ಸೌಹಾರ್ದದ ಸಂದೇಶ ಸಾರಿದ ಗುಲ್ಲಹೊಸೂರು ಸಮುದಾಯ ಭವನ ಉದ್ಘಾಟನೆ
Inauguration of Gullahosuru Community Hall: A Message of Harmony
ಸವದತ್ತಿ 07 : ಗುರ್ಲಹೊಸೂರಿನಲ್ಲಿ ನವೀಕೃತಗೊಂಡ ಬಾರಾಇಮಾಮ ಪಂಜಾ ಮಸೀದಿಯ ಸಮುದಾಯ ಭವನವು ಭಕ್ತಿ ಮತ್ತು ಧಾರ್ಮಿಕ ಶ್ರದ್ಧೆಯೊಂದಿಗೆ ಲೋಕಾರೆ್ಣಗೊಂಡಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸ್ಥಳೀಯ ಶಾಸಕ ವಿಶ್ವಾಸ ವೈದ್ಯ ಅವರು ರಿಬ್ಬನ್ ಕತ್ತರಿಸುವ ಮೂಲಕ ನೂತನ ಸಮುದಾಯ ಭವನವನ್ನು ಉದ್ಘಾಟಿಸಿದರು. ಉದ್ಘಾಟನೆಗೂ ಮುನ್ನ, ಅವರು ಗ್ರಾಮದ ಹಿರೇ ಮಸೀದಿ ಆವರಣದಲ್ಲಿ ನಿರ್ಮಾಣವಾಗಲಿರುವ ಲಾಲಶಾವಲಿ ಮಸೀದಿ ಕಟ್ಟಡ ಕಾಮಗಾರಿಗೆ 7 ಲಕ್ಷ ವೆಚ್ಚದ ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಧಾರ್ಮಿಕ ಕೇಂದ್ರಗಳ ಸರ್ವಾಂಗೀಣ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ, ಎಂದು ಭರವಸೆ ನೀಡಿದರು.
ಸಮಾರಂಭವನ್ನುದ್ದೇಶಿಸಿ ಮಾತನಾಡಿದ ಅವರು ಗುರ್ಲಹೊಸೂರ ಗ್ರಾಮವು ಸರ್ವಧರ್ಮೀಯರ ಸೌಹಾರ್ದತೆಯ ಪ್ರತೀಕವಾಗಿದೆ. ಇಲ್ಲಿನ ಹಿಂದೂ ಮತ್ತು ಮುಸ್ಲಿಂ ಬಾಂಧವರು ಮೊಹರಂ ಹಬ್ಬವನ್ನು ಪರಸ್ಪರ ಗೌರವದಿಂದ, ಒಗ್ಗೂಡಿ ಆಚರಿಸಿಕೊಂಡು ಬರುತ್ತಿರುವುದು ಇಡೀ ಜಿಲ್ಲೆಗೆ ಮಾದರಿಯಾಗಿದೆ. ಇಂತಹ ಉನ್ನತ ಪರಂಪರೆಯನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ, ಎಂದು ಶ್ಲಾಘಿಸಿದರು. ಬಾರಾಇಮಾಮ ಪಂಜಾ ಮಸೀದಿಯ ಉಳಿದ ಜೀರ್ಣೋದ್ಧಾರ ಕಾಮಗಾರಿಗಳನ್ನು ಶೀಘ್ರವೇ ಕೈಗೊಳ್ಳುವುದಾಗಿ ಭರವಸೆ ನೀಡಿದ ಅವರು, ಗ್ರಾಮವು ಇದೇ ರೀತಿ ಶಾಂತಿ, ಸಮೃದ್ಧಿ ಹಾಗೂ ಸಾಮರಸ್ಯದ ಹಾದಿಯಲ್ಲಿ ಸಾಗಲಿ ಎಂದು ಹಾರೈಸಿದರು.
ಈ ಸಮಾರಂಭದಲ್ಲಿ ಪುರಸಭೆಯ ಮಾಜಿ ಅಧ್ಯಕ್ಷ ಶಿವಾನಂದ ಪಟ್ಟಣಶೆಟ್ಟಿ, ಬಸವರಾಜ ಅರಮನಿ, ಮಲ್ಲಿಕಾರ್ಜುನ ಬೇವೂರ, ಪ್ರವೀಣ್ ರಾಮಪ್ಪನವರ, ಮಂಜುನಾಥ ಪಾಚಂಗಿ, ಪ್ರವೀಣ್ ಪಟ್ಟಣಶೆಟ್ಟಿ, ಗ್ಯಾರಂಟಿ ಸಮಿತಿ ಅಧ್ಯಕ್ಷ ಶಿವಕುಮಾರ್ ರಾಠೋಡ್, ಮಕ್ತುಮಹುಸೇನ ತಹಶೀಲ್ದಾರ, ಶಾಹಜಾನ ಸಂಗೊಳ್ಳಿ, ಅನವರ ಬೆಟಗೇರಿ, ಸೇರಿದಂತೆ ಊರಿನ ಹಿರಿಯರು, ಮುಖಂಡರು ಹಾಗೂ ಅಪಾರ ಸಂಖ್ಯೆಯ ಯುವಕರು ಪಾಲ್ಗೊಂಡು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ 