ಶ್ರೀ ಮಹಾಲಕ್ಷ್ಮೀ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ಶ್ರೀ ಮಹಾಲಕ್ಷ್ಮೀ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ  Independence Day Celebration at Sri Mahalakshmi Para Medical College

ನೇಸರಗಿ, ಆ.16: ಸಮೀಪದ ಮಲ್ಲಾಪುರ ಕೆ.ಎನ್‌. ಗ್ರಾಮದ ಶ್ರೀ ಮಹಾಲಕ್ಷ್ಮೀ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.  ಕಾರ್ಯಕ್ರಮದ ಅಂಗವಾಗಿ ಕಾಲೇಜಿನ ಆವರಣದಲ್ಲಿ ಧ್ವಜಾರೋಹಣ ನೆರವೇರಿಸಿ, ಸ್ವಾತಂತ್ರ್ಯೋತ್ಸವದ ಮಹತ್ವವನ್ನು ಸ್ಮರಿಸಲಾಯಿತು. ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರ ತ್ಯಾಗ, ಬಲಿದಾನಗಳನ್ನು ಸ್ಮರಿಸಿ ವಿದ್ಯಾರ್ಥಿಗಳಿಗೆ ದೇಶಭಕ್ತಿ ಹಾಗೂ ರಾಷ್ಟ್ರೀಯ ಏಕತೆಯ ಸಂದೇಶ ನೀಡಲಾಯಿತು.  ಕಾರ್ಯಕ್ರಮದಲ್ಲಿ ಕಾಲೇಜಿನ ಅಧ್ಯಕ್ಷ ಡಾ. ಪ್ರಕಾಶ ಹಳ್ಯಾಳ, ಕಾಲೇಜಿನ ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.