ಕೋವಿಡ್ ಪ್ರಕರಣ ಹೆಚ್ಚಳ: ಲಾಕ್ ಡೌನ್ ಕಟ್ಟುನಿಟ್ಟಾಗಿ ಪಾಲಿಸಲು ಮುಖ್ಯಮಂತ್ರಿ ಮನವಿ
ಬೆಂಗಳೂರು,
ಏಪ್ರಿಲ್ 5, ಕೋವಿಡ್ 19 ಪ್ರಕರಣಗಳ ಸಂಖ್ಯೆ ಕ್ಷಿಪ್ರವಾಗಿ
ಏರಿಕೆಯಾಗುತ್ತಿರುವ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿರುವ ಮುಖ್ಯಮಂತ್ರಿಗಳು ರಾಜ್ಯದ
ಜನತೆ ಲಾಕ್ ಡೌನ್ ಅನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಮನವಿ ಮಾಡಿದ್ದಾರೆ.ಈ
ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ವಿಶ್ವದಾದ್ಯಂತ “ಕೋವಿಡ್ - 19”
ಸೋಂಕಿನಿಂದ ಉಂಟಾಗುತ್ತಿರುವ ಹಾನಿ ಎಲ್ಲರಿಗೂ ತಿಳಿದಿದೆ. ಪ್ರಧಾನ ಮಂತ್ರಿ ನರೇಂದ್ರ
ಮೋದಿ ಅವರು ಜನರ ಜೀವ ರಕ್ಷಣೆಗಾಗಿ ದೇಶಾದ್ಯಂತ ಏಪ್ರಿಲ್ 14 ರವರೆಗೆ ಲಾಕ್‍ಡೌನ್
ಘೋಷಣೆ ಮಾಡಿದ್ದಾರೆ.ನಮ್ಮ ರಾಜ್ಯದಲ್ಲಿಯೂ ಸಹ ಬೀದರ್, ಮೈಸೂರು, ಮಂಗಳೂರು, ಬೆಂಗಳೂರು
ನಗರ, ಕಲಬುರಗಿ ಜಿಲ್ಲೆಗಳಲ್ಲಿ ವೈರಸ್ ಪೀಡಿತರ ಸಂಖ್ಯೆ ದಿನೇ ದಿನೇ ಗಣನೀಯವಾಗಿ
ಹೆಚ್ಚುತ್ತಿದೆ. ಈ ವೈರಸ್ ನಿಯಂತ್ರಣಕ್ಕಾಗಿ ಗಡಿ ಪ್ರದೇಶಗಳನ್ನು ಮುಚ್ಚುವುದು,
ಸಾರ್ವಜನಿಕವಾಗಿ ಹೆಚ್ಚು ಹೆಚ್ಚು ಓಡಾಡುವಂತಹ ಪ್ರದೇಶಗಳಿಗೆ ನಿರ್ಬಂಧಗಳನ್ನು
ವಿಧಿಸಿರುವುದು, ಧಾರ್ಮಿಕ ಸ್ಥಳಗಳಲ್ಲಿ ಜನರು ಸೇರದಂತೆ ನಿರ್ಬಂಧಿಸುವುದರ ಜೊತೆಗೆ
ಕೊರೋನಾ ವೈರಸ್ ಹರಡುವಿಕೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಸರ್ಕಾರವು ಹಲವಾರು
ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ.
ರಾಜ್ಯದ ಜನತೆ ಲಾಕ್ ಡೌನ್ ನ ಹಿಂದಿನ
ಆಶಯವನ್ನು ಹಾಗೂ ಲಾಕ್ ಡೌನ್ ಉಲ್ಲಂಘನೆಯಿಂದ ದೇಶಕ್ಕೆ ಎದುರಾಗಬಹುದಾದ ಅಪಾಯವನ್ನು
ಅರಿತುಕೊಂಡು ಕಟ್ಟುನಿಟ್ಟಾಗಿ ಲಾಕ್ ಡೌನ್ ಆದೇಶ ಪಾಲಿಸಬೇಕಾಗಿದೆ.” ಎಂದು ಅವರು
ಹೇಳಿದ್ದಾರೆ.ಪಾಶ್ಚಿಮಾತ್ಯ ದೇಶಗಳಲ್ಲಿ ಈಗಾಗಲೇ ಕೋವಿಡ್-19 ನಿಯಂತ್ರಣಕ್ಕೆ ಸಿಗದ
ಸ್ಥಿತಿ ತಲುಪಿದೆ. ಪ್ರಸ್ತುತ ಮಾನ್ಯ ಪ್ರಧಾನ ಮಂತ್ರಿಯವರು ಸೂಚಿಸಿರುವ
ದೇಶವ್ಯಾಪ್ತಿ ಲಾಕ್‍ಡೌನ್ ಅವಧಿಯು ಏಪ್ರಿಲ್ 14 ರಂದು ಮುಕ್ತಾಯಗೊಳ್ಳುತ್ತಿದ್ದು, ಈ
ಲಾಕ್‍ಡೌನನ್ನು ವಿಸ್ತರಿಸಬೇಕೋ ಬೇಡವೋ ಎಂಬ ಬಗ್ಗೆ ಕೂಲಂಕುಷವಾಗಿ ಪರಿಶೀಲಿಸಿ ಮುಂದಿನ
ಕ್ರಮ ತೆಗೆದುಕೊಳ್ಳಬೇಕಾಗುತ್ತದೆ. ಆದುದರಿಂದ ಈ ಕುರಿತಂತೆ ಸಲಹೆ ಸೂಚನೆಗಳನ್ನು
ನೀಡುವಂತೆ ಮುಖ್ಯಮಂತ್ರಿಗಳು ಮನವಿ ಮಾಡಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 