ಇಂಡಿ

ವಸತಿ ನಿಲಯದಲ್ಲಿ ಕೋವಿಡ್ ಕೇರ್ ಸೆಂಟರ್ ಉದ್ಘಾಟನೆ

ವಸತಿ ನಿಲಯದಲ್ಲಿ ಕೋವಿಡ್ ಕೇರ್ ಸೆಂಟರ್ ಉದ್ಘಾಟನೆ
ತಾಲೂಕಿನ ಹಿರೇಬೇವನೂರ ಗ್ರಾಮದ ಸರಕಾರಿ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಲ್ಲಿನ ಕೋವಿಡ್ ಕೇರ್ ಸೆಂಟರ್‌ನ್ನು ತಹಸೀಲ್

ಇಂಡಿ 20: ತಾಲೂಕಿನ ಹಿರೇಬೇವನೂರ ಗ್ರಾಮದ ಸರಕಾರಿ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಲ್ಲಿ ಕೋವಿಡ್ ಕೇರ್ ಸೆಂಟರ್ ಉದ್ಘಾಟನೆ ಮಾಡಲಾಯಿತು. 

ಕೋವಿಡ್ ಕೇರ್ ಸೆಂಟರ್ ಉದ್ಘಾಟನೆ ನೆರವೇರಿಸಿ ತಹಶೀಲ್ದಾರ ಚಿದಂಬರ ಕುಲಕರ್ಣಿ ಮಾತನಾಡಿ ಈ ಕೋವಿಡ್ ಕೇರ್ ಸೆಂಟರ್‌ನಿಂದ ಹಿರೇಬೇವನೂರ, ಅಗರಖೇಡ, ಗುಬ್ಬೇವಾಡ, ಶಿರಗೂರ ಇನಾಂ, ಚಿಕ್ಕಮಣೂರ ಗ್ರಾಮದ ಕೋವಿಡ್ ಸೋಂಕಿತರಿಗೆ ಅನುಕೂಲವಾಗಲಿದೆ. ಈ ಕೇರ್ ಸೆಂಟರ್‌ಗಳಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ಅಂಗನವಾಡಿ, ಆಶಾ ಕಾರ್ಯಕರ್ತೆಯರು ಮತ್ತು ಗ್ರಾಮ ಪಂಚಾಯತ್ ಸಿಬ್ಬಂದಿಗಳು ಸೋಂಕಿತರ ಆರೈಕೆ ಮಾಡಲಿದ್ದಾರೆ ಎಂದು ತಿಳಿಸಿದರು. 

ಕಂದಾಯ ನೀರೀಕ್ಷಕ ಬಸವರಾಜ ರಾವೂರ, ಗ್ರಾ ಪಂ ಅಧ್ಯಕ್ಷ ಮುತ್ತಪ್ಪ ಪೂಜಾರಿ, ಪಿ.ಎಸ್‌. ಚವಡಿಹಾಳ, ರವಿ ಪಾದಗಟ್ಟಿ, ಎಸ್‌.ಎಸ್‌. ಪೂಜಾರಿ, ಎಂ.ಆರ್‌. ರಾಠೋಡ, ಸಿದರಾಯ ಲಾಳಸಂಗಿ ಸೇರಿದಂತೆ ಮತ್ತಿತರರು ಇದ್ದರು. 


ಸುದ್ದಿ ಓದಿ