ಇಂದು ಕಡಣಿ ಗ್ರಾಮ ಪಂಚಾಯಿತಿ ಕಟ್ಟಡ ಉದ್ಘಾಟನೆ
Inauguration of Kadani Gram Panchayat building today
ಇಂದು ಕಡಣಿ ಗ್ರಾಮ ಪಂಚಾಯಿತಿ ಕಟ್ಟಡ ಉದ್ಘಾಟನೆ
ಆಲಮೇಲ 25: ತಾಲೂಕಿನ ಕಡಣಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿದ ಹೈಟೆಕ್ ಗ್ರಾಮ ಪಂಚಾಯತಿ ಕಟ್ಟಡ ಇಂದು ಸೋಮವಾರ ಉದ್ಘಾಟನೆಗೊಳ್ಳಲಿದೆ.ಸನ್ 2025-26 ನೇ ಸಾಲಿನ ತಾಲೂಕನ ಪಂಚಾಯಿತಿ ಆನಿರ್ಧಂಧಿತ ಹಾಗೂ ಮಹಾತ್ಮಾ ಗಾಂಧಿ ನರೇಗಾ ಯೋಜನೆ ಅಡಿ ಒಗ್ಗೋಡಿಕೆ ಅನುದಾನದಡಿ ನಿರ್ಮಿಸಲಾಗಿದೆ. ಬೃಹತ್ತ ಮತ್ತು ಮಾಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು ಕರ್ನಾಟಕ ಸರಕಾರ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಎಂ ಬಿ ಪಾಟೀಲ್ ಕಟ್ಟಡ ಉದ್ಘಾಟನೆ ಕಾರ್ಯಕ್ರಮವನ್ನು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯಿತಿಯ ರಾಜ್ಯ ಇಲಾಖೆಯ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರಾದ ಪ್ರಿಯಾಂಕ ಖರ್ಗೆ ಉದ್ಘಾಟಿಸುವರು. ಅಧ್ಯಕ್ಷತೆಯನ್ನು ಸಿಂದಗಿ ಶಾಸಕ ಅಶೋಕ್ ಮನಗೂಳಿ. ಮುಖ್ಯ ಅತಿಥಿಗಳಾಗಿ ಜವಳಿ ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ್ ವಿಧಾನ ಪರಿಷತ್ತು ವಿರೋಧ ಪಕ್ಷದ ಮುಖ್ಯ ಸಚೇತಕರಾದ ಎಂ ರವಿಕುಮಾರ್ ಸರಕಾರದ ದೆಹಲಿ ಪ್ರತಿನಿಧಿ ಪ್ರಕಾಶ್ ಹುಕ್ಕೇರಿ. ಕರ್ನಾಟಕ ಡಿಟರ್ಜೆಂಟ್ ನಿ. ಅಧ್ಯಕ್ಷ ಅಪ್ಪಾಜಿ ನಾಡಗೌಡ್. ಸಂಸದ ರಮೇಶ್ ಜಿಗಜಿಣಗಿ. ರಾಜ್ಯಸಭೆ ಸದಸ್ಯರಾದ ಹನುಮಂತ ನಿರಾಣಿ. ಸುನಿಲ್ ಗೌಡ ಪಾಟೀಲ್ ಪಿ ಎಚ್ ಪೂಜಾರಿ ಕೇಶವ ಪ್ರಸಾದ್.ಎಸ್.ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ ಅಧ್ಯಕ್ಷ ಕಾಂತಾ ನಾಯಕ್. ಸಂಗಮೇಶ್ ಬಬಲೇಶ್ವರ ಮಾನ್ಯ ಅಧ್ಯಕ್ಷರು ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಧಾರವಾಡ. ಬಿ.ಎಸ್. ಕೌಜಲಗಿ ಅಧ್ಯಕ್ಷರ ಕರ್ನಾಟಕ ರಾಜ್ಯ ನಿಂಬೆ ಅಭಿವೃದ್ಧಿ ಮಂಡಳಿ ಇಂಡಿ. ಅಶೋಕ್ ಕೊಳಾರಿ ಅಧ್ಯಕ್ಷರು ಗ್ಯಾರಂಟಿ ಅನುಷ್ಠಾನ ಸಮಿತಿ ಆಲಮೇಲ. ಬಸಲಿಂಗಪ್ಪ ಎಸ್ ಕತ್ತಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ಕಡಣಿ. ಶ್ರೀಮತಿ ಸಾವಿತ್ರಿ ಶರಣಪ್ಪ ನಾಟೀಕರ್ ಉಪಾಧ್ಯಕ್ಷರು ಗ್ರಾಮ ಪಂಚಾಯಿತಿ ಕಡಣಿ. ಆನಂದ ಕೆ ಜಿಲ್ಲಾಧಿಕಾರಿಗಳು. ರಿಷ ಆನಂದ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲಾ ಪಂಚಾಯಿತಿ ವಿಜಯಪುರ. ಲಕ್ಷ್ಮಣ ನಿಂಬರಗಿ ಜಿಲ್ಲಾ ಪೊಲೀಸ್ ವರಿಷ್ಠ ಅಧಿಕಾರಿಗಳು ವಿಜಯಪುರ. ಊರಿನ ಹಿರಿಯರಾದ ಬಸವರಾಜ ತಾವರಗೇರಿ. ಸಂತೋಷ ಕ್ಷತ್ರಿ.ಭೋಗಣ್ಣ ಲಾಳಸಂಗಿ. ಹಣಮಂತರಾಯ ಕಳಸಗೊಂಡ. ಸೇರಿದಂತೆ ಅನೇಕ ರಾಜಕೀಯ ಮುಖಂಡರು ಅಧಿಕಾರಿಗಳು ಈ ಕಾರ್ಯಕ್ರಮಕ್ಕೆ ಪಾಲ್ಗೊಳ್ಳವರು.ವರದಿ. ಉಮೇಶ್ ಕಟಬರ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 