ಸ್ವಾತಂತ್ರ್ಯೋತ್ಸವ ಆಚರಣೆ ಪ್ಲಾಸ್ಟಿಕ್ ಮುಕ್ತವಾಗಿರಲಿ : ಅಪರ ಜಿಲ್ಲಾಧಿಕಾರಿ
Independence Day celebrations should be plastic-free: Additional Deputy Commissioner
ಲೋಕದರ್ಶನ ವರದಿ
ಕಾರವಾರ 29: ಆಗಸ್ಟ್ 15 ರಂದು ನಡೆಯುವ ಜಿಲ್ಲಾ ಮಟ್ಟದ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಜಿಲ್ಲೆಯಾದ್ಯಂತ ಅತ್ಯಂತ ಅರ್ಥಪೂರ್ಣವಾಗಿ ಮತ್ತು ವ್ಯವಸ್ಥಿತ ರೀತಿಯಲ್ಲಿ ಮತ್ತು ಕಾರ್ಯಕ್ರಮದಲ್ಲಿ ಪ್ಲಾಸ್ಟಿಕ್ ವಸ್ತುಗಳನ್ನು ಬಳಕೆ ಮಾಡದೇ ಸಂಪೂರ್ಣ ಪ್ಲಾಸ್ಟಿಕ್ ಮುಕ್ತವಾಗಿ ಸ್ವಾತಂತ್ರ್ಯೋತ್ಸವವನ್ನು ಆಚರಿಸಿಲು ಅಗತ್ಯವಿರುವ ಎಲ್ಲಾ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಸೂಚಿಸಿದರು. ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಆಚರಣೆಯ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಆಗಸ್ಟ್ 15 ರಂದು ಕಾರವಾರದ ಪೊಲೀಸ್ ಪೆರೇಡ್ ಮೈದಾನದಲ್ಲಿ ಜರುಗುವ ಜಿಲ್ಲಾ ಮಟ್ಟದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದ ಕುರಿತು ಆಹ್ವಾನ ಪತ್ರಿಕೆಗಳನ್ನು ಶಿಷ್ಠಾಚಾರದಂತೆ ಮುದ್ರಿಸಿ, ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳಿಗೆ ತಲುಪಿಸಬೇಕು. ಕಾರ್ಯಕ್ರಮದಲ್ಲಿ ಪೊಲೀಸ್, ಗೃಹರಕ್ಷಕ, ಅರಣ್ಯ, ಎನ್.ಸಿ.ಸಿ., ಸ್ಕೌಟ್ಸ್ ಮತ್ತು ಗೈಡ್ಸ್ ತಂಡಗಳಿಂದ ಆಕರ್ಷಕ ಪಥ ಸಂಚಲನ ಏರಿ್ಡಸುವಂತೆ ಹಾಗೂ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸುವಂತೆ ಮತ್ತು ಕಾರ್ಯಕ್ರಮದ ಯಾವುದೇ ಸಂದರ್ಭದಲ್ಲಿ ಶಿಷ್ಠಾಚಾರದ ಉಲ್ಲಂಘನೆ ಆಗದಂತೆ ಎಚ್ಚರವಹಿಸುವಂತೆ ಸೂಚಿಸಿದರು.
ಆಗಸ್ಟ್ 15 ರಂದು ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಎಲ್ಲಾ ಅಧಿಕಾರಿಗಳು ಸಿಬ್ಬಂದಿಗಳು ದ್ವಜಾರೋಹಣ ನೆರವೇರಿಸಿ ಸ್ವಾತಂತ್ರ್ಯೋತ್ಸವ ಆಚರಣೆಯನ್ನು ನಡೆಸುವಂತೆ ಸೂಚಿಸಿದ ಅಪರ ಜಿಲ್ಲಾಧಿಕಾರಿಗಳು, ಎಲ್ಲಾ ಸರಕಾರಿ ಕಟ್ಟಡಗಳ ಮೇಲೆ ವಿದ್ಯುತ್ ದೀಪಾಲಂಕಾರವನ್ನು ಮಾಡುವಂತೆ ತಿಳಿಸಿದರು. ಜಿಲ್ಲೆಯಾದ್ಯಂತ ಪ್ಲಾಸ್ಟಿಕ್ ಧ್ವಜಗಳ ಮಾರಾಟವಾಗದಂತೆ ಮುನ್ನೆಚ್ಚರಿಕೆ ವಹಿಸುವಂತೆ ಪರಿಸರ ಇಲಾಖೆ ಅಧಿಕಾರಿಗಳು ಮತ್ತು ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದ ಅವರು, ಪ್ಲಾಸ್ಟಿಕ್ ಧ್ವಜಗಳ ಮಾರಾಟ ಈಗಾಗಲೇ ನಿಷೇಧವಾಗಿದ್ದು ಈ ಬಗ್ಗೆ ಜಿಲ್ಲೆಯಾದ್ಯಂತ ವ್ಯಾಪಕ ರೀತಿಯಲ್ಲಿ ಅರಿವು ಮತ್ತು ಜಾಗೃತಿ ಮೂಡಿಸುವಂತೆ ತಿಳಿಸಿದರು.
ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ಆಯೋಜಿಸುವ ನಿಟ್ಟಿನಲ್ಲಿ ವಿವಿಧ ಅಧಿಕಾರಿಗಳ ನೇತೃತ್ವದಲ್ಲಿ ಹಲವು ಸಮಿತಿಗಳನ್ನು ರಚಿಸಿದ ಅಪರ ಜಿಲ್ಲಾಧಿಕಾರಿಗಳು, ಎಲ್ಲಾ ಸಮಿತಿಯ ಸದಸ್ಯರು ತಮ್ಮ ಜವಾಬ್ದಾರಿಯನ್ನು ಅರಿತು ಸಮನ್ವಯದಿಂದ , ಯಾವುದೇ ಲೋಪವಾಗದಂತೆ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು. ಜಿಲ್ಲಾ ಮಟ್ಟದ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಕಾರ್ಯಕ್ರಮದಲ್ಲಿ ಎಲ್ಲಾ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಹೊರಗುತ್ತಿಗೆ ಸಿಬ್ಬಂದಿಗಳು ಕಡ್ಡಾಯವಾಗಿ ಭಾಗವಹಿಸುವಂತೆ ಸೂಚಿಸಿದರು. ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 