ಚುನಾವಣಾ ನೀತಿ ಸಂಹಿತೆ ಹಿನ್ನೆಲೆ: ಬಳ್ಳಾರಿಯಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಸರಳ ಆಚರಣೆ
ಬಳ್ಳಾರಿ .23: ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ-2026ರ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ, ವೀರರಾಣಿ ಕಿತ್ತೂರು ಚೆನ್ನಮ್ಮ ಜಯಂತಿಯನ್ನು ನಗರದಲ್ಲಿ ಸಾಂಕೇತಿಕವಾಗಿ ಹಾಗೂ ಸರಳವಾಗಿ ಆಚರಿಸಲಾಯಿತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ನಗರದ ಡಾ. ರಾಜ್‌ಕುಮಾರ್ ರಸ್ತೆಯಲ್ಲಿರುವ ಸಾಂಸ್ಕೃತಿಕ ಸಮುಚ್ಚಯದ ‘ಹೊಂಗಿರಣ’ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಿತು. ಈ ವೇಳೆ ವೀರವನಿತೆ ಕಿತ್ತೂರು ರಾಣಿ ಚೆನ್ನಮ್ಮ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಪೂಜೆ ನೆರವೇರಿಸುವ ಮೂಲಕ ಜಯಂತಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ. ನಾಗರಾಜ, ಸಮುದಾಯದ ಮುಖಂಡರು ಹಾಗೂ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.