ಆ.7 ರಂದು ಸ್ವಾತಂತ್ರ-್ಯದಿನಾಚರಣೆ ಪೂರ್ವಭಾವಿ ಸಿದ್ಧತಾ ಸಭೆ
ಬಳ್ಳಾರಿ 05: 75ನೇ ಸ್ವಾತಂತ್ರ-್ಯ ದಿನಾಚರಣೆಯ ಪೂರ್ವಭಾವಿ ಸಿದ್ಧತಾ ಸಭೆಯು ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆ.7 ರಂದು ಸಂಜೆ 5ಕ್ಕೆ ನಡೆಯಲಿದೆ ಎಂದು ಅಪರ ಜಿಲ್ಲಾಧಿಕಾರಿ ಪಿ.ಎಸ್.ಮಂಜುನಾಥ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಭೆಗೆ ಜಿಲ್ಲಾ ಮಟ್ಟದ ಅಧಿಕಾರಿಗಳು ಯಾವುದೇ ಪ್ರತಿನಿಧಿಯನ್ನು ನಿಯೋಜಿಸದೇ ಖುದ್ದಾಗಿ ತಾವೇ ಹಾಜರಾಗುವಂತೆ ಅವರು ತಿಳಿಸಿದ್ದಾರೆ.