ಗಾಂಧೀಜಿ ಮತ್ತು ಶಾಸ್ತ್ರೀಜಿಯವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ
ಗದಗ, ಅ.2 ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ?ಜಿ ಅವರ ಆದರ್ಶ, ತತ್ವಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಹೇಳಿದರು.
ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ನಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಮಹಾತ್ಮ ಗಾಂಧೀಜಿ ಅವರ 157ನೇ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ?ಜಿ ಅವರ 122ನೇ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಗಾಂಧೀಜಿ ಮತ್ತು ಶಾಸ್ತ್ರಿ?ಜಿ ಅವರ ಜೀವನಶೈಲಿ ವಿಭಿನ್ನವಾಗಿದ್ದರೂ, ಸರಳತೆ, ಸತ್ಯ, ಅಹಿಂಸೆ ಹಾಗೂ ಸಮಾಜದ ಪ್ರತಿಯೊಬ್ಬರ ಗಾಂಧೀಜಿ ಮತ್ತು ಶಾಸ್ತ್ರೀಜಿಯವರ ಸ್ಪಂದಿಸುವುದು ಅವರ ಮೂಲ ತತ್ವಗಳಾಗಿದ್ದವು. ಸಾರ್ವಜನಿಕ ಹಾಗೂ ವೃತ್ತಿಪರ ಜೀವನದಲ್ಲಿ ಯಾವುದೇ ನಿರ್ಧಾರ ಕೈಗೊಳ್ಳುವಾಗ ಸಮಾಜದ ದುರ್ಬಲ ವರ್ಗದವರನ್ನು ನೆನಪಿಸಿಕೊಳ್ಳುವ ಗಾಂಧೀಜಿ ಅವರ ತತ್ವವನ್ನು ಅನುಸರಿಸಬೇಕು ಎಂದು ಹೇಳಿದರು.
‘ನಾನು, ನನ್ನದು’ ಎಂಬ ಸಂಕುಚಿತ ಮನೋಭಾವದಿಂದ ದೂರವಾಗಿ ‘ನಾವು, ನಮ್ಮದು’ ಎಂಬ ಸಾಮೂಹಿಕ ಮನೋಭಾವ ಬೆಳೆಸಿಕೊಳ್ಳಬೇಕು. ಪರಸ್ಪರ ಸಹಕಾರ, ಸಹೋದರತ್ವ ಹಾಗೂ ವಿನಮ್ರತೆಯಿಂದ ಸಮಾಜದಲ್ಲಿ ಸೌಹಾರ್ದತೆ ಬೆಳೆಸಬಹುದು ಎಂದರು.