ಶಾಲಾ ಸಂಸತ್ ಉದ್ಘಾಟನೆ: ವಿದ್ಯಾರ್ಥಿಗಳಿಗೆ ನಾಯಕತ್ವದ ಪಾಠ
Inauguration of School Parliament: Lessons in Leadership for Students
ಲೋಕದರ್ಶನ ವರದಿ
ಧಾರವಾಡ 5: ನಗರದ ಕರ್ನಾಟಕ ಪ್ರೌಢಶಾಲೆಯಲ್ಲಿ 2026ಹಿ27 ಸಾಲಿನ ಶಾಲಾ ಸಂಸತ್ ಉದ್ಘಾಟನಾ ಸಮಾರಂಭ ಮಂಗಳವಾರ ಅರ್ಥಪೂರ್ಣವಾಗಿ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಧಾರವಾಡ ಜರ್ನಲಿಸ್ಟ್ ಗಿಲ್ಡ್ ಅಧ್ಯಕ್ಷ ಡಾ. ಬಸವರಾಜ ಹೊಂಗಲ ಅವರು ಮಾತನಾಡಿ, ಶಾಲಾ ಸಂಸತ್ ವಿದ್ಯಾರ್ಥಿಗಳಲ್ಲಿ ನಾಯಕತ್ವ, ಜವಾಬ್ದಾರಿ, ಶಿಸ್ತು ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಬೆಳೆಸುವ ಉತ್ತಮ ವೇದಿಕೆಯಾಗಿದೆ ಎಂದು ಹೇಳಿದರು. ವಿದ್ಯಾರ್ಥಿಗಳು ಸಮಯಪಾಲನೆ, ಪ್ರಾಮಾಣಿಕತೆ ಮತ್ತು ಸೇವಾ ಮನೋಭಾವ ಬೆಳೆಸಿಕೊಂಡು ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಕರ್ನಾಟಕ ಎಜುಕೇಶನ್ ಬೋರ್ಡ್ ಕಾರ್ಯದರ್ಶಿ ಡಾ. ಎಸ್. ಎಸ್. ರಾಜಪುರೋಹಿತ್ ಮಾತನಾಡಿ, ಶಾಲಾ ಸಂಸತ್ ಮೂಲಕ ವಿದ್ಯಾರ್ಥಿಗಳಿಗೆ ಪ್ರಜಾಪ್ರಭುತ್ವದ ಕಾರ್ಯವಿಧಾನಗಳ ಅರಿವು ಮೂಡುತ್ತದೆ. ಪ್ರತಿಯೊಬ್ಬ ವಿದ್ಯಾರ್ಥಿಯೂ ತನ್ನ ಕರ್ತವ್ಯವನ್ನು ಪ್ರಾಮಾಣಿಕವಾಗಿ ನಿರ್ವಹಿಸಿ ಸಮಾಜಕ್ಕೆ ಮಾದರಿಯಾಗಬೇಕು ಎಂದರು. ಸಂಸ್ಥೆಯ ಅಧ್ಯಕ್ಷ ಶ್ರೀಕಾಂತ ಪಾಟೀಲ ಅಧ್ಯಕ್ಷತೆ ವಹಿಸಿ, ಶಾಲಾ ಸಂಸತ್ ವಿದ್ಯಾರ್ಥಿಗಳಲ್ಲಿ ನಾಯಕತ್ವ, ಸಾಮಾಜಿಕ ಹೊಣೆಗಾರಿಕೆ ಮತ್ತು ನೈತಿಕ ಮೌಲ್ಯಗಳ ಬೆಳವಣಿಗೆಗೆ ಸಹಕಾರಿಯಾಗುತ್ತದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಧಾರವಾಡ ಜರ್ನಲಿಸ್ಟ್ ಗಿಲ್ಡ್ ಪ್ರಧಾನ ಕಾರ್ಯದರ್ಶಿ ನಿಜಗುಣ ದಿಂಡಲಕೊಪ್ಪ ಹಾಗೂ ವಿಜಯ ಕರ್ನಾಟಕ ಪತ್ರಿಕೆಯ ಛಾಯಾಗ್ರಾಹಕ ಸದಾನಂದ ಮುಲ್ಲಾ ಅವರನ್ನು ಸನ್ಮಾನಿಸಲಾಯಿತು. ಪ್ರಾಂಶುಪಾಲ ಎನ್. ಎನ್. ಸವಣೂರ ಅತಿಥಿಗಳನ್ನು ಸ್ವಾಗತಿಸಿದರು. ಶಿವಲೀಲಾ ಹಾತ್ತರಕಿ ಶಾಲಾ ಸಂಸತ್ತಿನ ಉದ್ದೇಶ ಮತ್ತು ಮಹತ್ವ ವಿವರಿಸಿದರು. ಕಾರ್ಯಕ್ರಮ ನಿರೂಪಣೆಯನ್ನು ಪದ್ಮಾವತಿ ಅಂಗಡಿ ಹಾಗೂ ಪ್ರಜ್ಞಾ ಗಲಗಲಿ ನಡೆಸಿದರು. ಬಿ. ಬಿ. ಕೋಟೂರ ವಂದಿಸಿದರು. ಶಾಲೆಯ ನೂತನ ಸಂಸತ್ ಪದಾಧಿಕಾರಿಗಳು ಪ್ರಮಾಣವಚನ ಸ್ವೀಕರಿಸಿದರು. ಶಿಕ್ಷಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು.
ಅಂಬೋಲಿ ಬಳಿ ಕಣಿವೆಗೆ ಬಿದ್ದು ಯುವಕ ದುರ್ಮರಣ : 5 ಗಂಟೆ ಕಾರ್ಯಾಚರಣೆ ಬಳಿಕ ಶವ ಪತ್ತೆ
ಸುತಗಟ್ಟಿ ಗ್ರಾಮದಲ್ಲಿ ಪ್ರತ್ಯಕ್ಷವಾಗಿದ್ದ ಚಿರತೆ ಸೆರೆ : ನಿಟ್ಟೂಸಿರು ಬಿಟ್ಟ ಗ್ರಾಮಸ್ಥರು
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ 