರಾಜಶೇಖರ ಗೌಡ ಅವರು ಧನ್ಯವಾದ ತಿಳಿಸಿದ್ದಾರೆ.ನಗರದ ಕೆ ಆರ್ ಪಿ ಪಕ್ಷದ ಗೃಹ ಕಚೇರಿಯಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯನ್ನ ನೆಡಸಿ ಮಾತನಾಡಿದ ಅವರು, ಸಂಡೂರು, ಬಳ್ಳಾರಿ, ಸಿರುಗುಪ್ಪ ಕ್ಷೇತ್ರದಲ್ಲಿ ಸ್ಪರ್ಧಿಸಿದ ನಮ್ಮ ಅಭ್ಯರ್ಥಿಗಳಿಗೆ ಮತ ನೀಡಿದ್ದನ್ನು ಸ್ಮರಿಸಿದ ಅವರು ಸಮಯ ಅಭಾವದಿಂದ ಎಲ್ಲ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಲಿಲ್ಲ. ಮುಂದಿನ ದಿನಗಳಲ್ಲಿ ಪಕ್ಷ ಸಂಘಟಿಸಿ,ಜಿಲ್ಲೆಯ ಎಲ್ಲಾ ಕ್ಷೇತ್ರದಿಂದ ಸ್ಪರ್ಧೆ ಮಾಡಲಾಗುವುದು ಎಂದರು.
ಕಾಂಗ್ರೆಸ್ ಪಕ್ಷ ನೀಡಿದ ಗ್ಯಾರಂಟಿ ಗಳಿಂದ ರಾಜ್ಯದಲ್ಲಿ ಬಹುಮತ ಪಡೆಯಲು ಸಾಧ್ಯವಾಗಿದೆ. ಜನರಿಗೆ ನೀಡಿದ ಭರವಸೆಗಳನ್ನು ಗ್ಯಾರಂಟಿಗಳನ್ನು ಕಾಂಗ್ರೆಸ್ ಪಕ್ಷ ಈಡೇರಿಸಲಿ ಎಂದರು2023 ರ ವಿಧಾನಸಭೆ ಚುನಾವಣೆಯಲ್ಲಿ ಅಲವು ಕ್ಷೇತ್ರದಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷವು ಸೋಲು ಅನುಭವಿಸಿದ್ದರ ಹಿನ್ನೆಲೆಯಲ್ಲಿ ಮೇ 21 ರಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕರಾದ ಜಿ.ಜನಾರ್ದನರೆಡ್ಡಿ ಅವರ ನೇತೃತ್ವದಲ್ಲಿ ಗಂಗಾವತಿಯ ಮುಖ್ಯ ಕಚೇರಿಯಲ್ಲಿ ಪಕ್ಷದ ಬಳ್ಳಾರಿ ಜಿಲ್ಲಾ ಮಟ್ಟದ ಸಭೆ ಆಯೋಜಿಸಲಾಗಿದೆ. ಎಂದರು.ಈ ಸಂದರ್ಭದಲ್ಲಿ ಕೆ ಆರ್ ಪಿ ಪಕ್ಷದ ಪರಾಜಿತ ಅಭ್ಯರ್ಥಿಗಳಾದ ಸಿರುಗುಪ್ಪದ ದರ್ಪ ನಾಯಕ, ಸಂಡೂರಿನ ಕೆಎಸ್ ದಿವಾಕರ್, ಕೆ ಆರ್ ಪಿ ಪಕ್ಷದ ಮಹಿಳಾ ಶಕ್ತಿ ಘಟಕದ ಜಿಲ್ಲಾಧ್ಯಕ್ಷೆ ಹಂಪಿ ರಮಣಾ,ಸಾಮಾಜಿಕ ಜಾಲತಾಣದ ಪ್ರಮುಖರಾದಮಲ್ಲಿಕಾರ್ಜುನ ಆಚಾರ್ ಇನ್ನಿತರರು ಇದ್ದರು