ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಮಾಡಿ ಆದಾಯ ಹೆಚ್ಚಿಸಿಕೊಳ್ಳಿ - ಸಂಸದ ಹಿಟ್ನಾಳ
Increase income by adding value to agricultural products - MP Hitnala
ಕೊಪ್ಪಳ 18 : ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ (ಪಿಎಂಎಫ್‌ಎಂಇ) ಯೋಜನೆಯಡಿ ಸೌಲಭ್ಯ ಪಡೆದು ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಮಾಡಿ ರೈತರು ತಮ್ಮ ಆದಾಯವನ್ನು ಹೆಚ್ಚಿಸಿಕೊಳ್ಳಬೇಕೆಂದು ಕೊಪ್ಪಳ ಸಂಸದರಾದ ಕೆ.ರಾಜಶೇಖರ ಬಸವರಾಜ ಹಿಟ್ನಾಳ ಹೇಳಿದರು.
ಅವರು ಗುರುವಾರ ಕೊಪ್ಪಳ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಜಿಲ್ಲಾಡಳಿತ, ಜಿಲಾ ಪಂಚಾಯತ್ ಕೊಪ್ಪಳ, ಕೆಪೆಕ್ ಲಿಮಿಟೆಡ್, ಬೆಂಗಳೂರು. ಆತ್ಮ ಯೋಜನೆ, ಕೃಷಿ ಇಲಾಖೆ, ಕೊಪ್ಪಳ ಮತ್ತು ಕೃಷಿ ತಂತ್ರಜ್ಞರ ಸಂಸ್ಥೆ, ಕೊಪ್ಪಳ ಇವರ ಜಂಟಿ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದ್ದ ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ (ಪಿಎಂಎಫ್‌ಎಂಇ) ಯೋಜನೆಯ ಜಿಲ್ಲಾ ಮಟ್ಟದ ಅರಿವು ಮೂಡಿಸುವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ರೈತರು ದೇಶದ ಬೆನ್ನೆಲು ಎಂದು ಕರೆಯುತ್ತೇವೆ. ರೈತರು ಬೆಳೆದ ಬೆಳೆಗಳಿಗೆ ಕಡಿಮೆ ಆದಾಯ ಸಿಗುತ್ತಿದೆ. ರೈತರು ಮಾರಾಟ ಮಾಡುವ ಬೆಳೆಗಳನ್ನು ಕಂಪನಿಯವರು ಬ್ರ್ಯಾಡಿಂಗ್ ಮಾಡಿ ರೈತರಿಗಿಂತ ಹೆಚ್ಚು ಲಾಭ ಪಡೆದುಕೊಳ್ಳುತ್ತಿದ್ದಾರೆ. ರೈತರು ಕಷ್ಟಪಟ್ಟು ಬೆಳೆಯುವ ಬೆಳೆಗಳನ್ನು ಬ್ರ್ಯಾಡಿಂಗ್ ಮಾಡಿ ಮಾರಾಟ ಮಾಡುವ ಮೂಲಕ ನೇರವಾಗಿ ನೀವೆ ಲಾಭ ಪಡೆದುಕೊಳ್ಳಬೇಕು ಎಂದು ಕೇಂದ್ರ ಸರ್ಕಾರವು ಪಿಎಂಎಫ್‌ಎಂಇ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯಡಿ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ರೈತರಿಗೆ ರೂ. 30 ಲಕ್ಷದವರೆಗೆ ಸಾಲ ಸೌಲಭ್ಯದೊಂದಿಗೆ ರೂ. 15 ಲಕ್ಷದವರೆಗೆ ಸಹಾಯಧನವು ಸಿಗಲಿದ್ದು, ರೈತರು ಇದರ ಸದುಪಯೋಗ ಪಡೆದುಕೊಂಡು ತಮ್ಮ ಬೆಳೆಗಳ ಮಾಲ್ಯವರ್ಧನೆ ಮಾಡಿ ಹೆಚ್ಚು ಲಾಭ ಪಡೆದುಕೊಳ್ಳಬೇಕು ಎಂದರು.
ಪಿಎಂಎಫ್‌ಎಂಇ ಯೋಜನೆಯಡಿ ರೈತರು ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳನ್ನು ಪ್ರಾರಂಭಿಸಿ, ಇದರಿಂದ ಇತರರಿಗೆ ಉದ್ಯೋಗ ನೀಡಬಹುದು ಎಂದು ಹೇಳಿದರು. ಜಿಲ್ಲಾಧಿಕಾರಿ ಡಾ.ಸುರೇಶ ಬಿ. ಇಟ್ನಾಳ ಅವರು ಮಾತನಾಡಿ ಪಿಎಂಎಫ್‌ಎಂಇ ಯೋಜನೆಯ ಸದುಪಯೋಗವನ್ನು ರೈತರು ಪಡೆದುಕೊಳ್ಳಬೇಕು. ಜಿಲ್ಲೆಯಲ್ಲಿರುವ ಸ್ವ ಸಾಹಯ ಸಂಘಗಳನ್ನು ಈ ಯೋಜನೆಯಡಿ ತೊಡಗಿಸಿಕೊಳ್ಳಲು ಅವಕಾಶವಿದ್ದು, ಈ ನಿಟ್ಟಿನಲ್ಲಿ ಎಲ್ಲರೂ ಕಾರ್ಯ ಪ್ರವೃತ್ತರಾಗಿ ಜಿಲ್ಲೆಯನ್ನು ಅಭಿವೃದ್ಧಿಯತ್ತ ಕೊಂಡೊಯ್ಯೋಣ ಎಂದರು.
