ವಿಶಾಲ ಸೌಹಾರ್ದ ಸಹಕಾರಿ ಸಂಘದ 11ನೇ ಶಾಖೆ ಉದ್ಘಾಟನೆ
Inauguration of the 11th branch of Vishal Sauharda Cooperative Society
ಲೋಕದರ್ಶನ ವರದಿ
ವಿಜಯಪುರ 16: ನಗರದ ವಿಜಯಪುರ ರಸ್ತೆಯ ಮಾವೂರು ಕಾಂಪ್ಲೆಕ್ಸ್ನಲ್ಲಿ ವಿಶಾಲ ಎಂ.ಆರ್.ಎನ್. ಸೌಹಾರ್ದ ಪತ್ತಿನ ಸಹಕಾರಿ ಸಂಘದ 11ನೇ ಶಾಖೆಯನ್ನು ಮಾಜಿ ಸಚಿವ ಮುರುಗೇಶ ನಿರಾಣಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮುರುಗೇಶ ನಿರಾಣಿ, ನಿರಾಣಿ ಸಮೂಹ ಸಂಸ್ಥೆಗಳ ಅಡಿಯಲ್ಲಿ ಕಳೆದ 18 ವರ್ಷಗಳಿಂದ ವಿಜಯ ಹಾಗೂ ವಿಶಾಲ ಸೌಹಾರ್ದ ಪತ್ತಿನ ಸಹಕಾರಿ ಸಂಘಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿವೆ. ರಾಜ್ಯದಲ್ಲಿ 100 ಶಾಖೆಗಳನ್ನು ಆರಂಭಿಸಿ, ಸುಮಾರು 65 ಸಾವಿರ ಕೋಟಿ ವಹಿವಾಟು ನಡೆಸುವ ಮೂಲಕ 4 ಸಾವಿರ ಕೋಟಿ ಠೇವಣಿ ಸಂಗ್ರಹಿಸಿದ್ದು, 26 ಕೋಟಿ ನಿವ್ವಳ ಲಾಭ ಗಳಿಸಿವೆ ಎಂದು ತಿಳಿಸಿದರು.
ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ದೊರೆಯುವ ಎಲ್ಲ ಸೌಲಭ್ಯಗಳನ್ನು ಸಹಕಾರಿ ಸಂಘದ ಮೂಲಕವೂ ಗ್ರಾಹಕರಿಗೆ ಒದಗಿಸುವ ಉದ್ದೇಶ ಹೊಂದಲಾಗಿದೆ. ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸಂಸ್ಥೆ ಹಲವು ಯೋಜನೆಗಳನ್ನು ರೂಪಿಸಿದೆ. ಕಳೆದ ಬಾರಿ ಕಬ್ಬನ್ನು ಜಮಖಂಡಿ ಸಕ್ಕರೆ ಕಾರ್ಖಾನೆಗೆ ಪೂರೈಸಿದ ರೈತರಿಗೆ ಒಂದೇ ವಾರದಲ್ಲಿ ಬಿಲ್ ಪಾವತಿಸಲು ಕ್ರಮ ಕೈಗೊಳ್ಳಲಾಗಿತ್ತು ಎಂದರು. ಈ ಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾವಂತರಿದ್ದು, ಸಕ್ಕರೆ ಕಾರ್ಖಾನೆ ಸ್ಥಾಪನೆಗೆ ಮುಂದೆ ಬಂದರೆ ಸಂಸ್ಥೆಯ ವತಿಯಿಂದ ಸಂಪೂರ್ಣ ಸಹಕಾರ ನೀಡಲಾಗುವುದು. ಪ್ರತಿನಿತ್ಯ 28 ಲಕ್ಷ ಲೀಟರ್ ಸಾಮರ್ಥ್ಯದ ಇಥೆನಾಲ್ ತಯಾರಿಕಾ ಘಟಕ ಈಗಾಗಲೇ ಆರಂಭಗೊಂಡಿದ್ದು, ದೇಶದಲ್ಲೇ ಪ್ರಮುಖ ಸ್ಥಾನದಲ್ಲಿದೆ. ರೈತರ ಬೆಳೆಗಳಿಗೆ ಉತ್ತಮ ಬೆಲೆ ದೊರೆಯುವ ನಿಟ್ಟಿನಲ್ಲಿ ಬಯೋಪ್ಲಾಸ್ಟಿಕ್ ಘಟಕ ಆರಂಭಿಸುವ ಉದ್ದೇಶವೂ ಇದೆ ಎಂದು ತಿಳಿಸಿದರು.
ಶಾಸಕ ಅಶೋಕ ಮನಗೂಳಿ ಮಾತನಾಡಿ, ರೈತರಿಗೆ ಅನುಕೂಲವಾಗುವ ಉದ್ದೇಶದಿಂದ ಸಕ್ಕರೆ ಕಾರ್ಖಾನೆ ಆರಂಭಿಸಲಾಗಿದೆ. ಆರ್ಥಿಕವಾಗಿ ಸದೃಢವಾಗಲು ಬ್ಯಾಂಕ್ಗಳನ್ನು ಆರಂಭಿಸಿರುವ ಮುರುಗೇಶ ನಿರಾಣಿ ಅವರ ಕಾರ್ಯ ಶ್ಲಾಘನೀಯ ಎಂದರು. ಈ ಸಂದರ್ಭದಲ್ಲಿ ಶ್ರೀಶೈಲ ಜಗದ್ಗುರುಗಳು, ಬೋರಗಿ ಪುರದಾಳ ತಪೋರತ್ನ ಮಹಾಲಿಂಗೇಶ್ವರ ಸ್ವಾಮೀಜಿ, ಆಸಂಗಿಹಾಳ ಆರೂಢಮಠದ ಶಂಕರಾನಂದ ಮಹಾರಾಜರು, ಮಾಜಿ ಶಾಸಕ ರಮೇಶ ಭೂಸನೂರ, ಗಣ್ಯ ವ್ಯಾಪಾರಸ್ಥ ಸಿ.ಎಸ್. ನಾಗೂರ, ನಿವೃತ್ತ ಪ್ರಾಧ್ಯಾಪಕ ಡಾ. ಅರವಿಂದ ಮನಗೂಳಿ, ಬಸವರಾಜ ಐರೋಡಗಿ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 