ಮಧುಶ್ರೀ ಗಾರ್ಡನ್ ಆವರಣದಲ್ಲಿ ಆಯೋಜಿಸಲಾಗಿದ ವಸ್ತು ಪ್ರದರ್ಶನ ಉದ್ಘಾಟನೆ: ಶಿವರಾಜ ಎಸ್. ತಂಗಡಗಿ ಮತ್ತು ಹೆಚ್.ಎಂ. ರೇವಣ್ಣ
Inauguration of the exhibition organized at Madhushree Garden premises: Shivaraja S. Thangadagi and
ಕೊಪ್ಪಳ 17: ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕುರಿತ ಜಿಲ್ಲಾ ಮಟ್ಟದ ಗ್ಯಾರಂಟಿ ಕಾರ್ಯಾಗಾರ ಮತ್ತು ಗ್ಯಾರಂಟಿ ಉತ್ಸವ ಕಾರ್ಯಕ್ರಮ ಪ್ರಯುಕ್ತ ಇಂದು ಕೊಪ್ಪಳ ನಗರದ ಮಧುಶ್ರೀ ಗಾರ್ಡನ್ ಆವರಣದಲ್ಲಿ ಆಯೋಜಿಸಲಾಗಿದ ವಸ್ತು ಪ್ರದರ್ಶನ ಮತ್ತು ಮಾರಟ ಮಳಿಗೆಗಳನ್ನು ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್. ತಂಗಡಗಿ ಹಾಗೂ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್.ಎಂ. ರೇವಣ್ಣ ಅವರು ಉದ್ಘಾಟಿಸಿದರು.
ಸಂದರ್ಭದಲ್ಲಿ ಕೊಪ್ಪಳ ಸಂಸದರಾದ ಕೆ.ರಾಜಶೇಖರ ಹಿಟ್ನಾಳ, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷ (ಕಲಬುರಗಿ ವಿಭಾಗ) ಎಸ್.ಆರ್.ಮೆಹರೋಜ್ ಖಾನ್, ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪ್ರಸನ್ನ ಗಡಾದ, ಕೊಪ್ಪಳ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ರೆಡ್ಡಿ ಶ್ರೀನಿವಾಸ ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ ಸೇರಿದಂತೆ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಉಪಾಧ್ಯಕ್ಷರು, ಸದಸ್ಯರು, ವಿವಿಧ ತಾಲ್ಲೂಕು ಅಧ್ಯಕ್ಷರು ಮತ್ತು ಇತರೆ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 