ಪತ್ರಿಕೋದ್ಯಮ ಹಾಗೂ ಭಾಷಾ ವಿಭಾಗದ ಗಣಕಯಂತ್ರ ಪ್ರಯೋಗಾಲಯ ಉದ್ಘಾಟನೆ
Inauguration of the Computer Laboratory for the Department of Journalism and Languages
ಲೋಕದರ್ಶನ ವರದಿ
ಬಾಗಲಕೋಟೆ 25 : ಬಸವೇಶ್ವರ ಕಲಾ ಮಹಾವಿದ್ಯಾಲಯದ ಭಾಷಾ ಹಾಗೂ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗಗಳ ನೂತನ ಗಣಕಯಂತ್ರ ಪ್ರಯೋಗಾಲಯವನ್ನು ಬಿವಿವಿ ಸಂಘದ ಕಾಲೇಜುಗಳ ಆಡಳಿತ ಮಂಡಳಿ ಕಾರ್ಯಾಧ್ಯಕ್ಷರಾದ ಗುರುಬಸವ ಸೂಳಿಭಾವಿ ಉದ್ಘಾಟಿಸಿದರು. ರಿಬನ್ ಕತ್ತರಿಸುವ ಮೂಲಕ ಪ್ರಯೋಗಾಲಯವನ್ನು ಲೋಕಾರೆ್ಣ ಮಾಡಿ ಬಳಿಕ ಬಿಳೂರು ಗುರುಬಸವ ಮಹಾಸ್ವಾಮೀಜಿಗಳ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಪ್ರಯೋಗಾಲಯದಲ್ಲಿ 10 ಗಣಕಯಂತ್ರಗಳನ್ನು ಅಳವಡಿಸಲಾಗಿದ್ದು, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿದ್ಯಾರ್ಥಿಗಳಿಗೆ ಡಿಜಿಟಲ್ ಮಾಧ್ಯಮ, ವಿನ್ಯಾಸ, ಸಂಪಾದನೆ ಹಾಗೂ ಇತರೆ ತಾಂತ್ರಿಕ ಕೌಶಲಗಳನ್ನು ಬೆಳೆಸಿಕೊಳ್ಳಲು ಹಾಗೂ ಎಡಿಟ್, ಟೈಪಿಂಗ್, ವಿಡಿಯೋ ಎಡಿಟಿಂಗ್, ಫೋಟೋಶಾಪ್ ಮತ್ತು ಇನ್ ಡಿಸೈನ ಸೇರಿದಂತೆ ಪತ್ರಿಕೋದ್ಯಮಕ್ಕೆ ಅಗತ್ಯವಿರುವ ತಂತ್ರಾಂಶಗಳನ್ನು ಕಲಿಯಲು ಇದು ಸಹಕಾರಿಯಾಗಲಿದೆ.
ಗ್ರಾಮೀಣ ವಿದ್ಯಾರ್ಥಿಗಳ ಆಂಗ್ಲಾ ಭಾಷಾ ಸುಧಾರಣೆಗೂ ಪ್ರಯೋಗಾಲಯ ಪೂರಕವಾಗಲಿದೆ ಎಂದರು. ಈ ಸಂದರ್ಭದಲ್ಲಿ ಬಿವಿವಿ ಸಂಘದ ಕಾಲೇಜುಗಳ ಆಡಳಿತ ಮಂಡಳಿಯ ಪದನಿಮಿತ್ಯ ಕಾರ್ಯದರ್ಶಿ ಡಾ.ಎಸ್.ಎಮ್ ಗಾಂವ್ಕರ, ಮಹಾವಿದ್ಯಾಲಯದ ಪ್ರಾಚಾರ್ಯ ಎಸ್.ಆರ್. ಮೂಗನೂರಮಠ, ಪ್ರಾಚಾರ್ಯರುಗಳಾದ ಡಾ ಜಗನ್ನಾಥ ಚವ್ಹಾನ, ಎಸ್.ಆರ್ ದೇಶಪಾಂಡೆ, ಡಾ. ವಿಜಯಲಕ್ಷ್ಮೀ ತೆಗ್ಗೆ, ಡಾ. ಎನ್.ಎಚ್ ಬೇವಿನಹಳ್ಳಿ, ಸಾಂಸ್ಕೃತಿಕ ಚಟುವಟಿಕೆಗಳ ವಿಭಾಗದ ಸಂಯೋಜಕ ಡಾ. ಕೆ.ವಿ. ಮಠ, ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಐ.ಬಿ. ಚಿಕ್ಕಮಠ, ಪ್ರಾಧ್ಯಾಪಕ ಮಹಾಂತೇಶ ದೊಡವಾಡ ಸೇರಿದಂತೆ ವಿವಿಧ ವಿಭಾಗಗಳ ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಗಣೇಶ ವಿಸರ್ಜನೆ ವೇಳೆ ದುರಂತ : ಬೆಳಗಾವಿಯ ಯುವಕ ನೀರಲ್ಲಿ ಮುಳುಗಿ ಸಾವು
ಚನ್ನಮ್ಮ ಪ್ರತಿಮೆ ಪ್ರತಿಷ್ಠಾಪನೆಗೆ ನವೆಂಬರ 1ರ ಗಡುವು ನೀಡಿದ ಕನ್ನಡ ಸಂಘಟನೆಗಳು
ಎನ್ಒಸಿ ನೀಡಲು ಲಂಚ : ಖಾನಾಪುರ ತಾಲೂಕು ಆರೋಗ್ಯಾಧಿಕಾರಿ ಲೋಕಾಯುಕ್ತ ಬಲೆಗೆ
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ 