ಮಹಾವೀರ ಸಹಕಾರಿ ಶಿರಗುಪ್ಪಿ ಶಾಖೆಯ ನೂತನ ಕಟ್ಟಡ ಉದ್ಘಾಟನೆ

ಮಹಾವೀರ ಸಹಕಾರಿ ಶಿರಗುಪ್ಪಿ ಶಾಖೆಯ ನೂತನ ಕಟ್ಟಡ ಉದ್ಘಾಟನೆ  Inauguration of the new building of the Mahaveera Cooperative's Shiraguppi branch


ಕಾಗವಾಡ 07 : ಶಿರಗುಪ್ಪಿ ಗ್ರಾಮದಲ್ಲಿ ಮಹಾವೀರ ಮಲ್ಟಿಪರಪಜ್ ಸೌಹಾರ್ದ ಸಹಕಾರಿ ಸಂಘದ ಶಾಖೆಯ ನೂತನ ಕಟ್ಟಡವನ್ನು ಸೋಮವಾರ ಉದ್ಘಾಟಿಸಲಾಯಿತು. ನ್ಯಾಯವಾದಿ ಅಭಯಕುಮಾರ ಅಕಿವಾಟೆ ಮಾತನಾಡಿ, ಮಹಾವೀರ ನಿಲಜಗಿ ಅವರ ನೇತೃತ್ವದ ಸಹಕಾರಿ ಸಂಸ್ಥೆ ಸಹಕಾರಿ ಕ್ಷೇತ್ರದ ಜತೆಗೆ ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿಯೂ ಸೇವೆ ಸಲ್ಲಿಸುತ್ತಿದ್ದು, ಪ್ರಗತಿಯತ್ತ ಸಾಗುತ್ತಿದೆ ಎಂದು ಹೇಳಿದರು. ಸಹಕಾರಿಯ ಅಧ್ಯಕ್ಷ ಮಹಾವೀರ ನಿಲಜಗಿ ಮಾತನಾಡಿ,  ಗ್ರಾಮೀಣ ಭಾಗದ ಜನರಿಗೆ ಸಾಲ ಸೌಲಭ್ಯ ಹಾಗೂ ಆರ್ಥಿಕ ನೆರವು ನೀಡಲಾಗುತ್ತಿದೆ. ನೂತನ ಶಾಖೆಯಲ್ಲಿ ಅತ್ಯುತ್ತಮ ಲಾಕರ್ ವ್ಯವಸ್ಥೆ ಕಲ್ಪಿಸಲಾಗಿದ್ದು, ಗ್ರಾಹಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.  ಕಾರ್ಯಕ್ರಮದಲ್ಲಿ ಶೀತಲಕುಮಾರ ಪಾಟೀಲ ಸೇರಿದಂತೆ ಸಹಕಾರಿಯ ನಿರ್ದೇಶಕರು, ಪದಾಧಿಕಾರಿಗಳು, ಸಿಬ್ಬಂದಿ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.