ಕೊಪ್ಪಳ ಜಿಲ್ಲೆಯಲ್ಲಿ ತೋಟಗಾರಿಕೆ ಮತ್ತು ಕೃಷಿಗೆ ಪೂರಕವಾಗಿರುವಂತಹ ಅವಕಾಶಗಳಿವೆ. ನಮ್ಮ ಜಿಲ್ಲೆಯಲ್ಲಿ ಸುಮಾರು 4.5 ಸಾವಿರ ಹೆಕ್ಟರ್ ಪ್ರದೇಶದಲ್ಲಿ ಮಾವು ಬೆಳೆಯಲಾಗುತ್ತಿದೆ. ನಮ್ಮ ಜಿಲ್ಲೆಯಲ್ಲಿ ಬೆಳೆಯುವ ತೋಟಗಾರಿಕೆ ಬೆಳೆಗಳು ಹಾಗೂ ಸಿರಿಧಾನ್ಯಗಳನ್ನು ಮೌಲ್ಯವರ್ಧನೆ, ಬ್ರ್ಯಾಂಡಿಂಗ್ ಮಾಡಿ ಮಾರುಕಟ್ಟೆಗೆ ತರುವುದಕ್ಕೂ ಸಾಕಷ್ಟು ಅವಕಾಶಗಳಿವೆ. ಇದುವರೆಗೆ ಜಿಲ್ಲೆಯಲ್ಲಿ ಸುಮಾರು 178 ಫಲಾನುಭವಿಗಳು ಪಿಎಂಎಫ್‌ಎಂಇ ಯೋಜನೆಯ ಲಾಭವನ್ನು ಪಡೆದುಕೊಂಡಿದ್ದಾರೆ. ಮುಂದಿನ ಎರಡು ತಿಂಗಳಲ್ಲಿ 300 ಜನರಿಗೆ ಈ ಯೋಜನೆಯನ್ನು ವಿಸ್ತರಣೆ ಮಾಡಬೇಕು. ಇಂತಹ ಕಾರ್ಯಕ್ರಮವನ್ನು ಕೊಪ್ಪಳ ಜಿಲ್ಲೆಯಲ್ಲಿ ಆಯೋಜಿಸಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಕೆ. ಶ್ರೀನಿವಾಸ ಗುಪ್ತಾ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರೆಡ್ಡಿ ಶ್ರೀನಿವಾಸ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಕೃಷಿ ಇಲಾಖೆ ಎಲ್.ಸಿದ್ದೇಶ್ವರ, ಗಂಗಾವತಿ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥರು ಮತ್ತು ಹಿರಿಯ ವಿಜ್ಞಾನಿ ರಾಘವೇಂದ್ರ ಎಲಿಗಾರ, ಕೊಪ್ಪಳ ಕೃಷಿ ವಿಸ್ತರಣಾ ಶಿಕ್ಷಣದ ಕೇಂದ್ರದ ಮುಖ್ಯಸ್ಥರು ಮತ್ತು ವಿಜ್ಞಾನಿ ಎಂ.ವಿ ರವಿ, ಲೀಡ್ ಬ್ಯಾಂಕ್ ಮ್ಯಾನೆಜರ್ ಮಾರುತಿ, ಕೃಷಿಕ ಸಮಾಜದ ವಿರೂಪಣ್ಣ ನವೋದಯ ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ರೈತರು ಸೇರಿದಂತೆ ಇತರರು ಉಪಸ್ಥಿತರಿದ್ದರು.
ಜಿಲ್ಲಾ ಮಟ್ಟದ ಕೃಷಿ ಉತ್ಪನ್ನ ಪ್ರದರ್ಶನ ಮಾರಾಟ ಮಳಿಗೆಗಳಿಗೆ ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಕೆ. ಶ್ರೀನಿವಾಸ ಗುಪ್ತಾ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರೆಡ್ಡಿ ಶ್ರೀನಿವಾಸ, ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸೇರಿದಂತೆ ಇತರೆ ಅಧಿಕಾರಿಗಳು ಭೇಟಿ ಮಾಡಿ, ವಿವಿಧ ಸ್ಥಳೀಯ ಉತ್ಪನ್ನಗಳ ಬ್ರ್ಯಾಂಡಿಂಗ್ ಮಾದರಿಗಳನ್ನು ವೀಕ್ಷಣೆ ಮಾಡಿದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 