ರಾಜ್ ನಾಥ್ ಸಿಂಗ್ ಅವರಿಂದ ಇಂದು ಜಮ್ಮು-ಕಾಶ್ಮೀರ, ಲಡಾಕ್‍ನಲ್ಲಿ ಮಹತ್ವದ 17 ಸೇತುವೆಗಳ ಉದ್ಘಾಟನೆ
ಜಮ್ಮು, ಸೆ 24 : ಜಮ್ಮು-ಕಾಶ್ಮೀರ ಮತ್ತು ಲಡಾಖ್ ಕೇಂದ್ರಾಡಳಿತ ಪ್ರದೇಶಗಳ ಮಹತ್ವದ 17 ಹೊಸ ಸೇತುವೆಗಳನ್ನು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಗುರುವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಲಿದ್ದಾರೆ.ಈ ಸೇತುವೆಗಳನ್ನು ಗಡಿ ರಸ್ತೆಗಳ ಸಂಸ್ಥೆ (ಬಿಆರ್‌ಒ) ನಿರ್ಮಿಸಿದೆ.ಜಮ್ಮು- ಕಾಶ್ಮೀರ ಮತ್ತು ಲಡಾಖ್‌ನಲ್ಲಿ 17 ಸೇತುವೆಗಳು ಸೇರಿದಂತೆ ಏಳು ರಾಜ್ಯಗಳ ಮತ್ತು ಕೇಂದ್ರಾಡಳಿತ ಪ್ರದೇಶಗಳ ಒಟ್ಟು 43 ಸೇತುವೆಗಳನ್ನು ರಕ್ಷಣಾ ಸಚಿವರು ಉದ್ಘಾಟಿಸಲಿದ್ದಾರೆ ಎಂದು ರಕ್ಷಣಾ ಮೂಲಗಳು ಯುಎನ್‌ಐಗೆ ತಿಳಿಸಿವೆ.
ಇದಕ್ಕೂ ಮುನ್ನ, ಜುಲೈನಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಗಡಿ ರಸ್ತೆಗಳ ಸಂಸ್ಥೆ 43 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಿದ ಆರು ಪ್ರಮುಖ ಸೇತುವೆಗಳನ್ನು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸಿಂಗ್ ಉದ್ಘಾಟಿಸಿದ್ದರು. ‘ಇಂದು ಉದ್ಘಾಟನೆಗೊಳ್ಳುವ ಸೇತುವೆಗಳು ಕಾರ್ಯತಂತ್ರ ಪ್ರಾಮುಖ್ಯತೆಯನ್ನು ಹೊಂದಿವೆ. ಉತ್ತಮ ರಸ್ತೆ ಸಂಪರ್ಕವನ್ನು ಒದಗಿಸುವ ಮೂಲಕ ಗಡಿ ಭಾಗದಲ್ಲಿ ಅಭಿವೃದ್ಧಿ ಮಾತ್ರವಲ್ಲದೆ, ನೆರೆಯ ರಾಷ್ಟ್ರಗಳೊಂದಿಗೆ ಇರುವ ಸಂಬಂಧಗಳನ್ನು ಗಮನದಲ್ಲಿಟ್ಟುಕೊಂಡು ನಿರ್ಮಿಸಲಾಗಿದೆ.’ ಎಂದು ಮೂಲಗಳು ತಿಳಿಸಿವೆ.
ಗಡಿ ನಿಯಂತ್ರಣಾ ರೇಖೆ ಮತ್ತು ಅಂತಾರಾಷ್ಟ್ರೀಯ ಗಡಿಯುದ್ದಕ್ಕೂ ಗಡಿ ಪ್ರದೇಶಗಳ ಸನಿಹದಲ್ಲಿ ಸೇತುವೆಗಳನ್ನು ನಿರ್ಮಿಸಲಾಗಿದೆ. ಈ ಯೋಜನೆಗಳು ಗಡಿಗೆ ಹತ್ತಿರವಿರುವ ದೂರದ ಪ್ರದೇಶಗಳ ಜೀವನಾಡಿಯಾಗಲಿವೆ ಎಂದು ಅವರು ಹೇಳಿದ್ದಾರೆ.