ಎಲಬುರ್ಗ

ಯಲಬುರ್ಗಾದಲ್ಲಿ ತಾಲೂಕು ಮಟ್ಟದ ಯುವ ಸಂಸತ್ತು ಸಭೆ ಕಾರ್ಯಕ್ರಮ ಉದ್ಘಾಟನೆ; ಸಂವಿಧಾನ, ಹಕ್ಕು ಮತ್ತು ಕರ್ತವ್ಯಗಳ ಕುರಿತು ಜಾಗೃತಿ

ಯಲಬುರ್ಗಾದಲ್ಲಿ ತಾಲೂಕು ಮಟ್ಟದ ಯುವ ಸಂಸತ್ತು ಸಭೆ ಕಾರ್ಯಕ್ರಮ ಉದ್ಘಾಟನೆ; ಸಂವಿಧಾನ, ಹಕ್ಕು ಮತ್ತು ಕರ್ತವ್ಯಗಳ ಕುರಿತು ಜಾಗೃತಿ
Inauguration of the taluk-level Youth Parliament session in Yelburga; raising awareness about the Co

ಯಲಬುರ್ಗಾ 14: ಪ್ರಜಾಪ್ರಭುತ್ವ ವ್ಯವಸ್ಥೆಯ ಬಲವರ್ಧನೆಗೆ ಯುವಜನರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ವಿದ್ಯಾರ್ಥಿಗಳು ಸಂವಿಧಾನದ ಆಶಯಗಳು, ಪ್ರಜಾಪ್ರಭುತ್ವದ ಮೌಲ್ಯಗಳು, ನಾಗರಿಕರ ಹಕ್ಕುಗಳು ಹಾಗೂ ಕರ್ತವ್ಯಗಳನ್ನು ಅರಿತುಕೊಂಡು ಜವಾಬ್ದಾರಿಯುತ ನಾಗರಿಕರಾಗಿ ರೂಪುಗೊಳ್ಳಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷೆ ಪ್ರಮೀಳಾ ಎಂ. ಹೇಳಿದರು. ಪಟ್ಟಣದ ಬುದ್ಧ ಬಸವ ಅಂಬೇಡ್ಕರ್ ಭವನದಲ್ಲಿ ಬುಧವಾರ ನಡೆದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ್ತು್ಣೂಸ್ಘ್ಪಾಹಿ2026್ಘ ಪ್ರಯುಕ್ತ ಆಯೋಜಿಸಿದ್ದ ತಾಲೂಕು ಮಟ್ಟದ ಯುವ ಸಂಸತ್ತು ಸಭೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪ್ರಜಾಪ್ರಭುತ್ವವು ಕೇವಲ ಆಡಳಿತ ವ್ಯವಸ್ಥೆಯಲ್ಲ; ಅದು ಸಮಾನತೆ, ಸ್ವಾತಂತ್ರ್ಯ, ನ್ಯಾಯ ಹಾಗೂ ಸಹೋದರತ್ವದ ತತ್ವಗಳನ್ನು ಒಳಗೊಂಡ ಜೀವನಮೌಲ್ಯವಾಗಿದೆ. ಯುವಜನತೆ ಪ್ರಜಾಪ್ರಭುತ್ವದ ಪ್ರಕ್ರಿಯೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ಸಮಾಜದಲ್ಲಿ ಜಾಗೃತಿ ಮೂಡಿಸಬೇಕು. ಸಂವಿಧಾನ ನೀಡಿರುವ ಹಕ್ಕುಗಳ ಬಗ್ಗೆ ತಿಳಿದುಕೊಳ್ಳುವುದರ ಜೊತೆಗೆ ತಮ್ಮ ಕರ್ತವ್ಯಗಳನ್ನು ಪ್ರಾಮಾಣಿಕವಾಗಿ ಪಾಲಿಸಬೇಕು. ಯುವ ಸಂಸತ್ತು ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣ, ಚರ್ಚಾ ಕೌಶಲ, ಸಾಮಾಜಿಕ ಜವಾಬ್ದಾರಿ ಹಾಗೂ ಸಾರ್ವಜನಿಕ ಸಮಸ್ಯೆಗಳ ಕುರಿತು ವಿಶ್ಲೇಷಣಾತ್ಮಕ ಚಿಂತನೆ ಬೆಳೆಸಲು ಸಹಕಾರಿಯಾಗುತ್ತವೆ ಎಂದು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಯಲಬುರ್ಗಾ ತಹಶೀಲ್ದಾರ್ ಪ್ರಕಾಶ ನಾಶಿ ಮಾತನಾಡಿ, ಪ್ರಜಾಪ್ರಭುತ್ವದ ಯಶಸ್ಸು ಜಾಗೃತ ಹಾಗೂ ಜವಾಬ್ದಾರಿಯುತ ನಾಗರಿಕರನ್ನು ಅವಲಂಬಿಸಿದೆ. ವಿದ್ಯಾರ್ಥಿಗಳು ದೇಶದ ಸಂವಿಧಾನ, ಪ್ರಜಾಪ್ರಭುತ್ವದ ವ್ಯವಸ್ಥೆ ಮತ್ತು ಆಡಳಿತದ ಕಾರ್ಯವೈಖರಿಯನ್ನು ಅರಿತುಕೊಂಡು ಭವಿಷ್ಯದ ಸಮರ್ಥ ನಾಯಕತ್ವಕ್ಕೆ ಸಿದ್ಧರಾಗಬೇಕು ಎಂದು ಹೇಳಿದರು. ಕುಕನೂರು ತಹಶೀಲ್ದಾರ್ ಬಸವರಾಜ ಬೆಣ್ಣೆಶಿರೂರು ಮಾತನಾಡಿ, ಯುವಜನತೆ ದೇಶದ ಭವಿಷ್ಯದ ಶಕ್ತಿಯಾಗಿದ್ದು, ಪ್ರಜಾಪ್ರಭುತ್ವದ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಸಮಾಜದಲ್ಲಿ ಸಮಾನತೆ, ಸಹಬಾಳ್ವೆ ಹಾಗೂ ಕಾನೂನಿನ ಗೌರವವನ್ನು ಬೆಳೆಸುವಲ್ಲಿ ವಿದ್ಯಾರ್ಥಿಗಳು ಪ್ರಮುಖ ಪಾತ್ರ ವಹಿಸಬೇಕು ಎಂದು ತಿಳಿಸಿದರು. ಕಾರ್ಯಕ್ರಮವನ್ನು ತಾಲೂಕು ಆಡಳಿತ, ತಾಲೂಕು ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಕಾನೂನು, ನ್ಯಾಯ, ಮಾನವ ಹಕ್ಕುಗಳ ಇಲಾಖೆ, ತಾಲೂಕು ಕಾನೂನು ಸೇವೆಗಳ ಸಮಿತಿ ಹಾಗೂ  ತಾಲೂಕು ವಕೀಲರ ಸಂಘದ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಕುಕನೂರು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಬೆಟದಪ್ಪ ಮಾಳೇಕೊಪ್ಪ, ವಕೀಲರ ಸಂಘದ ತಾಲೂಕು ಅಧ್ಯಕ್ಷ ಸುಭಾಷಚಂದ್ರ ಎಸ್‌. ಹೊಂಬಳ, ವಕೀಲರಾದ ಮಾಂತೇಶ ಹಾಗೂ ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ವಿದ್ಯಾರ್ಥಿ ಪ್ರತಿನಿಧಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ನಾಗಪ್ಪ ಇಟಗಿ ನಿರ್ವಹಿಸಿದರೆ, ದೇವಪ್ಪ ಇಟಗಿ ವಂದನಾರೆ​‍್ಣ ಮಾಡಿದರು. 


ಸುದ್ದಿ ಓದಿ