ಹೈನುಗಾರಿಕೆ ತರಬೇತಿ ಕಾರ್ಯಕ್ರಮ ಉದ್ಘಾಟನೆ
ಬಳ್ಳಾರಿ 15: ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯ (ಅಃ ಖSಇಖಿI) ಆವರಣದಲ್ಲಿ 10ದಿನಗಳ ಹೈನುಗಾರಿಕೆ ತರಬೇತಿ ಕಾರ್ಯಕ್ರಮ ಉದ್ಘಾಟನೆ ಮಾಡಲಾಯಿತು.
ಈ ಸಮಾರಂಭದ ಮುಖ್ಯ ಅಥಿತಿಗಳಾಗಿ ಡಾ. ಶಶಿಧರ ಮುಖ್ಯ ಪಶುಸಂಗೋಪನಾಧಿಕಾರಿಗಳು ಬಳ್ಳಾರಿ, ಇವರು ಕಾರ್ಯಕ್ರಮವನ್ನು ಉದ್ಘಾಟನಾ ಸಮಾರಂಭವನ್ನು ಉದ್ಘಾಟಿಸಿ ಈಗಿನ ಕಾಲದಲ್ಲಿ ಹಾಲು ಮತ್ತು ಹಾಲಿನ ಉತ್ಪನ್ನಗಳಿಗೆ ತುಂಬಾ ಬೇಡಿಕೆಯಿದ್ದು. ತಾವೂಗಳು ಆಸಕ್ತಿಯಿಂದ ತರಬೇತಿ ಪಡೆದುಕೊಂಡು. ಹೈನುಗಾರಿಕೆ ಪ್ರಾರಂಭಿಸಿದರೆ ಉತ್ತಮ ಜೀವನ ನಿರ್ವಹಣೆ ಮಾಡಬಹುದು ಎಂದು ತಿಳಿಸಿದರು. ಶರಣಬಸವ ರೆಡ್ಡಿ ಡಿ, ನಿರ್ದೇಶಕರು, ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ ಬಳ್ಳಾರಿ, ನಾವೂ ಆರ್ಥಿಕವಾಗಿ ಸಬಲರಾದರೆ ಕೌಟುಂಬಿಕ ಜೀವನ ಸುಗಮವಾಗಿರುತ್ತದೆ. ಸಮಾಜದಲ್ಲಿ ಉತ್ತಮ ಜೀವನ ನಡೆಸಲು ಹೈನುಗಾರಿಕೆ ತರಬೇತಿ ನಿಮಗೆ ಸಹಕಾರಿಯಾಗಲಿ ಎಂದು ಹಾರೈಸಿದರು. ಜಡೇಪ್ಪ, ಮಹಮ್ಮದ ನಿಸಾರ, ಉಪನ್ಯಸಕರು. ಸಿದ್ದಲಿಂಗಮ್ಮ, ಸಂತೋಷ ಕುಮಾರ್, ಕಿರಣ ಕುಮಾರ ಹಾಗೂ 34 ಜನ ಶಿಬಿರಾರ್ಥಿಗಳು ಭಾಗವಹಿಸಿದ್ದರು.