ಬಳ್ಳಾರಿ

ಗ್ರಾಮ ಪಂಚಾಯಿತಿ ಪದಾಧಿಕಾರಿಗಳ ಗೌರವಧನ ಹೆಚ್ಚಳ

ಗ್ರಾಮ ಪಂಚಾಯಿತಿ ಪದಾಧಿಕಾರಿಗಳ ಗೌರವಧನ ಹೆಚ್ಚಳ

ಬಳ್ಳಾರಿ, 19: ಕರ್ನಾಟಕದ ಎಲ್ಲಾ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರ ಮಾಸಿಕ ಗೌರವಧನವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸಕರ್ಾರದ ಹೆಚ್ಚಳ ಮಾಡಿ ಭಾನುವಾರ ಆದೇಶ ಜಾರಿ ಮಾಡಿದೆ.

ವಿಧಾನಪರಿಷತ್ ಸದಸ್ಯ ವೈ.ಎಂ. ಸತೀಶ್ ಅವರು ಈ ಕುರಿತು ಸರ್ಕಾರಕ್ಕೆ 2022ರ ಫೆಬ್ರವರಿ 18 ರಂದು ಪತ್ರ ಬರೆದು, ಸದನದಲ್ಲಿ ವಿಷಯ ಪ್ರಸ್ತಾಪಿಸಿ ಗ್ರಾಮ ಪಂಚಾಯಿತಿ ಸದಸ್ಯರ ಗೌರವಧನ ಹೆಚ್ಚಳ ಮಾಡಲು ಕೋರಿ ಸರ್ಕಾರದ ಗಮನ ಸೆಳೆದಿದ್ದನ್ನು ಸ್ಮರಿಸಬಹುದು. ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ ಜಂಟಿ ಕಾರ್ಯದರ್ಶಿ  ಎಂ.ಎನ್. ಬಾನೊಳ್ಳಿ ಅವರು ಆದೇಶ ಜಾರಿ ಮಾಡಿದ್ದು, ಆರ್ಥಿಕ ಇಲಾಖೆ ಅನುಮೋದನೆ ನೀಡಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಹೊಸ ಆದೇಶದ ಪ್ರಕಾರ ಗ್ರಾಮ ಪಂಚಾಯಿತಿ ಅಧ್ಯಕ್ಷರಿಗೆ 6 ಸಾವಿರ, ಉಪಾಧ್ಯಕ್ಷರಿಗೆ 4 ಸಾವಿರ ಮತ್ತು ಸದಸ್ಯರುಗಳಿಗೆ ಮಾಸಿಕ 2 ಸಾವಿರ ಗೌರವಧನ ನಿಗಧಿಯಾಗಿದೆ. ವಿಧಾನಪರಿಷತ್ ಸದಸ್ಯ ವೈ.ಎಂ. ಸತೀಶ್ ಅವರು ಮಾತನಾಡಿ, ಸ್ಥಳೀಯ ಸಂಸ್ಥೆಗಳ ಚುನಾವಣೆಯ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರ ಸಂಕಷ್ಟಗಳನ್ನು ಗಮನಿಸಿ, ಅವರ ಮಾಸಿಕ ಗೌರವಧನ ಹೆಚ್ಚಳಕ್ಕೆ ಸರ್ಕಾರ ಮತ್ತು ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಸಚಿವರಲ್ಲಿ ಮನವಿ ಮಾಡಿದೆ. ಈ ನಿಟ್ಟಿನಲ್ಲಿ ಸಕಾರಾತ್ಮಕವಾಗಿ ಸ್ಪಂದಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗೌರವಧನವನ್ನು ಹೆಚ್ಚಳ ಮಾಡಿರುವುದು ಸ್ವಾಗತಾರ್ಹ, ಸರ್ಕಾರಕ್ಕೆ ಕೃತಜ್ಞತೆಗಳನ್ನು ಸಲ್ಲಿಸುವೆ ಎಂದು ಸುದ್ದಿಗಾರರಿಗೆ ತಿಳಿಸಿದರು 

ಸುದ್ದಿ ಓದಿ