ಅಥಣಿ ಶುಗರ್ಸ್ ಕಾರ್ಖಾನೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ
Independence Day celebrations at Athani Sugars factory
ಕಾಗವಾಡ 15: ತಾಲೂಕಿನ ಕೆಂಪವಾಡದ ಅಥಣಿ ಶುಗರ್ಸ್ ಕಾರ್ಖಾನೆಯ ಆವರಣದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯ ನಿಮಿತ್ಯವಾಗಿ ಶುಕ್ರವಾರ ದಿ. 15 ರಂದು ಮಾಜಿ ಸಚಿವರು ಹಾಗೂ ಕಾರ್ಖಾನೆಯ ಅಧ್ಯಕ್ಷ ಶ್ರೀಮಂತ ಪಾಟೀಲ ಅವರು ಧ್ವಜಾರೋಹಣ ನೆರವೇರಿಸಿ, ರಾಷ್ಟ್ರಧ್ವಜಕ್ಕೆ ಗೌರವ ನಮನವನ್ನು ಸಲ್ಲಿಸಿ, ಸೆಕ್ಯೂರಿಟಿ ವಿಭಾಗ ಹಾಗೂ ಕೆಂಪವಾಡ ಹೈಸ್ಕೂಲ್‌ನ ವಿದ್ಯಾರ್ಥಿಗಳಿಂದ ಗೌರವ ವಂದನೆ ಸ್ವೀಕರಿಸಿ, ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಕೆಂಪವಾಡ ಹೈಸ್ಕೂಲ್‌ನ ವಿದ್ಯಾರ್ಥಿಗಳು ಹಾಗೂ ಕಾನ್ವೆಂಟ್ ಶಾಲೆಯ ಪುಟ್ಟ ಮಕ್ಕಳು ಮತ್ತು ಸ್ಥಳೀಯ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮವನ್ನು ನೆರವೇರಿಸಿದರು.
ಈ ಸಮಯದಲ್ಲಿ ಕಳೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳಿಸಿದ ಕೆಂಪವಾಡ ಹಾಗೂ ಶಿನ್ನಾಳ ಶಾಲೆಯ ವಿದ್ಯಾರ್ಥಿಗಳಿಗೆ ಹಾಗೂ ಪಥ ಸಂಚಲನ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿಸಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಈ ವೇಳೆ ಸ್ಥಳೀಯ ಮುಖಂಡರು, ಕಾರ್ಖಾನೆಯ ಎಲ್ಲ ವಿಭಾಗಗಳ ಮ್ಯಾನೇಜರ್‌ಗಳು, ಅಧಿಕಾರಿಗಳು, ಇಂಜಿನಿಯರ್‌ಗಳು, ವಿದ್ಯಾರ್ಥಿಗಳು, ಪುಟ್ಟ ಮಕ್ಕಳು ಹಾಗೂ ಕಾರ್ಮಿಕ ಬಂಧುಗಳು ಸೇರಿದಂತೆ ಸಾರ್ವಜನಿಕರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 