ರಾಜಸ್ತಾನದ ಮಾಲ್ಪುರದಲ್ಲಿ ಅನಿರ್ದಿಷ್ಟಾವಧಿ ಕರ್ಪ್ಯೂ
ಜೈಪುರ, ಅಕ್ಟೋಬರ್ 9: ಶ್ರೀರಾಮನ 'ಬರಾತ್' (ವಿವಾಹ ಮೆರವಣಿಗೆ) ಯಲ್ಲಿ ಕಲ್ಲು ತೂರಾಟ ನಡೆದು ಉದ್ವಿಗ್ನತೆ ಉಂಟಾದ ಪರಿಣಾಮ ರಾಜಸ್ಥಾನದ ಟೋಂಕ್ ಜಿಲ್ಲೆಯ ಮಾಲ್ಪುರದಲ್ಲಿ ಬುಧವಾರ ಮುಂಜಾನೆ ಅನಿರ್ದಿಷ್ಟಾವಧಿ ಕರ್ಪ್ಯೂ ವಿಧಿಸಲಾಯಿತು. ಬೆಳಗ್ಗೆ 5 ಗಂಟೆಗೆ ಜಿಲ್ಲಾಧಿಕಾರಿ ಕೆ.ಕೆ.ಶರ್ಮಾ ಅವರು ಕರ್ಪ್ಯೂ ಹೇರಿದ್ದಾರೆ. ಮಾತ್ರವಲ್ಲ ಅಕ್ಟೋಬರ್ 10ರವರೆಗೆ ಇಂಟರ್ ನೆಟ್ ಸೇವೆಯನ್ನು ಸ್ಥಗಿತಗೊಳಿಸಿದ್ದಾರೆ. ನಿನ್ನೆ, ಭಗವಾನ್ ರಾಮನ ವಿವಾಹ ಮೆರವಣಿಗೆಯಲ್ಲಿ ಜನರ ಗುಂಪೊಂದು ಕಲ್ಲು ತೂರಾಟ ನಡೆಸಿತ್ತು. ಮಾತ್ರವಲ್ಲ ರಾಕ್ಷಸ ರಾಜ ರಾವಣನ ಪ್ರತಿಮೆಯನ್ನು ಸುಡಲು ಈ ತಂಡ ಅವಕಾಶ ನೀಡಲಿಲ್ಲ ಎನ್ನಲಾಗಿದೆ. ಶಾಸಕ ಕನಹಿಯಲಾಲ್ ಅವರು ನಿನ್ನೆ ರಾತ್ರಿ ಪೊಲೀಸ್ ಠಾಣೆ ಎದುರು ಧರಣಿ ನಡೆಸಿದರು. ಪೊಲೀಸರು ಪ್ರತಿಭಟನಕಾರರನ್ನು ಚದುರಿಸಲು ಪ್ರಯತ್ನಿಸಿದರು. ಕಾನೂನು ಸುವ್ಯವಸ್ಥೆ ಕಾಪಾಡಲು ಹೆಚ್ಚಿನ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ. ಜಿಲ್ಲಾಡಳಿತ ಬೆಳಗ್ಗಿನ ಜಾವ 4 ಗಂಟೆ ಸುಮಾರಿಗೆ ರಾವಣನ ಪ್ರತಿಕೃತಿಯನ್ನು ದಹಿಸಿತು. ಆತಂಕ ಮತ್ತು ಗೊಂದಲ ಸೃಷ್ಟಿಸಲು ಕೆಲವರು ಹಳೆಯ ಗಲಭೆಗಳ ಫೋಟೋಗಳನ್ನು ವಾಟ್ಸಾಪ್ ಮೂಲಕ ಹಂಚಿಕೊಂಡಿದ್ದಾರೆ. ಆದ್ದರಿಂದ ಇಂಟರ್ನೆಟ್ ಸೇವೆಯನ್ನು ರದ್ದುಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 