ವಿಜಯಪುರ

ಹೆಬ್ಬಾಳಟ್ಟಿ ಗ್ರಾಮದಲ್ಲಿ ಸರ್ಕಾರಿ ಪ್ರೌಢಶಾಲೆಯ ನಾಲ್ಕು ನೂತನ ಕೊಠಡಿಗಳ ಉದ್ಘಾಟನೆ

ಹೆಬ್ಬಾಳಟ್ಟಿ ಗ್ರಾಮದಲ್ಲಿ ಸರ್ಕಾರಿ ಪ್ರೌಢಶಾಲೆಯ ನಾಲ್ಕು ನೂತನ ಕೊಠಡಿಗಳ ಉದ್ಘಾಟನೆ

ವಿಜಯಪುರ 10 : ಕೈಗಾರಿಕೋದ್ಯಮಗಳ ಲಾಭಾಂಶದ ಶೇ. 2ರಷ್ಟು ಸಿಎಸ್‌ಆರ್ ಅನುದಾನವನ್ನು ನಮ್ಮ ಭಾಗದ ಸರಕಾರಿ ಶಾಲೆಗಳ ಸಮಗ್ರ ಸುಧಾರಣೆಗೆ ಬಳಸಿಕೊಳ್ಳಲಾಗುತ್ತಿದ್ದು, ಗುಣಮಟ್ಟದ ಕಟ್ಟಡಗಳನ್ನು ನಿರ್ಮಿಸಿಕೊಡುತ್ತಿರುವ ಟೊಯೋಟಾ ಕಂಪನಿಯ ಕಾರ್ಯ ನಿಜಕ್ಕೂ ಮಾದರಿಯಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಸಚಿವರಾದ ಡಾ. ಎಂ.ಬಿ. ಪಾಟೀಲ ಅವರು ಹೇಳಿದರು.

ಗ್ರಾಮೀಣ ಮಕ್ಕಳ ಭವಿಷ್ಯ ರೂಪಿಸುವ ಮಹತ್ವದ ಹೆಜ್ಜೆಯಾಗಿ ಬಬಲೇಶ್ವರ ಮತಕ್ಷೇತ್ರದ ಹೆಬ್ಬಾಳಟ್ಟಿ ಗ್ರಾಮದಲ್ಲಿ ಟೊಯೋಟಾ ಕಿರ್ಲೋಸ್ಕರ್ ಕಂಪನಿಯ ಸಿಎಸ್‌ಆರ್ ಅನುದಾನದಡಿ ನಿರ್ಮಿಸಲಾದ ಸರಕಾರಿ ಪ್ರೌಢ ಶಾಲೆಯ 4 ನೂತನ ಕೊಠಡಿಗಳನ್ನು ಮಕ್ಕಳ ವಿದ್ಯಾಭ್ಯಾಸಕ್ಕೆ ಲೋಕಾರೆ​‍್ಣಗೊಳಿಸಿ ಅವರು ಮಾತನಾಡಿದರು. ಗ್ರಾಮೀಣ ಭಾಗದ ಮಕ್ಕಳಿಗೆ ಅತ್ಯುತ್ತಮ ಶಿಕ್ಷಣ ಸಿಗಬೇಕು. ಮಾತ್ರವಲ್ಲ,  ಅವರು ಜಾಗತಿಕ ಸ್ಪರ್ಧಾತ್ಮಕ ಪ್ರಪಂಚಕ್ಕೆ ತೆರೆದುಕೊಳ್ಳಬೇಕು ಎಂಬುದು ನಮ್ಮ ಆಶಯ.

ಇದಕ್ಕಾಗಿ ಸರಕಾರಿ ಶಾಲಾ ವಿದ್ಯಾರ್ಥಿಗಳಿಗೂ 'ಎಐ ತಂತ್ರಜ್ಞಾನ'ದ ಅಭ್ಯಾಸ ದೊರೆಯುವಂತೆ ಕ್ರಮ ವಹಿಸಲಾಗುವುದು ಎಂದು ಸಚಿವರು ಇದೇ ವೇಳೆ ಭರವಸೆ ನೀಡಿದರು.ಈ ಸಂದರ್ಭದಲ್ಲಿ ಶಾಸಕರಾದ ವಿಠ್ಠಲ ಕಟಕದೊಂಡ, ಜಿ.ಪಂ. ಸಿಇಒ ರಿಷಿ ಆನಂದ್, ಪರಮಪೂಜ್ಯ  ಸಿದ್ದಲಿಂಗಯ್ಯ ಸ್ವಾಮೀಜಿ, ಪರಮಪೂಜ್ಯ ಚಿಕ್ಕಯ್ಯ ಸ್ವಾಮೀಜಿ ಹಾಗೂ ಟೊಯೋಟಾ ಸಂಸ್ಥೆಯ ಪ್ರತಿನಿಧಿಗಳು ಉಪಸ್ಥಿತರಿದ್ದರು. 


ಸುದ್ದಿ ಓದಿ