ಉರ್ದು ಶಿಕ್ಷಕರ ಹುದ್ದೆಗಳನ್ನು ಸೇರೆ​‍್ಡಗೊಳಿಸಿ: ಪೂರಕ ಆದೇಶಕ್ಕೆ ಮನವಿ

ಉರ್ದು ಶಿಕ್ಷಕರ ಹುದ್ದೆಗಳನ್ನು ಸೇರೆ​‍್ಡಗೊಳಿಸಿ: ಪೂರಕ ಆದೇಶಕ್ಕೆ ಮನವಿ  Include Urdu teacher posts: Request for a supplementary order


ಕೊಪ್ಪಳ 20: ರಾಜ್ಯ ಸರ್ಕಾರ ಇತ್ತೀಚೆಗೆ ಹೊರಡಿಸಿರುವ ಶಿಕ್ಷಕರ ನೇಮಕಾತಿ ಆದೇಶದಲ್ಲಿ ಉರ್ದು ಮಾಧ್ಯಮ ಶಾಲೆಗಳ ಶಿಕ್ಷಕರ ಹುದ್ದೆಗಳನ್ನು ಕಡೆಗಣಿಸಿರುವುದಕ್ಕೆ ಅಲ್ಪಸಂಖ್ಯಾತ ಸಮುದಾಯದ ಹಿರಿಯ ಮುಖಂಡ ಹಾಗೂ ಕೊಪ್ಪಳ ನಗರಸಭೆಯ ಮಾಜಿ ಅಧ್ಯಕ್ಷ ಅಮ್ಜದ್ ಪಟೇಲ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.  

ಸರ್ಕಾರ 15,000 ಶಿಕ್ಷಕರ ನೇಮಕಾತಿಗೆ ಮುಂದಾಗಿರುವುದು ಸ್ವಾಗತಾರ್ಹವಾದರೂ, ಉರ್ದು ಮಾಧ್ಯಮದ ಶಿಕ್ಷಕರ ಹುದ್ದೆಗಳನ್ನು ಸಂಪೂರ್ಣವಾಗಿ ಹೊರಗಿಟ್ಟಿರುವುದು ಮುಸ್ಲಿಂ ಸಮುದಾಯದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಅನ್ಯಾಯವಾಗಿದೆ ಎಂದು ಅವರು ಹೇಳಿದ್ದಾರೆ.  

ಸಂವಿಧಾನದ ವಿಧಿ 21ಎ ಹಾಗೂ 350ಎ ಅನ್ವಯ ಅಲ್ಪಸಂಖ್ಯಾತ ಮಕ್ಕಳಿಗೆ ಮಾತೃಭಾಷೆಯಲ್ಲಿ ಪ್ರಾಥಮಿಕ ಶಿಕ್ಷಣದ ಅವಕಾಶ ಕಲ್ಪಿಸುವುದು ಸರ್ಕಾರದ ಕರ್ತವ್ಯವಾಗಿದೆ. ಉರ್ದು ಶಿಕ್ಷಕರ ನೇಮಕಾತಿ ವಿಳಂಬವು ಈ ಹಕ್ಕಿನ ಉಲ್ಲಂಘನೆಯಾಗಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.  

ರಾಜ್ಯದ ನೂರಾರು ಉರ್ದು ಶಾಲೆಗಳಲ್ಲಿ ಶಿಕ್ಷಕರ ಕೊರತೆಯಿಂದಾಗಿ ಬಡ ಹಾಗೂ ಹಿಂದುಳಿದ ವರ್ಗಗಳ ಮಕ್ಕಳ ಶಿಕ್ಷಣದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಹಲವು ಶಾಲೆಗಳು ಮುಚ್ಚುವ ಹಂತ ತಲುಪಿವೆ ಎಂದು ಅವರು ತಿಳಿಸಿದ್ದಾರೆ.  

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಹಾಗೂ ಶಾಲಾ ಶಿಕ್ಷಣ ಸಚಿವ ಮಧು ಬಂಗಾರ​‍್ಪ ಅವರು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ, ಪ್ರಸ್ತುತ ನೇಮಕಾತಿ ಪ್ರಕ್ರಿಯೆಯಲ್ಲೇ ಉರ್ದು ಮಾಧ್ಯಮ ಶಿಕ್ಷಕರ ಹುದ್ದೆಗಳನ್ನು ಸೇರೆ​‍್ಡಗೊಳಿಸಿ ತಕ್ಷಣ ವಿಶೇಷ ಅಧಿಸೂಚನೆ ಹೊರಡಿಸಬೇಕು. ಆ ಮೂಲಕ ಉರ್ದು ಶಾಲೆಗಳ ಉಳಿವು ಹಾಗೂ ವಿದ್ಯಾರ್ಥಿಗಳ ಭವಿಷ್ಯವನ್ನು ರಕ್ಷಿಸಬೇಕು ಎಂದು ಅಮ್ಜದ್ ಪಟೇಲ್ ಒತ್ತಾಯಿಸಿದ್ದಾರೆ.